Home namma chikmagalur chikamagalur ಖಾಸಗಿ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ
chikamagalurHomeLatest Newsnamma chikmagalur

ಖಾಸಗಿ ಪೆಟ್ರೋಲ್ ಬಂಕ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ದರ ಹೆಚ್ಚಳ

Share
Share

ಚಿಕ್ಕಮಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಇಂಧನ ಮಾರುಕಟ್ಟೆಯಲ್ಲಿ ಭಾರೀ ಏರುಪೇರು ಉಂಟಾಗಿದ್ದು, ಚಿಕ್ಕಮಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ. ವಿಶೇಷವಾಗಿ ಜಿಲ್ಲೆಯ ಖಾಸಗಿ ಪೆಟ್ರೋಲ್ ಬಂಕ್‌ಗಳಲ್ಲಿ ಪ್ರತಿ ಲೀಟರ್‌ಗೆ 3 ರಿಂದ 5 ರೂಪಾಯಿಗಳಷ್ಟು ದರ ಹೆಚ್ಚಳವಾಗಿದೆ.

ಪ್ರಮುಖವಾಗಿ ನಯಾರಾ ಬಂಕ್‌ಗಳಲ್ಲಿ ಪೆಟ್ರೋಲ್ ದರ 5 ರೂಪಾಯಿ ಹಾಗೂ ಡೀಸೆಲ್ ದರ 3 ರೂಪಾಯಿಯಷ್ಟು ಏರಿಕೆಯಾಗಿರುವುದು ವಾಹನ ಸವಾರರ ಜೇಬಿಗೆ ಕತ್ತರಿ ಹಾಕಿದೆ. ಪ್ರಸ್ತುತ ಇಂಧನ ಪೂರೈಕೆಯ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳಾಗಿದ್ದು, ‘ದುಡ್ಡಿದ್ದವರಿಗೆ ಮಾತ್ರ ದುನಿಯಾ’ ಎಂಬಂತಹ ಸ್ಥಿತಿ ನಿರ್ಮಾಣವಾಗಿದೆ.

ಖಾಸಗಿ ಬಂಕ್ ಮಾಲೀಕರು ಪ್ರತಿದಿನ ಬೆಳಗ್ಗೆ 11 ಗಂಟೆಯೊಳಗೆ ಹಣ ಪಾವತಿಸಿ ಇಂಡೆಂಟ್ ಸಲ್ಲಿಸಿದರೆ ಮಾತ್ರ ಇಂಧನ ಪೂರೈಕೆಯಾಗುತ್ತಿದೆ. ನಗದು ಪಾವತಿಸಿದರೆ ಮಾತ್ರ ಪೆಟ್ರೋಲ್ ಮತ್ತು ಡೀಸೆಲ್ ಲಭ್ಯವಾಗುವಂತಹ ಕಟ್ಟುನಿಟ್ಟಿನ ನಿಯಮ ಜಾರಿಗೆ ಬಂದಿದೆ.

ದರ ಏರಿಕೆಯ ಬಿಸಿ ತಟ್ಟಿದ್ದರೂ ಸಹ, ಚಿಕ್ಕಮಗಳೂರು ನಗರದಲ್ಲಿ ಸದ್ಯಕ್ಕೆ ಪೆಟ್ರೋಲ್ ಅಥವಾ ಡೀಸೆಲ್ ಅಭಾವ ಸೃಷ್ಟಿಯಾಗಿಲ್ಲ. ಸಾರ್ವಜನಿಕರು ಬಾಟಲಿ, ಡ್ರಮ್ ಗಳಲ್ಲಿ ಇಂಧನ ಸಂಗ್ರಹಿಸುವಂತಹ ಪರಿಸ್ಥಿತಿ ಕಂಡುಬಂದಿಲ್ಲ ಮತ್ತು ಬಂಕ್‌ಗಳ ಮುಂದೆ ವಾಹನಗಳ ದೀರ್ಘ ಸಾಲುಗಳೂ ಇಲ್ಲ.

ನಗರದ ಜನತೆಗೆ ಅವರ ಅಗತ್ಯಕ್ಕೆ ಅನುಗುಣವಾಗಿ ಇಂಧನ ಸುಗಮವಾಗಿ ಪೂರೈಕೆಯಾಗುತ್ತಿದ್ದು, ದರ ಏರಿಕೆಯ ನಡುವೆಯೂ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ.

Petrol and diesel prices increase at private petrol stations

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...