Home namma chikmagalur ಪೆಟ್ರೋಲ್ ಕದ್ದ ಪ್ರಕರಣ – ಇಬ್ಬರ ಬಂಧನ
namma chikmagalurchikamagalurLatest News

ಪೆಟ್ರೋಲ್ ಕದ್ದ ಪ್ರಕರಣ – ಇಬ್ಬರ ಬಂಧನ

Share
Share

ಚಿಕ್ಕಮಗಳೂರು: ಪೆಟ್ರೋನೆಟ್ ಕಂಪನಿಯ ಪೈಪ್ ಲೈನ್ ನಿಂದ ಪೆಟ್ರೋಲ್ ಕದ್ದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆಯಲಾಗಿದೆ.

ಮಂಗಳೂರಿಂದ ಬೆಂಗಳೂರಿಗೆ ಹಾದು ಹೋಗಿದ್ದ ಪೆಟ್ರೋಲಿಯಂ ಪೈಪ್ ಲೈನ್ ನಿಂದ ಗೋಣಿಬೀಡು ಠಾಣಾ ವ್ಯಾಪ್ತಿಯ ಹಿರೇಶಿಗರ ಗ್ರಾಮದ ಬಳಿ ಅಂದಾಜು ೨ ಲಕ್ಷ ಮೌಲ್ಯದ ೨೦೦೦ ಲೀಟರ್ ನಷ್ಟು ಇಂಧನ ಕಳ್ಳತನವಾಗಿರುವ ಬಗ್ಗೆ ಪೆಟ್ರೋನೆಟ್ ಎಮ್‌ಎಚ್‌ಬಿ ಲಿಮಿಟೆಡ್ ಮ್ಯಾನೇಜರ್ ರವೀಂದ್ರ ದೂರ ನೀಡಿದ್ದರು.

ಆರೋಪಿಗಳನ್ನು ಶೀಘ್ರ ಪತ್ತೆಮಾಡಿ ಬಂಧಿಸಲು ಗೋಣಿಬೀಡು ಪೊಲೀಸ್ ಠಾಣೆ, ಪ್ರತಾಪ್ ಪಿಎಸ್‌ಐ (ತನಿಖೆ) ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಹಿರೇಶಿಗಿರ ಗ್ರಾಮದ ವಿಜಯಕುಮಾರ್ ಹಾಗೂ ಹರ್ಷ ನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರು, ಜೀಪು, ಟಿಪ್ಪರ್ ಸೇರಿದಂತೆ ಎಂಟು ವಾಹನಗಳನ್ನು ವಶಕ್ಕೆ ಪಡೆದಿದ್ದು , ದಿನೇಶ್ ಶೆಟ್ಟಿ, ಕಿರಣ್ ಮತ್ತು ಸಹಚರರು ತಲೆಮರೆಸಿಕೊಂಡಿದ್ದಾರೆ.

ಕೃತ್ಯ ನಡೆದ ೨೪ ಗಂಟೆಗಳ ಒಳಗಾಗಿ ಆರೋಪಿಗಳನ್ನು ಪತ್ತೆ ಹಚ್ಚಿದ ಅಧಿಕಾರಿ ಸಿಬ್ಬಂದಿ ಕಾರ್ಯವೈಖರಿಯನ್ನು ಪೊಲೀಸ್ ಅಧೀಕ್ಷಕ ವಿಕ್ರಂ ಅಮಟೆ ಶ್ಲಾಘಿಸಿದ್ದಾರೆ

Petrol theft case – two arrested

 

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...