Home namma chikmagalur chikamagalur ಹಂದಿ ಬೇಟೆ: 7 ಜನರ ಬಂಧನ
chikamagalurHomeLatest Newsnamma chikmagalur

ಹಂದಿ ಬೇಟೆ: 7 ಜನರ ಬಂಧನ

Share
Share

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ ತಂಡವನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

ಕಡೂರು ಸರ್ಕಲ್‌ ಇನ್‌ಸ್ಪೆಕ್ಟ‌ರ್ ಎಂ.ರಫೀಕ್ ಅವರು ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಸ್ತಿನಲ್ಲಿದ್ದ ವೇಳೆ ಬೊಲೆರೋ ಪಿಕಪ್ ವಾಹನವನ್ನು ತಡೆದು ತಪಾಸಣೆ ನಡೆಸಿದಾ ಈ ವೇಳೆ ವಾಹನದಲ್ಲಿ ಮೂರು ಸಿಂಗಲ್ ಬ್ಯಾರಲ್ ಬಂದೂಕು ಮತ್ತು 25 ಜೀವಂತ ಗುಂಡುಗಳು ಪತ್ತೆಯಾಗಿವೆ.

ಈ ಕುರಿತು ವಿಚಾರಣೆ ನಡೆಸಿದಾಗ ಆರೋಪಿಗಳು ತಾವು ಹಂದಿ ಬೇಟೆಯಾಡಲು ಬಂದಿರುವುದಾಗಿ ಉತ್ತರಿಸಿದ್ದಾರೆ. ಶಸ್ತ್ರಾಸ್ತ್ರದ ಕುರಿತು ದಾಖಲೆ ಹಾಜರು ಪಡಿಸಲು ವಿಫಲರಾದ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲ್ಲೂಕು ಬಿದರಹಳ್ಳಿ ಗ್ರಾಮದ ಗಂಧನ್ ಜಿ.ಎಂ., ಗೌತಮ್ ಜಿ.ಎಂ., ಮೂಡಿಗೆರೆ ತಾಲ ಕುಂದೂರು ಗ್ರಾಮದ ಸಚಿನ್ ಎಸ್.ಎಂ., ಅಭಿಷೇಕ್ ಎಸ್.ಎಂ.,ಸಂಜೀವ್‌ಕುಮಾರ್, ನೂತನ ಡಿ.ಎಸ್. ಮತ್ತು ಯಗಟಿ ಹೋಬಳಿ ಮುಗಳಿಕಟ್ಟೆ ಗೇಟ್‌ನ ದೇವರಾಜ ಅವರನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸಿಂಗಟಗೆರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Pig hunting: 7 people arrested

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...