Home namma chikmagalur chikamagalur ಪೋಕ್ಸೋ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ, ₹45 ಸಾವಿರ ದಂಡ
chikamagalurHomeLatest Newsnamma chikmagalur

ಪೋಕ್ಸೋ ಪ್ರಕರಣ: ಆರೋಪಿಗೆ 7 ವರ್ಷ ಕಠಿಣ ಶಿಕ್ಷೆ, ₹45 ಸಾವಿರ ದಂಡ

Share
Share

ಚಿಕ್ಕಮಗಳೂರು: ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಚಿಕ್ಕಮಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹45 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

2025ರ ಡಿಸೆಂಬರ್ 1ರಂದು ದಾಖಲಾಗಿದ್ದ ಪ್ರಕರಣದಲ್ಲಿ ಧೂಪದಖಾನ್ ಗ್ರಾಮದ ನಾಗರಾಜ (34) ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಕಲಂ 137(2), 127(2), 65(2) ಹಾಗೂ ಪೋಕ್ಸೋ ಕಾಯ್ದೆಯ ಕಲಂ 4 ಮತ್ತು 10ರಡಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು 2026ರ ಆಗಸ್ಟ್ 5ರಂದು ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ ಶಿಕ್ಷೆ ಪ್ರಕಟಿಸಿದೆ.

ಇದೇ ವೇಳೆ, ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011ರಡಿ ಸಂತ್ರಸ್ತ ಬಾಲಕಿಗೆ ₹1 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಪ್ರಕರಣದ ತನಿಖೆಯನ್ನು ತರೀಕೆರೆ ವೃತ್ತದ ಸಿಪಿಐ ಗಿರೀಶ್ ಬಿ.ವಿ. ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಭರತ್ ಕುಮಾರ್ ವಾದ ಮಂಡಿಸಿದ್ದರು. ತನಿಖಾ ಸಹಾಯಕರಾಗಿ ಸಿದ್ಧರಾಮಪ್ಪ ಎಸ್.ಸಿ. ಹಾಗೂ ಉಮೇಶ್ ನ್ಯಾಯಾಲಯದ ಕರ್ತವ್ಯ ನಿರ್ವಹಿಸಿದ್ದರು.

ಪ್ರಕರಣದ ತನಿಖೆ ಮತ್ತು ನ್ಯಾಯಾಲಯದ ಕಾರ್ಯವೈಖರಿಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.

POCSO case: Accused gets 7 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...