ಚಿಕ್ಕಮಗಳೂರು: ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು 1,60,000 ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ದಿನಾಂಕ 19-02-2026 ರಂದು ಕೆ.ಆರ್. ವಿಜಯ್ ಕುಮಾರ್ ಎಂಬುವವರ ಮನೆಯಲ್ಲಿ ನಡೆದಿದ್ದ ಈ ಕಳ್ಳತನದ ಬಗ್ಗೆ ದಾಖಲಾಗಿದ್ದ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ವೆಂಕಟೇಶ ಮತ್ತು ಪರಶುರಾಮ ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಮತ್ತು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ರಚನೆಯಾಗಿದ್ದ ವಿಶೇಷ ತಂಡವು ತಾಂತ್ರಿಕ ಹಾಗೂ ವೈಜ್ಞಾನಿಕ ಆಯಾಮಗಳಿಂದ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಶ್ರಮಿಸಿದ ಕಡೂರು ವೃತ್ತ ನಿರೀಕ್ಷಕ ರಫೀಕ್ ಎಂ. ಮತ್ತು ಅವರ ತಂಡದ ಸಾಧನೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿದ್ದಾರೆ.
Police crack theft case arrest two accused
Leave a comment