Home Latest News ಬಲ್ಲಾಳರಾಯನ ದುರ್ಗದಲ್ಲಿ ದಾರಿ ತಪ್ಪಿದ ಚಾರಣೀಗರನ್ನು ಪತ್ತೆ ಹಚ್ಚಿದ ಪೊಲೀಸರು 
Latest NewschikamagalurCrime NewsHomenamma chikmagalur

ಬಲ್ಲಾಳರಾಯನ ದುರ್ಗದಲ್ಲಿ ದಾರಿ ತಪ್ಪಿದ ಚಾರಣೀಗರನ್ನು ಪತ್ತೆ ಹಚ್ಚಿದ ಪೊಲೀಸರು 

Share
Share

ಚಿಕ್ಕಮಗಳೂರು: ಚಾರಣಕ್ಕೆ ಹೊರಟಿದ್ದ 11 ವಿದ್ಯಾರ್ಥಿಗಳು ಕಾಡಿನಲ್ಲಿ ದಾರಿ ತಪ್ಪಿ ಮಧ್ಯರಾತ್ರಿವರೆಗೂ ಪರದಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನ ದುರ್ಗ ಪ್ರವಾಸಿ ತಾಣದಲ್ಲಿ ನಡೆದಿದೆ.

ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು, 5 ಹುಡುಗಿಯರು ಟ್ರಕ್ಕಿಂಗ್ ಬಂದಿದ್ದು, ಡ್ರೈವರ್ ಸೇರಿ 11 ಜನ ಚಾರಣಕ್ಕೆ ಹೊರಟಿದ್ದರು.

ಚಿಕ್ಕಮಗಳೂರಿನ ಬಲ್ಲಾಳರಾಯನ ದುರ್ಗಾದಲ್ಲಿ ಟಿಕೆಟ್ ಬುಕ್ ಮಾಡಿಸಿ ದಾರಿ ತಿಳಿಯದೆ ಮಂಗಳೂರಿನ ಬಂಡಾಜೆ ಮಾರ್ಗವಾಗಿ ಹತ್ತಿದ್ದರು.

ರಾಣಿಝರಿ ಕಡೆಯಿಂದ ಚಾರಣ ಆರಂಭಿಸಬೇಕಿತ್ತು. ಗೂಗಲ್ ಮ್ಯಾಪ್‌ನಲ್ಲಿ ಬಂಡಾಜೆ ಟ್ರಕ್ಕಿಂಗ್ ಎಂದು ನಮೂದಿಸಿದಾಗ ದಕ್ಷಿಣ ಕನ್ನಡ ಜಿಲ್ಲೆಯ ದಿಡಪೆ ಮಾರ್ಗ ತೋರಿಸಿದೆ. ಅಲ್ಲಿಂದ ಚಾರಣ ಆರಂಭಿಸಿದ್ದು, ಬಂಡಾಜೆ ಜಲಪಾತ ತನಕ ಹೋಗಿದ್ದಾರೆ. ವಾಪಸ್ ಬರಲು ಬಲ್ಲಾಳರಾಯನದುರ್ಗ ಮತ್ತು ರಾಣಿಝರಿ ಕಡೆಯ ಮಾರ್ಗ ಹಿಡಿದಿದ್ದಾರೆ. ಅಷ್ಟರಲ್ಲಿ ಕತ್ತಲಾಗಿದ್ದರಿಂದ ದಾರಿ ತಪ್ಪಿದ್ದಾರೆ. ನೆಟ್‌ವರ್ಕ್‌ ಇಲ್ಲದ ಕಾರಣ ಗೂಗಲ್ ಮ್ಯಾಪ್ ಕೂಡ ಕೆಲಸ ಮಾಡಿಲ್ಲ.

ಕಾಡಿನಲ್ಲಿ ದಾರಿ ತಪ್ಪಿ ಇಡೀ ಕಾಡು ಸುತ್ತಿ ವಿದ್ಯಾರ್ಥಿಗಳು ನಿತ್ರಾಣಗೊಂಡಿದ್ದರು. ವಿಷಯ ತಿಳಿದ ಮೂಡಿಗೆರೆ ತಾಲೂಕಿನ ಬಾಳೂರು ಪೊಲೀಸರು ಸಂಜೆಯಿಂದ ಮಧ್ಯರಾತ್ರಿಯ 2 ಗಂಟೆವರೆಗೂ ಕಗ್ಗತ್ತಲಿನ ಕಾಡಿನಲ್ಲಿ ಕಲ್ಲು-ಮುಳ್ಳುಗಳ ದುರ್ಗಮ ಹಾದಿಯಲ್ಲಿ 11 ಜನ ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಬಾಳೂರು ಪೊಲೀಸರ ಜೊತೆ ಮೂಡಿಗೆರೆ ಸ್ಥಳೀಯ ಯುವಕರು ಹುಡುಕಾಟಕ್ಕೆ ಕೈ ಜೋಡಿಸಿದ್ದರು. ನಿರಂತರ 6 ಗಂಟೆಗಳ ಹುಡುಕಾಟದ ಬಳಿಕ ಮಧ್ಯರಾತ್ರಿ 2 ಗಂಟೆಗೆ ಡ್ರೈವರ್ ಸೇರಿ 11 ಜನ ವಿದ್ಯಾರ್ಥಿಗಳು ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

ಚಾರಣಕ್ಕೆ ಬಂದವರಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಇದ್ದರು. ಇನ್ನೂ ಬೇರೆ ಬೇರೆ ಕಾಲೇಜುಗಳ ಹೆಸರು ಹೇಳಿದರು. ಎಲ್ಲರನ್ನೂ ವಾಹನ ಹತ್ತಿಸಿ ಚಿತ್ರದುರ್ಗಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ

Police find lost trekkers at Ballalarayana Durga

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...