Home namma chikmagalur chikamagalur ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ
chikamagalurCrime NewsHomeLatest Newsnamma chikmagalur

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

Share
Share

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ ನೇತ್ರಾವತಿ ವಿ ಮತ್ತು ತಂಡ ಮಿಂಚಿನ ದಾಳಿ ನಡೆಸಿದೆ.

ಖಚಿತ ಮಾಹಿತಿ ಮೇರೆಗೆ ಅಲರ್ಟ್ ಆದ ಪೊಲೀಸರು ಜೂಜಿನ ಅಡ್ಡೆಗೆ ಅನಿರೀಕ್ಷಿತ ಮುತ್ತಿಗೆ ಹಾಕಿದ್ದಾರೆ. ಪೊಲೀಸರ ಎಂಟ್ರಿಯಿಂದ ಕಂಗಾಲಾದ ಜೂಜುಕೋರರು ಓಡಲು ಯತ್ನಿಸಿದರಾದರೂ, ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಸುತ್ತುವರಿದು ಅಬ್ದುಲ್ ಖಾದರ್, ಸಾದತ್, ನಾಸಿರ್, ವೆಂಕಟೇಶ್ ಮತ್ತು ಅನ್ಸ‌ರ್ ಎಂಬ ಐದು ಜನ ಆರೋಪಿಗಳನ್ನು ಸ್ಥಳದಲ್ಲೇ ವಶಕ್ಕೆ ಪಡೆದು ಹೆಡೆಮುರಿ ಕಟ್ಟಿದ್ದಾರೆ.

ದಾಳಿಯ ವೇಳೆ ಜೂಜಿನ ಅಡ್ಡೆಯಿಂದ ಭಾರಿ ಪ್ರಮಾಣದ ನಗದು ಜಪ್ತಿ ಮಾಡಲಾಗಿದ್ದು, 500, 200, 100 ರೂಪಾಯಿ ಮುಖಬೆಲೆಯ ನೋಟುಗಳು ಸೇರಿದಂತೆ ಒಟ್ಟು 1,43,310 ರೂಪಾಯಿ ಹಣ ಹಾಗೂ ಜೂಜಿಗೆ ಬಳಸುತ್ತಿದ್ದ 52 ಇಸ್ಪೀಟು ಎಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸದ್ಯ ಬಂಧಿತ ಐದೂ ಜನ ಆರೋಪಿಗಳ ವಿರುದ್ಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Police raid on Andar-Bahar Avenue – Five arrested

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...