Home namma chikmagalur chikamagalur ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ‘ಪೊಲೀಸ್ ಓಟ’
chikamagalurHomeLatest Newsnamma chikmagalur

ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ‘ಪೊಲೀಸ್ ಓಟ’

Share
Share

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಹಯೋಗದಲ್ಲಿ ‘ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷವಾಕ್ಯದಡಿ ಆಯೋಜಿಸಿದ್ದ ‘ಪೊಲೀಸ್ ಓಟ’ (ಕರ್ನಾಟಕ ಪೊಲೀಸ್ ರನ್) ಸ್ಪರ್ಧೆಗೆ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಭಾನುವಾರ ಚಾಲನೆ ನೀಡಿದರು.

‘ಡ್ರಗ್ಸ್ ಮುಕ್ತ ಕರ್ನಾಟಕ’, ‘ಸೈಬರ್ ಅಪರಾಧ’ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ೧೦ ಕಿ.ಮೀ ಹಾಗೂ ೫ ಕಿ.ಮೀ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು

ಈ ಓಟದಲ್ಲಿ ಪೊಲೀಸ್ ಇಲಾಖೆ, ಎಸ್‌ಬಿಐ ಅಧಿಕಾರಿ ಸಿಬ್ಬಂದಿ, ಸಾವಿರಾರು ಮಂದಿ ವಿದ್ಯಾರ್ಥಿಗಳು, ಸರ್ಕಾರಿ, ಖಾಸಗಿ ಉದ್ಯೋಗಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳು ಭಾಗವಹಿಸಿದರು. ಈ ವೇಳೆ ಜಿಲ್ಲಾಧಿಕಾರಿ ನಾಗರಾಜ್, ಸ್ಪರ್ಧಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ಬಳಿಕ ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಿಂದ ವಿದ್ಯಾರ್ಥಿಗಳಿಂದ ಹಿರಿಯವರ ವರೆಗೆ ಎಲ್ಲರೂ ಮುಕ್ತರಾಗಿರಬೇಕು. ಈ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು. ಆಗ ಮಾತ್ರ ಸದೃಢ ಮತ್ತು ಬಲಿಷ್ಠವಾದ ಸಮಾಜವನ್ನು ಕಟ್ಟಬಹುದಾಗಿದೆ. ಯಾವುದೇ ದೇಶದ ಮಾನವ ಸಂಪನ್ಮೂಲ ಗುಣಮಟ್ಟದಿಂದ ಕೂಡಿದರೆ ಅಲ್ಲಿನ ದುಡಿಮೆ, ಉತ್ತಮ ಕೌಶಲ್ಯ ಇರಲಿದೆ. ಆಗ ದೇಶ ಅಭಿವೃದ್ಧಿ ಕಡೆ ಸಾಗಲಿದೆ. ನಮಗೆ ಒಂದು ಅವಕಾಶ ಸಿಕ್ಕಿದ್ದು, ಸದೃಢವಾಗಿದ್ದು, ದೇಶಕ್ಕೆ ಕೊಡುಗೆ ನೀಡಬಹುದಾಗಿದೆ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿ ವಿ.ಹನುಮಂತಪ್ಪ ಮಾತನಾಡಿ, ಮಾದಕ ವ್ಯಸನ ಮುಕ್ತ ಕರ್ನಾಟಕ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಾಗೂ ಎಸ್‌ಬಿಐ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಯುವ ಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರ ಇರಬೇಕು. ವ್ಯಸನ ಮುಕ್ತ ಭಾರತ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಾವೆಲ್ಲರೂ ಕೈ ಜೋಡಿಸೋಣ ಎಂದು ಕೆರೆ ನೀಡಿದರು.

ಈ ವೇಳೆ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಾಯಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯಾನಿರ್ವಹಣಾಧಿಕಾರಿ ಕೀರ್ತನಾ, ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕ ಟಿ.ಎಂ.ರವಿ ಸೇರಿದಂತೆ ಮೊದಲಾದವರಿದ್ದರು.

‘Police run’ in the district stadium premises

 

 

Share

Leave a comment

Leave a Reply

Your email address will not be published. Required fields are marked *

Don't Miss

ಬಾಳೆಹೋನ್ನೂರಿನಲ್ಲಿ ಲಾಠಿ ಚಾರ್ಜ್ ಖಂಡಿಸಿ ಬೃಹತ್‌ ಪ್ರತಿಭಟನೆ

ಬಾಳೆಹೋನ್ನೂರು: ಕಾಡಾನೆ ದಾಳಿಗೆ ಮಹಿಳಾ ಕಾರ್ಮಿಕ ಬಲಿಯಾದ ವಿಚಾರಕ್ಕೆ ಪ್ರತಿಭಟನಾಕಾರರು ರಸ್ತೆಗಿಳಿದು ಭಾರೀ ಪ್ರತಿಭಟನೆ ನಡೆಸಿದಾಗ ಪೊಲೀಸರು ನಡೆಸಿದ ಲಾಠಿ ಚಾರ್ಜ್ ಖಂಡಿಸಿ ಮಲೆನಾಡು ನಾಗರೀಕ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಸೊಮವಾರ...

ಕಾಡಾನೆ ದಾಳಿಗೆ ಮಹಿಳಾ ಬಲಿ-ಶೃಂಗೇರಿ ಕ್ಷೇತ್ರ ಬಂದ್‌ ಯಶಸ್ವಿ

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಇತ್ತೀಚಿಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಹಿಳಾ ಕಾರ್ಮಿಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದಾದ ನಂತರ ಕಾಫಿನಾಡು ಚಿಕ್ಕಮಗಳೂರಲ್ಲಿ  ಪ್ರತಿಭಟನಾಕಾರರು ರಸ್ತೆಗಿಳಿದು ಭಾರೀ ಪ್ರತಿಭಟನೆ (Protest) ನಡೆಸಿದ್ದರು. ಈ...

Related Articles

ಪ್ರೇಮವಾಹಿನಿ ರಥಕ್ಕೆ ತರೀಕೆರೆಯಲ್ಲಿ ಭವ್ಯ ಸ್ವಾಗತ

ಚಿಕ್ಕಮಗಳೂರು: ತರೀಕೆರೆಯ ಮೂಲಕ ಜಿಲ್ಲೆಯನ್ನು ಪ್ರವೇಶಿಸಿದ ‘ಶ್ರೀಸತ್ಯಸಾಯಿ ಪ್ರೇಮವಾಹಿನಿ’ ರಾಷ್ಟ್ರೀಯ ರಥಯಾತ್ರೆಗೆ ಭವ್ಯ ಸ್ವಾಗತ ಕೋರಲಾಯಿತು....

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು

ಬಾಳೆಹೊನ್ನೂರು : “ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ. ವೈಮಾನಿಕ ದಾಳಿಯಲ್ಲಿ...

35 ಲಕ್ಷ ರೂ.ವೆಚ್ಚದ ಗ್ರಾಮಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಚಿಕ್ಕಮಗಳೂರು: ಗ್ರಾಮಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಗಳು ತಮಗೆ ದೊರಕಿದ ಅವಕಾಶವನ್ನು ಜನರ ಕಲ್ಯಾಣಕ್ಕಾಗಿ ಸದ್ಬಳಕೆ...

ಮಾನವಧರ್ಮಕ್ಕೆ ಜಯವಾಗಲಿ- ಧರ್ಮದಿಂದಲೇ ವಿಶ್ವಕ್ಕೆ ಶಾಂತಿ

ಬಾಳೆಹೊನ್ನೂರು: “ಧರ್ಮ,‌ ಪೂಜೆ, ಭಕ್ತಿ ಇವು ಪ್ರದರ್ಶನಕ್ಕೆ ಇರುವಂತಹ ಸಂಗತಿಗಳಲ್ಲ. ಇವು ಮನುಷ್ಯನ ಆತ್ಮವಿಶ್ವಾಸವನ್ನು ಹೆಚ್ಚಿಸುವ ಸಲುವಾಗಿ...