Home namma chikmagalur chikamagalur ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ
chikamagalurHomeLatest Newsnamma chikmagalur

ಕಗ್ಗಂಟಾಗಿ ಉಳಿದ ಅಂಚೆ ಮತಗಳ ಎಣಿಕೆ ಕಾರ್ಯ

Share
Share

ಚಿಕ್ಕಮಗಳೂರು: ಹೈಕೋರ್ಟ್ ನಿರ್ದೇಶನದಂತೆ ಶನಿವಾರ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಎಣಿಕೆ ಕಾರ್ಯ ಪೂರ್ಣಗೊಳ್ಳದೆ. ತಡರಾತ್ರಿವರೆಗೂ ಕಗ್ಗಂಟಾಗಿ ಉಳಿದಿತ್ತು.

2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ 201 ಮತಗಳಿಂದ ಜಯ ಸಾಧಿಸಿದ್ದರು. 1,822 ಅಂಚೆ ಮತಗಳಲ್ಲಿ 279 ಮತಗಳು ತಿರಸ್ಕೃತಗೊಂಡಿದ್ದವು. ಇದರ ವಿರುದ್ಧ ಬಿಜೆಪಿ ಪರಾಜಿತ ಅಭ್ಯರ್ಥಿ ಡಿ.ಎನ್.ಜೀವರಾಜ್ ಹೈಕೋರ್ಟ್ ಮೊರೆ ಹೋಗಿದ್ದರು.

ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಸುಧಾಕರಶೆಟ್ಟಿ ಅವರು ಮಧ್ಯಾಹ್ನ ಮತ ಎಣಿಕೆ ಕೇಂದ್ರದಿಂದ ಹೊರ ಬಂದು, ‘ತಿರಸ್ಕೃತ ಮತಗಳ ಪರಿಶೀಲನೆ ಶೇ. 70ರಷ್ಟು ಮುಗಿದಿದೆ. ಯಾವುದೇ ಮತಪತ್ರ ಪುರಸ್ಕೃತವಾಗಿಲ್ಲ. ಈ ಮರು ಎಣಿಕೆಯಿಂದ ಫಲಿತಾಂಶದಲ್ಲಿ ವ್ಯತ್ಯಾಸ ಆಗುವುದಿಲ್ಲ’ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.

ಆರಂಭದ 350 ಮತಗಳ ಎಣಿಕೆಯ ವೇಳೆಗೆ ಟಿ.ಡಿ.ರಾಜೇಗೌಡ ಮತ್ತು ಡಿ.ಎನ್.ಜೀವರಾಜ್ ಇಬ್ಬರಿಗೂ ಗುರುತು ಹಾಕಿರುವ 50 ಮತ ಪತ್ರ ದೊರಕಿದವು. ‘2023ರಲ್ಲಿ ನಡೆದ ಎಣಿಕೆ ವೇಳೆ ಮಾನ್ಯವಾಗಿದ್ದ ಮತಪತ್ರಗಳಲ್ಲಿ ಈಗ ಇಬ್ಬರ ಹೆಸರಿಗೂ ಗುರುತು ಹಾಕಲಾಗಿದೆ ಎಂದರೆ ಮತಪತ್ರಗಳನ್ನು ವಿರೂಪಗೊಳಿಸಲಾಗಿದೆ. ಮತ ಎಣಿಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ರಾಜೇಗೌಡ ಪಟ್ಟು ಹಿಡಿದರು ಎಂದು ಮೂಲಗಳು ತಿಳಿಸಿವೆ.

ರಾಜೇಗೌಡ ಅವರು ಎಣಿಕೆಗೆ ಅಡ್ಡಿಪಡಿಸು ತ್ತಿದ್ದು ಅವರನ್ನು ಹೊರಗೆ ಕಳುಹಿಸಿ ಎಣಿಕೆ ಮಾಡಬೇಕು ಎಂದು ಬಿಜೆಪಿಯವರು ಪ್ರತಿಭಟನೆ ನಡೆಸಿದರು.

Postal vote counting remains a mess

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...