Home namma chikmagalur chikamagalur ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ
chikamagalurHomeLatest Newsnamma chikmagalur

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

Share
Share

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್ ಲೈನ್ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಆಗಸ್ಟ್ ೧೪ ಮತ್ತು ೧೬ ರಂದು ಹಿರೇಮಗಳೂರು ೬೬/೧೧ ಕೆ.ವಿ ವಿ.ವಿ ಕೇಂದ್ರದಿಂದ ಹೊರಹೊಮ್ಮುವ ಚಿಕ್ಕನಹಳ್ಳಿ ೧೧ ಕೆ.ವಿ. ಫೀಡರ್‌ಗಳಿಗೆ ವಿದ್ಯುತ್ ಸರಬರಾಜು ನಿಲುಗಡೆಯಾಗುತ್ತದೆ.

ಈ ಹಿನ್ನೆಲೆಯಲ್ಲಿ ಈ ಫೀಡರ್‌ಗಳ ವ್ಯಾಪ್ತಿಗೆ ಬರುವ ಮಲ್ಲೇದೇವರಹಳ್ಳಿ, ಚಿಕ್ಕನಹಳ್ಳಿ, ಹೊಸಲಕ್ಯಾ, ಗಾಣದಾಳು, ಕ್ಯಾತನಬೀಡು, ಕಣಿವೆಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಆ ಎರಡು ದಿನಗಳಂದು ಬೆಳಿಗ್ಗೆ ೧೦ ರಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

ಈ ದಿನಾಂಕದಂದು ಬೆಳಿಗ್ಗೆ ೫ ರಿಂದ ಬೆಳಿಗ್ಗೆ ೧೦ ಗಂಟೆವರೆಗೆ ೩ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಉಪವಿಭಾಗ ವ್ಯಾಪ್ತಿಯ ಕಳಸಾಪುರ ೬೬/೧೧ ಕೆ.ವಿ. ಕೇಂದ್ರದಲ್ಲಿ ತುರ್ತು ಕಾಮಗಾರಿ ನಿಮಿತ್ತ ಕಳಸಾಪುರ ೬೬ ಕೆ.ವಿ. ಫೀಡರ್ ಮಾರ್ಗ ಮುಕ್ತತೆ ಪಡೆಯುವುದರಿಂದ ಆಗಸ್ಟ್ ೧೩ ರಂದು ೧೧ ಕೆ.ವಿ ದೇವಗೊಂಡನಹಳ್ಳಿ, ಮಠ, ಸಿಂದಿಗೆರೆ, ಮಾಚೇನಹಳ್ಳಿ, ಈಶ್ವರಹಳ್ಳಿ, ಕೆ.ಬಿ.ಹಾಳು, ಗಾಳಿಹಳ್ಳಿ ಮತ್ತು ಕಳಸಾಪುರ ಫೀಡರ್‌ಗಳ ೧೧ ಕೆ.ವಿ ಮಾರ್ಗದಲ್ಲಿ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದೆ.

ಈ ಫೀಡರ್‌ಗಳ ವ್ಯಾಪ್ತಿಗೆ ಒಳಪಡುವ ಕಳಸಾಪುರ, ದೇವಗೊಂಡನಹಳ್ಳಿ. ಲಕ್ಕುಮನಹಳ್ಳಿ, ಕುನ್ನಾಳು, ಸಿರಬಡಿಗೆ, ಭೂಚೇನಹಳ್ಳಿ, ಬೆಳವಾಡಿ, ನರಸೀಪುರ, ಸಿಂದಿಗೆರೆ, ಮಾಚೇನಹಳ್ಳಿ. ಈಶ್ವರಹಳ್ಳಿ, ಕೆ.ಬಿ.ಹಾಳು, ಗಾಳಿಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಅಂದು ಬೆಳಿಗ್ಗೆ ೧೦ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಸರಬರಾಜು ನಿಲುಗಡೆಯಾಗಲಿದೆ.

ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Power outage on August 14 and 16

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಮೇತ ಪರಾರಿಯಾಗಿರುವ ಘಟನೆ ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬುಕ್ಕಾಂಬೂದಿ ಗ್ರಾಮದ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು ಬರ ಪಟ್ಟಿಯಿಂದ ಕೈಬಿಟ್ಟಿರುವುದು ಸರಿಯಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ...

Related Articles

ಎರಡು ತಿಂಗಳ ಸುದೀರ್ಘ ವಿರಾಮದ ಬಳಿಕ ಜಿಲ್ಲೆಯಾದ್ಯಂತ ಭರ್ಜರಿ ಮಳೆ

ಚಿಕ್ಕಮಗಳೂರು: ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಜನರಿಗೆ...

ನೀಲಕುರಿಂಜಿ ಅಲ್ಲ, ಚಂದ್ರದ್ರೋಣದಲ್ಲಿ ಅರಳಿದ್ದು ಗುರಿಂಜೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ–ಬಾಬಾಬುಡನ್‌ಗಿರಿ ಪ್ರದೇಶದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ...

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ

ಚಿಕ್ಕಮಗಳೂರು: ವಿದ್ಯುತ್ ಪೂರೈಕೆಯಲ್ಲಿ ಇತ್ತೀಚೆಗೆ ಉಂಟಾದ ತಾತ್ಕಾಲಿಕ ವ್ಯತ್ಯಯವನ್ನು ದೊಡ್ಡ ಸಮಸ್ಯೆಯಾಗಿ ಬಿಂಬಿಸುವ ಅಗತ್ಯವಿಲ್ಲ. ಮುಂದಿನ...

ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು

ಚಿಕ್ಕಮಗಳೂರು: ಬರಗಾಲದ ಸಂದರ್ಭದಲ್ಲಿ ಕೊಳವೆಬಾವಿ ಕೊರೆಯಲು ಬೇಕಾಬಿಟ್ಟಿ ದರ ನಿಗದಿ ಮಾಡಲು ಅವಕಾಶ ನೀಡಬಾರದು. ನಿಯಮಾವಳಿ...