ಚಿಕ್ಕಮಗಳೂರು: ಕಡೂರು ತಾಲೂಕಿನ ಹುಲಿಕೆರೆ ಗ್ರಾಮದ ಯುವ ಪ್ರತಿಭೆ ಪ್ರವೀಣ್ ಎಚ್.ಟಿ. ಈ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ ೭೨೦ನೇ ರ್ಯಾಂಕ್ ಪಡೆಯುವ ಮೂಲಕ ಕಾಫಿನಾಡಿಗೆ ಹೆಮ್ಮೆ ತಂದಿದ್ದಾರೆ.
ದೇಶಾದ್ಯಂತ ಒಟ್ಟು ೯೫೮ ಅಭ್ಯರ್ಥಿಗಳು ಈ ಕಠಿಣ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಅದರಲ್ಲಿ ೨೫ ಕನ್ನಡಿಗರು ಸ್ಥಾನ ಪಡೆಯುವ ಮೂಲಕ ರಾಜ್ಯದ ಕೀರ್ತಿ ಹೆಚ್ಚಿಸಿದ್ದಾರೆ. ಕಿರಣ್ ಕಮಾಟೆ ಅವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿ ಸಾಧನೆ ಮಾಡಿದ್ದಾರೆ.
ಹುಲಿಕೆರೆಯ ನಿವೃತ್ತ ಮುಖ್ಯ ಶಿಕ್ಷಕ ತಮ್ಮಯ್ಯ ಮತ್ತು ನೀಲಮ್ಮ ದಂಪತಿಯ ಪುತ್ರರಾದ ಪ್ರವೀಣ್ ಅವರ ಈ ಸಾಧನೆಯು ಜಿಲ್ಲೆಯ ಯುವ ಸಮುದಾಯಕ್ಕೆ ದೊಡ್ಡ ಸ್ಫೂರ್ತಿಯಾಗಿದ್ದು, ಪೋಷಕರು ಮತ್ತು ಗ್ರಾಮಸ್ಥರಲ್ಲಿ ಸಂಭ್ರಮ ಮನೆಮಾಡಿದೆ.
Praveen H.T. 720th rank in UPSC exam
Leave a comment