Home namma chikmagalur chikamagalur ಇಂದು ಸರ್ಕಾರಿ ಐ.ಟಿ.ಐನಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಮೇಳ
chikamagalurHomeLatest Newsnamma chikmagalur

ಇಂದು ಸರ್ಕಾರಿ ಐ.ಟಿ.ಐನಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಮೇಳ

Share
Share

ಚಿಕ್ಕಮಗಳೂರು: ನಗರದ ಜಿ.ಪಂ ಸಮೀಪದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಕೈಗಾರಿಕಾ ವಸಾಹತು ಹಿಂಭಾಗ-ಜ್ಯೋತಿನಗರ)ಯಲ್ಲಿ ಜನವರಿ ೧ ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳವನ್ನು ಆಯೋಜಿಸಲಾಗಿದೆ. ಈ ಮೇಳದಲ್ಲಿ ಬಿ.ಇ.,, ಡಿಪ್ಲೊಮೊ, ಪದವಿ, ಪಿ.ಯು.ಸಿ, ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಹಾಗೂ ಐ.ಟಿ.ಐ.ನ ವಿವಿಧ ವೃತ್ತಿಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಅಪ್ರೆಂಟಿಶಿಪ್ ಮೇಳದಲ್ಲಿ ತಮ್ಮ ಎಲ್ಲಾ ಮೂಲ ದಾಖಲಾತಿಗಳನ್ನು ಆಧಾರ್ ಸಂಖ್ಯೆ ಮತ್ತು ಇ-ಮೇಲ್ ಐಡಿಯೊಂದಿಗೆ ಹಾಜರಾಗಬಹುದು.

ಈ ಮೇಳದಲ್ಲಿ ವಿವಿಧ ಉದ್ದಿಮೆಗಳು ಪಾಲ್ಗೊಳ್ಳುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಅಂತೆಯೇ ಜಿಲ್ಲೆಯ ಎಲ್ಲಾ ಉದ್ದಿಮೆಗಳು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಉದ್ದಿಮೆಯನ್ನು ಅಪ್ರೆಂಟಿಶಿಪ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಮತ್ತು ಅಪ್ರೆಂಟಿಶಿಪ್ ತರಬೇತಿಗೆ ನೋಂದಣಿ ಮಾಡಿಸಿರುವ ಅಭ್ಯರ್ಥಿಗಳನ್ನು ತಮಗೆ ಅವಶ್ಯಕವಿರುವ ಖಾಲಿ ಸ್ಥಾನಗಳಿಗೆ ಭರ್ತಿಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಅಪ್ರೆಂಟಿಶಿಪ್ ಮೇಳಕ್ಕೆ ಮೇಲೆ ಸೂಚಿಸಿದ ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಹಾಗೂ ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 9611596629, 9964070245,9480489306 9886028437, 7411869736, 9972594567, 8553651973, 7019174607, 8792139703,  ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Prime Minister’s National Apprenticeship Fair at Government ITI today

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...