Home Latest News ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ
Latest NewschikamagalurHomenamma chikmagalur

ಜು.28ಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳ

Share
Share

ಚಿಕ್ಕಮಗಳೂರು: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ (ವಸಾಹತು ಹಿಂಭಾಗ, ಜಿಲ್ಲಾ ಪಂಚಾಯಿತಿ ಹತ್ತಿರ, ಜ್ಯೋತಿನಗರ, ಚಿಕ್ಕಮಗಳೂರು) ಪ್ರಧಾನ ಮಂತ್ರಿ ರಾಷ್ಟ್ರೀಯ ಅಪ್ರೆಂಟಿಸ್ ಶಿಪ್ ಮೇಳವನ್ನು ಜುಲೈ ೨೮ ರಂದು ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಬಿ.ಇ., ಪದವೀಧರ, ಡಿಪ್ಲೊಮಾ, ಪಿ.ಯು.ಸಿ., ಎಸ್.ಎಸ್.ಎಲ್.ಸಿ. ಮತ್ತು ವಿವಿಧ ವಿದ್ಯಾರ್ಹತೆಯನ್ನು ಹೊಂದಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಹಾಗೂ ಐ.ಟಿ.ಐ.ನ ವಿವಿಧ ವೃತ್ತಿಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಅಪ್ರೆಂಟಿಸ್ ಶಿಪ್ ಮೇಳದಲ್ಲಿ ತಮ್ಮ ಎಲ್ಲಾ ಮೂಲ ದಾಖಲಾತಿಗಳು, ಆಧಾರ್ ಸಂಖ್ಯೆ ಮತ್ತು ಇ-ಮೇಲ್ ಐಡಿಯೊಂದಿಗೆ ಹಾಜರಾಗಬಹುದು. ಮೇಳದಲ್ಲಿ ವಿವಿಧ ಉದ್ದಿಮೆದಾರರು ಪಾಲ್ಗೊಳ್ಳುತ್ತಿದ್ದು, ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳನ್ನು ಅಪ್ರೆಂಟಿಸ್ ಶಿಪ್ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಅದೇ ರೀತಿ ಜಿಲ್ಲೆಯ ಎಲ್ಲಾ ಉದ್ದಿಮೆದಾರರು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಉದ್ದಿಮೆಯನ್ನು ಅಪ್ರೆಂಟಿಸ್ ಶಿಪ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಲು ಮತ್ತು ಅಪ್ರೆಂಟಿಸ್ ಶಿಪ್ ತರಬೇತಿಗೆ ನೋಂದಣಿ ಮಾಡಿಸಿರುವ ಅಭ್ಯರ್ಥಿಗಳನ್ನು ತಮಗೆ ಅವಶ್ಯಕವಿರುವ ಖಾಲಿ ಸ್ಥಾನಗಳಿಗೆ ಭರ್ತಿಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಅಪ್ರೆಂಟಿಸ್‌ಶಿಪ್ ಮೇಳಕ್ಕೆ ಅರ್ಹ ಅಭ್ಯರ್ಥಿಗಳು ಹಾಗೂ ಉದ್ದಿಮೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ9611596629, 9964070245, 8792139703, 9480489306, 9886028437, 7411869736, 9972594567, 8553651973 & 7019174607 ಸಂಖ್ಯೆಗಳನ್ನು ಸಂಪರ್ಕಿಸಬಹುದು.

Prime Minister’s National Apprenticeship Fair on June 28

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...