Home namma chikmagalur ಅಸ್ಸಾಂ ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿಗಳು ಕಾಫಿನಾಡಿನಲ್ಲಿ ಅರೆಸ್ಟ್
namma chikmagalurchikamagalurCrime NewsHomeLatest News

ಅಸ್ಸಾಂ ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿಗಳು ಕಾಫಿನಾಡಿನಲ್ಲಿ ಅರೆಸ್ಟ್

Share
Share

ಚಿಕ್ಕಮಗಳೂರು: ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿ ಅಸ್ಸಾಂ ರಾಜ್ಯದ ಮೋರಿಗಾನ್ ಜಿಲ್ಲಾ ಕಾರಾಗೃಹದಲ್ಲಿ ಸಜಾ ಬಂಧಿಗಳಾಗಿದ್ದ ಇಬ್ಬರು ಖೈದಿಗಳು ಅಲ್ಲಿನ ಜೈಲಿನಿಂದ ತಪ್ಪಿಸಿಕೊಂಡು ಚಿಕ್ಕಮಗಳೂರಿನ ಎಸ್ಟೇಟ್ ನಲ್ಲಿ ತಲೆಮರೆಸಿಕೊಂಡಿದ್ದರು. ಈ ಇಬ್ಬರು ಖೈದಿಗಳನ್ನು ಬಂಧಿಸಿ ಅಸ್ಸಾಂ ಪೊಲೀಸರ ವಶಕ್ಕೆ ಒಪ್ಪಿಸುವಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಅಸ್ಸಾಂ ರಾಜ್ಯದ ಮಿಸ್ಸಾಮುರಿ ಜಿಲ್ಲೆಯ ಕಲ್ ಕುಚ್ಚಿ, ಜಂಗಲ್ ಬಸ್ತಿಯ ಎಂ.ಡಿ.ಜಿಯಾರಲ್ ಇಸ್ಲಾಂ ಹಾಗೂ ಮೋರಿಗಾನ್ ಜಿಲ್ಲೆ ಜಾಗಿರೋಡ್ ನ ಕಾನಬೋರಿ ಗ್ರಾಮದ ಸುಬಾರತ ಸರ್ಕಾರ್ ಬಂಧಿತ ಖೈದಿಗಳು. ಈ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇಬ್ಬರನ್ನು ಅಸ್ಸಾಂನ ಮೋರಿಗಾನ್ ಜಿಲ್ಲಾ‌ ಕಾರಾಗೃಹದಲ್ಲಿರಿಸಲಾಗಿತ್ತು. ಆದರೆ ಆ. 20ರಂದು ಮೋರಿಗಾನ್ ಜಿಲ್ಲಾ ಕಾರಾಗೃಹದಿಂದ ತಪ್ಪಿಸಿಕೊಂಡಿದ್ದರು. ಈ ಸಂಬಂಧ ಅಸ್ಸಾಂ ರಾಜ್ಯದ ಮೋರಿಗಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜೈಲಿನಿಂದ ಪರಾರಿಯಾದವರ ಮೊಬೈಲ್ ನ ಸಿಡಿಆರ್ ಆಧರಿಸಿ ಆರೋಪಿಗಳು ಚಿಕ್ಕಮಗಳೂರಿಗೆ ಬಂದಿರುವುದು ಅಲ್ಲಿನ ಪೊಲೀಸರಿಗೆ ದೃಢಪಟ್ಟಿತ್ತು. ಹೀಗಾಗಿ ಅಸ್ಸಾಂ ಪೊಲೀಸರು ಆರೋಪಿಗಳ ಬಂಧನಕ್ಕೆ ಚಿಕ್ಕಮಗಳೂರು ಪೊಲೀಸರ ಸಹಕಾರ ಕೋರಿದ್ದರು.

ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಇನ್ಸ್ಪೆಕ್ಟರ್ ಸಚಿನ್ ನೇತೃತ್ವದಲ್ಲಿ ಪಿಎಸ್ಐ ರಘುನಾಥ್ ಹಾಗೂ ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ಆರೋಪಿಗಳ ಪತ್ತೆಗಾಗಿ ರಚನೆ ಮಾಡಲಾಗಿತ್ತು. ಈ ತಂಡ ಚಿಕ್ಕಮಗಳೂರು ತಾಲೂಕಿನ ಮಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಹಳಸಿನಖಾನ್ ಎಸ್ಟೇಟ್ ನಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಹೀಗೆ ವಶಕ್ಕೆ ಪಡೆದ ಆರೋಪಿಗಳನ್ನು ಅಸ್ಸಾಂ ಪೊಲೀಸ್ ಅಧಿಕಾರಿಗಳು ಚಿಕ್ಕಮಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ಟ್ರಾನ್ಸಿಸ್ಟ್ ವಾರೆಂಟ್ ಪಡೆದುಕೊಂಡು ಸಜಾ ಬಂಧಿಗಳನ್ನು ಅಸ್ಸಾಂ ರಾಜ್ಯಕ್ಕೆ ಕರೆದುಕೊಂಡು ಹೋಗಿದ್ದಾರೆ.

Prisoners who escaped from Assam jail arrested in Coffee Country

Share

Leave a comment

Leave a Reply

Your email address will not be published. Required fields are marked *

Don't Miss

ಅಂದರ್-ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ – ಐವರ ಬಂಧನ

ಚಿಕ್ಕಮಗಳೂರು: ಹೊರವಲಯದ ಹುಕ್ಕುಂದ ಗ್ರಾಮದ ಖಾಲಿ ಜಾಗದಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಹಣವನ್ನು ಪಣವಾಗಿಟ್ಟುಕೊಂಡು ಅಂದರ್-ಬಾಹರ್ ಇಸ್ಪೀಟು ಜೂಜಾಟವಾಡುತ್ತಿದ್ದ ಹೈಟೆಕ್ ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪಿಎಸ್‌ಐ...

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

Related Articles

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...