Home namma chikmagalur chikamagalur ಬೈಕ್ ಅಪಘಾದಲ್ಲಿ ಖಾಸಗಿ ಕಂಪನಿ ಉದ್ಯೋಗಿ ಸಾವು
chikamagalurCrime NewsHomeLatest Newsnamma chikmagalur

ಬೈಕ್ ಅಪಘಾದಲ್ಲಿ ಖಾಸಗಿ ಕಂಪನಿ ಉದ್ಯೋಗಿ ಸಾವು

Share
Share

ತರೀಕೆರೆ :ರಸ್ತೆ ಗುಂಡಿ ತಪ್ಪಿಸಲು ಹೋಗಿ  ಬೈಕ್ ಸ್ಕಿಡ್ ಆದ ಪರಿಣಾಮ ಖಾಸಗಿ ಕಂಪನಿ ಉದ್ಯೋಗಿ ತೀವ್ರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಅಜ್ಜಂಪುರ-ತರೀಕೆರೆ ರಸ್ತೆಯ ಬೆಟ್ಟತಾವರೆಕೆರೆ ಸೇತುವೆ ಬಳಿ ಸಂಭವಿಸಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಯಾನಂದ್ ಮೃತಪಟ್ಟ ದುರ್ದೈವಿ. ಬೆಂಗಳೂರಿನಿಂದ ಸ್ವಗ್ರಾಮಕ್ಕೆ ತಮ್ಮ ಬಜಾಜ್ ಮೋಟಾರ್ ಸೈಕಲ್‌ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಬೆಟ್ಟತಾವರೆಕೆರೆ ಗ್ರಾಮದ ಬ್ರಿಡ್ಜ್ ಸಮೀಪ ಬರುತ್ತಿದ್ದಾಗ ರಸ್ತೆಯಲ್ಲಿದ್ದ ಗುಂಡಿಗಳು ಹಾಗೂ ಅದೇ ಸಮಯದಲ್ಲಿ ಹಠಾತ್ತನೆ ನಾಯಿಯೊಂದು ಅಡ್ಡ ಬಂದಿದೆ. ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯಲ್ಲೇ ಸ್ಕಿಡ್ ಆಗಿ ಬಿದ್ದಿದೆ. ಪರಿಣಾಮ ದಯಾನಂದ್ ಅವರ ಕೈಕಾಲುಗಳಿಗೆ ತೀವ್ರ ಪೆಟ್ಟಾಗಿತ್ತು.

ತಕ್ಷಣ ಸ್ಥಳೀಯರು ಅಂಬುಲೆನ್ಸ್ ತರಿಸಿ ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಶಿವಮೊಗ್ಗ ಟೌನ್ ಬಳಿ ದಯಾನಂದ್ ಕೊನೆಯುಸಿರೆಳೆದಿದ್ದಾರೆ.

ಮೃತರ ತಂದೆ ಕೇಶವಮೂರ್ತಿ ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Private company employee dies in bike accident

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...