Home namma chikmagalur chikamagalur ಆಗಸ್ಟ್ 2ಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ
chikamagalurHomeLatest Newsnamma chikmagalur

ಆಗಸ್ಟ್ 2ಕ್ಕೆ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ಪರೀಕ್ಷೆಗೆ ನಿಷೇಧಾಜ್ಞೆ ಜಾರಿ

Share
Share

ಚಿಕ್ಕಮಗಳೂರು: ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಆಗಸ್ಟ್ ೨ ರಂದು ಲಿಖಿತ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಭಂವರ್ ಸಿಂಗ್ ಮೀನಾ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಅತೀ ಮಹತ್ವದ ಹಿನ್ನೆಲೆ ಹೊಂದಿರುವುದರಿಂದ ಪರೀಕ್ಷಾ ಪ್ರಕ್ರಿಯೆಯನ್ನು ಸುವ್ಯವಸ್ಥಿತವಾಗಿ, ಶಾಂತಿ ಮತ್ತು ಶಿಸ್ತು ಪಾಲನೆಯೊಂದಿಗೆ ಹಾಗೂ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಡೆಸುವುದು ಅವಶ್ಯವಿರುವ ಹಿನ್ನೆಲೆಯಲ್ಲಿ ಹಾಗೂ ಪರೀಕ್ಷಾ ಪ್ರಕ್ರಿಯೆಗಳನ್ನು ನಿಯಮಬದ್ಧವಾಗಿ, ಯಾವುದೇ ಅಹಿತಕರ ಮತ್ತು ಅವ್ಯವಹಾರಗಳಿಗೆ ಆಸ್ಪದವಾಗದಂತೆ ನಡೆಸುವ ಸಲುವಾಗಿ ಪರೀಕ್ಷೆ ಆರಂಭವಾಗುವ ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳು ಮತ್ತು ಅವುಗಳ ಸುತ್ತಮುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ೨೦೨೩ರ ಕಲಂ ೧೬೩ ರನ್ವಯ ಈ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ೩೩೯೫ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಲಿಖಿತ ಪರೀಕ್ಷೆ ಅಂದು ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ವಿವರ ಇಲ್ಲಿವೆ:

ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯ ಎಸ್.ಟಿ.ಜೆ ಮಹಿಳಾ ಪಿಯು ಕಾಲೇಜು, ಸರ್ಕಾರಿ ಪದವಿಪೂರ್ವ ಕಾಲೇಜು, ರತ್ನಗಿರಿ ರಸ್ತೆಯ ಎಂ.ಇ.ಎಸ್.ಎಸ್.ಎಸ್.ಎಂ ಪಿಯು ಕಾಲೇಜು, ಬಸವನಹಳ್ಳಿಯ
ಬಾಲಕಿಯರ ಪದವಿ ಪೂರ್ವ ಕಾಲೇಜು, ಆಶ್ರಯ ಆಸ್ಪತ್ರೆ ಹತ್ತಿರದ ಬಾಲಕಿಯರ ಸೆಂಟ್ ಜೋಸೆಫ್ ಪಿಯು ಕಾಲೇಜು, ಐಡಿಎಸ್‌ಜಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಜ್ಯೋತಿನಗರದ ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯ, ಹೌಸಿಂಗ್ ಬೋರ್ಡ್‌ನ ಬಿ.ಜಿ.ಎಸ್ ಎಕ್ಸ್‌ಪರ್ಟ್ ಪಿಯು ಕಾಲೇಜು, ಜ್ಯೋತಿನಗರದ ಸೆಂಟ್ ಜೋಸೆಫ್ ಪಿಯು ಕಾಲೇಜು, ಟೌನ್ ಕ್ಯಾಂಟೀನ್ ಹತ್ತಿರದ ಡಿಎಸಿಜಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಕಡೂರಿನ ಸರ್ಕಾರಿ ಪಿಯು ಕಾಲೇಜು, ಕೆ.ಎಂ. ರಸ್ತೆಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಿ.ಹೆಚ್.ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮೂಡಿಗೆರೆ ಹೆಸ್ಗಲ್ ರಸ್ತೆಯ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೊಯ್ಸಳ ರಸ್ತೆಯ ಸೆಂಟ್ ಮಾರ್ಥಾಸ್ ಕಾಂಪೋಸೈಟ್ ಪಿಯು ಕಾಲೇಜು ಹಾಗೂ ಕೆ.ಎಂ.ರಸ್ತೆಯ ಒಕ್ಕಲಿಗರ ಸಂಘ ಪಿಯು ಕಾಲೇಜಿನಲ್ಲಿ ಈ ಪರೀಕ್ಷೆಗಳು ನಡೆಯಲಿವೆ.

Prohibitory order issued for police constable exam on August 2

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...