ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ.
ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್ ದಾಳಿನಡೆಸಿ ವಾಹನವನ್ನು ಪೊಲೀಸರು ಬೆನ್ನಟ್ಟುತ್ತಿದ್ದಂತೆ ಕಾರು ಬಿಟ್ಟು ಜಾನುವಾರು ಕಳ್ಳರು ಪರಾರಿಯಾಗಿದ್ದಾರೆ.
ಕೊಪ್ಪ ತಾಲೂಕಿನ ಗಡಿಕಲ್ ಚೆಕ್ಪೋಸ್ಟ್ ಸಮೀಪದಲ್ಲಿ ಕಾರ್ಯಾಚರಣೆ ನಡೆದಿದೆ. ನಂಬರ್ ಪ್ಲೇಟ್ ಕಿತ್ತುಹಾಕಿ ಜಾನುವಾರು ಕಳ್ಳತನಕ್ಕೆ ಯತ್ನಿಸಲಾಗಿದ್ದು,ಎರಡು ಗೋವುಗಳನ್ನು ಕೊಪ್ಪ ಪೊಲೀಸರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.ವಾಹನವನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.ಕೊಪ್ಪ ಪೊಲೀಸರ ಸಮಯಪ್ರಜ್ಞೆಯ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
Protection of illegally transported cows
Leave a comment