Home Latest News ಕಾರ್ಮಿಕರಿಗೆ ಸೌಲಭ್ಯ ವಿತರಿಸುವಲ್ಲಿ ಮಂಡಳಿ ವಿಳಂಭ ವಿರೋಧಿಸಿ ಪ್ರತಿಭಟನೆ
Latest NewschikamagalurHomenamma chikmagalur

ಕಾರ್ಮಿಕರಿಗೆ ಸೌಲಭ್ಯ ವಿತರಿಸುವಲ್ಲಿ ಮಂಡಳಿ ವಿಳಂಭ ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಕಾರ್ಮಿಕರ ಸ್ವಾಭಾವಿಕ ಮರಣ ಮತ್ತು ಮದುವೆ ಧನಸಹಾಯ ವಿತ ರಣೆಯಲ್ಲಿ ಆಗುತ್ತಿರುವ ವಿಳಂಭ ನೀತಿಯನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಕಟ್ಟಡ ಕಾರ್ಮಿ ಕರ ಸಂಘದ ಮುಖಂಡರುಗಳು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ವಸಂತ್‌ಕುಮಾರ್ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಫಲಾನುಭವಿಗಳು ಹತ್ತಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸ್ವಾಭಾವಿಕ ಮರಣ, ಮದುವೆ ಧನಸಹಾಯ, ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಕಲ್ಯಾಣ ಮಂಡಳಿ ವಿಳಂಭ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.

ಪ್ರಸ್ತುತ ಸಂಕಷ್ಟದಿಂದ ಜೀವನ ನಡೆಸುತ್ತಿರುವ ಕಾರ್ಮಿಕ ಫಲಾನುಭವಿಗಳಿಗೆ ಮದುವೆ ಸೇರಿದಂತೆ ಹಲವಾರು ಸೌಲಭ್ಯದ ಧನಸಹಾಯದ ಹಣವು ಖಾತೆಗೆ ಜಮಾಯಾಗಿಲ್ಲ. ಕಾರ್ಮಿಕರಲ್ಲದವರನ್ನು ನೋಂ ದಾಯಿಸಿಕೊಂಡ ಕಾರಣ, ನೈಜ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಇದನ್ನು ತಡೆಗಟ್ಟಿ ಅನಧಿಕೃತರನ್ನು ಕಾನೂನಿನ ವ್ಯಾಪ್ತಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು ಎಂದರು.

ರಾಜ್ಯಸರ್ಕಾರ ಕಾರ್ಮಿಕರ ದುಡಿಮೆಗೆ ಅನುಕೂಲವಾಗಲು ಕಾರ್ಮಿಕ ಕಿಟ್‌ಗಳನ್ನು ನೀಡಲಾಗುತ್ತಿದೆ. ಆದರೆ ಕಾರ್ಮಿಕರಿಗೆ ಸಾವಿರಾರು ಬೆಲೆಯ ಗುಣಮಟ್ಟದ ಕಿಟ್‌ಗಳನ್ನು ವಿತರಿಸುವ ಬದಲು ಕೆಲಸಕ್ಕೆ ಬಾರದ ಕಳಪೆ ಗುಣಮಟ್ಟದ ಕಿಟ್‌ಗಳನ್ನು ಕಾರ್ಮಿಕ ಮಂಡಳಿ ವಿತರಿಸುವ ಮೂಲಕ ದ್ರೋಹವೆಸಗುತ್ತಿದೆ ಎಂದು ದೂರಿದರು.

ಈಚೆಗೆ ಕಾರ್ಮಿಕ ಕಿಟ್‌ಗಳನ್ನು ರಾಜಧಾನಿಯಲ್ಲಿ ಮಾರಾಟ ಮಾಡಿ ಅಧಿಕಾರಿಗಳು ಸಿಲುಕಿಕೊಂಡಿ ದ್ದಾರೆ. ಕಾರ್ಮಿಕರಿಗೆ ಕಿಟ್ ಪಡೆಯಲು ಆಧಾರ್, ಲೇಬರ್, ರೇಷನ್, ಸಿಆರ್‌ನಂಬರ್ ಸೇರಿದಂತೆ ಅನೇಕ ದಾಖಲೆಗಳನ್ನು ಪಡೆಯುತ್ತಾರೆ. ಈ ನಡುವೆ ಬೆಂಗಳೂರಿನಲ್ಲಿ ನೂರಾರು ಕಿಟ್‌ಗಳು ಅಂಗಡಿಗಳಲ್ಲಿ ಮಾರಾ ಟವಾಗುತ್ತಿರಲು ಅಧಿಕಾರಿಗಳ ಭ್ರಷ್ಟಚಾರವೇ ನೇರ ಕಾರಣವಾಗಿದೆ ಎಂದರು.

ಕಾರ್ಮಿಕರ ನಿವೃತ್ತಿ ನಂತರ ಔಷಧಿ ಹಾಗೂ ಜೀನೋಪಾಯಕ್ಕೆ ಸರಿಯಾಗಿ ಮೂರು ಸಾವಿರ ಪಿಂಚ ಣಿ ವ್ಯವಸ್ಥೆಯನ್ನು ನೀಡುತ್ತಿಲ್ಲ. ಇದರಿಂದ ನಿವೃತ್ತ ಕಾರ್ಮಿಕರು ಬದುಕು ದುಸ್ಥಿತಿಗೆ ತಲುಪಿದೆ. ಮಕ್ಕಳ ಮ ದುವೆಗಾಗಿ ಕಾರ್ಮಿಕರು ಸಾಲ ಮಾಡಿ ಪೂರೈಸಿದರೂ, ಸಮಯಕ್ಕೆ ಸರಿಯಾಗಿ ಮಂಡಳಿ ಧನಸಹಾಯದ ಹಣವನ್ನು ನೀಡದೇ ಸತಾಯಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಪದಾಧಿಕಾರಿಗಳು ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನ ವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಿ.ಸಿ.ಮಂಜೇಗೌಡ, ಸದಸ್ಯರಾದ ಜಾನಕಿ, ಜಯ ಕುಮಾರ್, ಮಂಜುನಾಥ್, ಗೌರಮ್ಮ, ದಯಾಕ್ಷಿ, ಶ್ರೀಧರ್ ಮತ್ತಿತರರು ಹಾಜರಿದ್ದರು.

Protest against board’s delay in distributing benefits to workers

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...