Home namma chikmagalur ಕನ್ನೇರಿ ಮಠದ ಶ್ರೀಗಳಿಂದ ಲಿಂಗಾಯತ ಶ್ರೀಗಳಿಗೆ ಅಪಮಾನದ ವಿರುದ್ಧ ಪ್ರತಿಭಟನೆ
namma chikmagalurchikamagalurHomeLatest News

ಕನ್ನೇರಿ ಮಠದ ಶ್ರೀಗಳಿಂದ ಲಿಂಗಾಯತ ಶ್ರೀಗಳಿಗೆ ಅಪಮಾನದ ವಿರುದ್ಧ ಪ್ರತಿಭಟನೆ

Share
Share

ಚಿಕ್ಕಮಗಳೂರು: ಸಾಂಗ್ಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಬೀಳೂರಿನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಮಹಾರಾಷ್ಟ್ರದ ಕೊಲ್ಲಾಪುರ ಕನ್ನೇರಿ ಮಠದ ಶ್ರೀ ಅದೃಶ ಕಾಡಸಿದ್ದೇಶ್ವರ ಶ್ರೀಗಳು ಲಿಂಗಾಯತ ಮಠಾಧೀಶರ ಒಕ್ಕೂಟದ ಪೂಜ್ಯರ ಬಗ್ಗೆ ಅವಮಾನಕಾರಿ, ಮಾನಹಾನಿಕರ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮಾಡಬಹುದಾದ ಶಬ್ದಗಳನ್ನು ಬಳಸಿರುವುದನ್ನು ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಮತ್ತು ಬಸವಪರ ಸಂಘನೆಗಳು ತೀವ್ರವಾಗಿ ಖಂಡಿಸಿವೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ಗಂಗಾಧರಪ್ಪ ಅವರು ಅತ್ಯಂತ ಅವಮಾನಕರ ಶಬ್ದ ಬಳಸುವುದರೊಂದಿಗೆ ಪ್ರತಿಷ್ಠಿತ ಒಕ್ಕೂಟದ ಮಠಾಧೀಶರನ್ನು ಎದುರಿಸಿ ಹಿಂಸಾತ್ಮಕ ಹಲ್ಲೆ ಮಾಡುವ ಉದ್ದೇಶದಿಂದ ಕೀಳುಮಟ್ಟದ ಭಾಷೆ ಬಳಸಿದ್ದಾರೆಂದು ಆರೋಪಿಸಿದರು.

ಶ್ರೀಗಳ ಈ ಹೇಳಿಕೆಯಿಂದ ಲಿಂಗಾಯತ ಮಠಾಧೀಶರು ಮತ್ತು ಸಮಸ್ತ ವಿರಕ್ತ ಮಠಗಳ ಪೀಠಾಧಿಪತಿಗಳಿಗೆ ಅವಮಾನವಾಗಿದ್ದು, ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮನವಿ ಸಲ್ಲಿಸಲಾಗುವುದೆಂದು ಹೇಳಿದರು.

ರಾಜ್ಯದಲ್ಲಿ ಲಕ್ಷಾಂತರ ಬಸವಣ್ಣನವರ ಅನುಯಾಯಿಗಳು ಲಿಂಗಾಯತ ಮಠಾಧೀಶರನ್ನು ಗುರುಗಳೆಂದು, ಬಸವಣ್ಣನವರನ್ನು ಲಿಂಗಾಯತ ಧರ್ಮದ ದರ್ಮಗುರು ಎಂದು ಆರಾಧಿಸುತ್ತಿದ್ದೇವೆ. ವಚನ ಸಾಹಿತ್ಯ ನಮ್ಮ ಗ್ರಂಥವಾಗಿದೆ. ಇಡೀ ಜಗತ್ತೇ ಅವರ ತತ್ವಗಳನ್ನು ನಂಬಿ ಆಚರಿಸುತ್ತಿದ್ದಾರೆ ಎಂದರು.

ಕನ್ನೇರಿ ಸ್ವಾಮಿಗಳು ಬಸವಸಂಸ್ಕೃತಿ ಅಭಿಯಾನದಲ್ಲಿ ಭಾಗವಹಿಸಿದ ಮಠಾಧೀಶರನ್ನು ಕಲಾವಿದರೆಂದು ಬಸವಸಂಸ್ಕೃತಿ ಅಭಿಯಾನ ನಾಟಕದ ಕಂಪನಿ ಎಂದು ಟೀಕಿಸುವ ಮೂಲಕ ಅವಮಾನಿಸಿದ್ದಾರೆ. ಇದರಿಂದ ಧಾರ್ಮಿಕ ಸಹಿಷ್ಣುತೆಗೆ ಧಕ್ಕೆ ತರುವುದಲ್ಲದೆ ದ್ವೇಷ ಹರಡಲು ಕಾರಣವಾಗಿದ್ದು, ಈ ಹೇಳಿಕೆಯನ್ನು ವಾಪಾಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಬಸವದಳದ ಜಿಲ್ಲಾಧ್ಯಕ್ಷ ಬಾಣೂರು ಚನ್ನಪ್ಪ, ತಾಲ್ಲೂಕು ಕಾರ್ಯದರ್ಶಿ ಎಂ.ಸಿ. ಚನ್ನೇಗೌಡ, ಜಾಗತಿಕ ಲಿಂಗಾಯತ ಮಹಾಸಭಾ ಕಡೂರು ತಾಲ್ಲೂಕು ಅಧ್ಯಕ್ಷ ಹೆಚ್.ಬಿ ಗಣೇಶ್, ತರೀಕೆರೆ ತಾಲ್ಲೂಕು ಅಧ್ಯಕ್ಷ ಜಿ. ಚಂದ್ರಶೇಖರ್, ಸಂಚಾಲಕ ವಿ.ಎನ್ ರಾಜಶೇಖರ್ ಉಪಸ್ಥಿತರಿದ್ದರು.

Protest against insult to Lingayat Sri by Kanneri Matha Sri

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....