Home namma chikmagalur chikamagalur ಕಟ್ಟಡ ಕಾರ್ಮಿಕರ ನಿಧಿ ಬಳಕೆ ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಕಟ್ಟಡ ಕಾರ್ಮಿಕರ ನಿಧಿ ಬಳಕೆ ವಿರೋಧಿಸಿ ಪ್ರತಿಭಟನೆ

Share
??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Share

ಚಿಕ್ಕಮಗಳೂರು:  ಸರ್ಕಾರದ ಯೋಜನೆಗಳಿಗೆ ಕಟ್ಟಡ ಕಾರ್ಮಿಕರ ನಿಧಿಯ ಬಳಕೆ ಯ ಪ್ರಸ್ತಾಪಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಬುಧ ವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಮುಖಂಡರುಗಳು ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ವಸಂತ್‌ಕುಮಾರ್ ಈ ಚಳಿಗಾಲದ ಅಧಿವೇ ಶನದ ಬಜೆಟ್‌ನಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರೂ.೬೦೦ ಕೋಟಿ ರೂ. ವೆಚ್ಚದಲ್ಲಿ ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾಪಿಸಿರುವುದನ್ನು ನಮ್ಮ ಸಂ ಘಟನೆ ತೀವ್ರವಾಗಿ ವಿರೋಧಿಸುತ್ತದೆ ಎಂದರು.

ತರಬೇತಿ ಕೇಂದ್ರಗಳನ್ನು ಸ್ಥಾಪಿಸುವುದು ರಾಜ್ಯಸರ್ಕಾರದ ಕೆಲಸ ಜೊತೆಗೆ ಈ ತರಬೇತಿ ಕೇಂದ್ರಗಳ ಲ್ಲಿ ಕೇವಲ ಕಟ್ಟಡ ಕಾರ್ಮಿಕರ ಮಕ್ಕಳು ಮಾತ್ರವಲ್ಲದೇ ಎಲ್ಲರಿಗೂ ಪ್ರವೇಶಾವಕಾಶವಿದೆ. ಹೀಗಿರುವಾಗ ಕಲ್ಯಾಣ ಮಂಡಳಿ ೬೦೦ ಕೋಟಿ ರೂ. ವೆಚ್ಚ ಮಾಡುವ ನಿರ್ಧಾರವು ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಬಗೆ ಯುವ ದ್ರೋಹವಾಗಿದೆ ಎಂದು ಹೇಳಿದರು.

ಶ್ರಮಿಕ ವಸತಿ ಶಾಲೆಗಳ ನಿರ್ಮಾಣ ಹಾಗೂ ಹುಬ್ಬಳ್ಳಿ ಮತ್ತು ಮೈಸೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರು ವ ಕೌಶಲ್ಯ ಅಭಿವೃದ್ದಿ ಅಕಾಡೆಮಿಗಳನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿಯನ್ನು ಬಳಸಿ ನಿಮಾ ಣ ಮಾಡುವ ಬಜೆಟ್ ಪ್ರಸ್ತಾಪವು ೧೯೯೬ರ ಕಟ್ಟಡ ಕಾರ್ಮಿಕರ ಕಾಯ್ದೆಯ ಉದ್ದೇಶವನ್ನು ಬುಡಮೇಲು ಮಾಡುವುದಾಗಿದೆ ಎಂದರು.

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಹಣವು ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವುದು. ಕಾರ್ಮಿಕರ ಆರೋಗ್ಯ, ಸುರಕ್ಷತೆ ಮತ್ತು ಶಿಕ್ಷಣದ ಅಗತ್ಯತೆಗಳಿಗಾಗಿ ಬಳಸಬೇಕು. ಇದನ್ನು ಕಟ್ಟಡ ಕಾರ್ಮಿ ಕರ ಕಲ್ಯಾಣ ಯೋಜನೆಗಳಿಗೆ ಹೊರತುಪಡಿಸಿ ಇತರೆ ಯಾವುದೇ ಉದ್ದೇಶಗಳಿಗೆ ಬಳಸಬಾರದೆಂದು ಕಾ ಯ್ದೆ ಹೇಳುತ್ತಿದ್ದು, ಸುಪ್ರೀಂ ಕೋರ್ಟ್ ಕೂಡಾ ಇದನ್ನು ಎತ್ತಿಹಿಡಿದಿದೆ ಎಂದು ತಿಳಿಸಿದರು.

ಸಂಘದ ಜಿಲ್ಲಾಧ್ಯಕ್ಷ ಜಿ.ರಘು ಮಾತನಾಡಿ ರಾಜ್ಯಸರ್ಕಾರವು ಕೂಡಾ ಸಾವಿರಾರು ಕೋಟಿ ರೂ.ಗಳಲ್ಲಿ ಕಾರ್ಮಿಕರ ಅನುಪಯುಕ್ತ ಸ್ಕೀಮ್‌ಗಳಿಗೆ ವ್ಯಯಮಾಡಿರುವುದರಿಂದ ಈಗ ಮಂಡಳಿಯಲ್ಲಿ ಸದಸ್ಯತ್ವ ಹೊಂ ದಿರುವ ಕಟ್ಟಡ ಕಾರ್ಮಿಕರ ಮಕ್ಕಳು ಕನಿಷ್ಟ ಮಟ್ಟದ ಶೈಕ್ಷಣಿಕ ಧನಸಹಾಯವನ್ನು ಪಡೆಯಲು ಸೀಮಿತರಾ ಗಿದ್ದು ಧನಸಹಾಯ ಹೆಚ್ಚಿಸಲು ಕೇಳಿದರೆ, ಮಂಡಳಿ ಕಡಿಮೆಯಿದೆ ಎಂದು ಶೈಕ್ಷಣಿಕ ಧನಸಹಾಯ ಹೆಚ್ಚಿಸು ತ್ತಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಜಯಕುಮಾರ್, ತಾಲ್ಲೂಕು ಉಪಾಧ್ಯ ಕ್ಷರಾದ ಸಿ.ಸಿ.ಮಂಜೇಗೌಡ, ಕುಪ್ಪನ್, ಎಂ.ಎಸ್.ಜಾನಕಿ, ಸಮಿತಿ ಸದಸ್ಯರಾದ ಸಿ.ಮಂಜುನಾಥ್, ಎ.ಶ್ರೀಧ ರ್, ಸಲೀಂ, ಚಂದ್ರಚಾರ್, ಗೀತಾ, ಫಾತಿಮಾ ಮತ್ತಿತರರಿದ್ದರು.

Protest against use of construction workers’ funds

Share

Leave a comment

Leave a Reply

Your email address will not be published. Required fields are marked *

Don't Miss

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗೌರಿ ಹಬ್ಬದ...

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ ಬಂದಿದ್ದ ರಾಗಿ ಬೆಳೆಯ ಮೇಲೆ ಟ್ರಾಕ್ಟರ್ ಹರಿಸಿ ನಾಶಪಡಿಸಿರುವ ಆಘಾತಕಾರಿ ಘಟನೆಯೊಂದು ತರೀಕೆರೆ ತಾಲೂಕಿನ...

Related Articles

ಮೂಡಿಗೆರೆಯಲ್ಲಿ ಮುಸುಕುಧಾರಿ ಖದೀಮರಿಂದ ಸರಗಳ್ಳತನ

ಮೂಡಿಗೆರೆ: ಮುಂಜಾನೆಯ ತಂಪಾದ ವಾತಾವರಣದಲ್ಲಿ ರಸ್ತೆ ಬದಿಯಲ್ಲಿ ನಿರಾತಂಕವಾಗಿ ವಾಕಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು...

ಅರಸನ ನಾಲೆ ಪುನಶ್ಚೇತನ‌ಕ್ಕೆ ಆಗ್ರಹಿಸಿ ಇಂದು ರೈತರ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ಹಾಗೂ...

ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ

ಚಿಕ್ಕಮಗಳೂರು: ಸವದಳ ಸೂತ್ರದಡಿ ಎಲ್ಲರನ್ನು ಒಂದುಗೂಡಿಸಿ : ಡಾ.ಮಾತೆ ಗಂಗಾದೇವಿನಾಡಿನ ವೀರಶೈವ-ಲಿಂಗಾಯಿತ ಜನಾಂಗವನ್ನು ಬಸವದಳ ಸೂತ್ರದಡಿ...

ಪ್ರತಾಪ ಸಿಂಹ ವಿರುದ್ಧ ಭೀಮ್ ಆರ್ಮಿ ಪ್ರತಿಭಟನೆ

ಚಿಕ್ಕಮಗಳೂರು: ದಲಿತ ಸಂಘಟನೆಗಳ ಬಗ್ಗೆ ಮಾಜಿ ಸಂಸದ ಪ್ರತಾಪ ಸಿಂಹ ಲಘುವಾಗಿ ಮಾತನಾಡಿದ್ದು, ಕೂಡಲೇ ಕ್ಷಮೆ...