ಚಿಕ್ಕಮಗಳೂರು : ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಖಂಡಿಸಿ ಕಾಫಿನಾಡಿನಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಕಡೂರು-ಮಂಗಳೂರು ರಸ್ತೆಯ ರಾ.ಹೆ.173 ರಲ್ಲಿ ಜಮಾಯಿಸಿ ಸಿಎಂ ಸಿದ್ದರಾಮಯ್ಯ ಹಾಗೂ ವಕ್ಫ್ ಸಚಿವ ಜಮೀರ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಒಂದು ಸಮುದಾಯದ ಒಲೈಕೆ ಮಾಡುತ್ತಾ ಹಿಂದೂಗಳನ್ನ ತುಳಿಯುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ವೇಳೆ ಕೆಲಕಾಲ ವಾಹನಗಳ ಸಂಚಾರ ವ್ಯತ್ಯಯ ಉಂಟಾಗಿತ್ತು,
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶ್ರೀರಾಮಸೇನೆಯ ದತ್ತಮಾಲೆ ಆರಂಭಗೊಂಡಿದೆ ಇನ್ನೊಂದೆಡೆ ವಕ್ಫ್ ಹೋರಾಟ ಬಿರುಸು ಪಡೆದುಕೊಳ್ಳುತ್ತಿದೆ ಈ ನಡುವೆ ಪೊಲೀಸ್ ಇಲಾಖೆ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿಯವರನ್ನು ದಿಢೀರ್ ವರ್ಗಾವಣೆ ಮಾಡಿದ್ದು ಅವರ ಸ್ಥಳಕ್ಕೆ ಯಾರನ್ನೂ ಕೂಡಾ ನಿಯೋಜನೆ ಮಾಡಿರದಿರುವುದು ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳ ಕೊರತೆ ಎದುರಾದಂತೆ ಗೋಚರಿಸುತ್ತಿದೆ
Leave a comment