Home namma chikmagalur chikamagalur ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ
chikamagalurHomeLatest Newsnamma chikmagalur

ನಾಗರಿಕ ವೇದಿಕೆಯಿಂದ ಪ್ರತಿಭಟನೆ ಖಂಡನೆ

Share
Share

ತರೀಕೆರೆ: ಸಂವಿಧಾನ ಸಾರ್ವಜನಿಕರು ಆರೋಗ್ಯಕರವಾಗಿ ಪ್ರತಿಭಟಿಸಲು ಅವಕಾಶ ಕಲ್ಪಿಸಿದೆ. ಆದರೆ ಅದನ್ನು ದುರ್ಬಳಕೆ ಮಾಡಿಕೊಂಡು ಕಳೆದ ಕೆಲ ದಿನಗಳ ಹಿಂದೆ ಬಿಜೆಪಿ ಯವರು ನಾಗರೀಕ ವೇದಿಕೆ ಅಡಿಯಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್ ವಿರುದ್ಧ ಪ್ರತಿಭಟಿಸಿರುವುದು ನಾಗರೀಕ ಸಮಾಜ ತಲೆತಗ್ಗಿಸುವಂತಿದ್ದು, ಇದನ್ನು ಕಾಂಗ್ರೇಸ್ ಖಂಡಿಸುತ್ತದೆ ಎಂದು ತರೀಕೆರೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಚ್.ಯು. ಫಾರೂಕ್ ಹೇಳಿದರು

ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ ಮಾಜಿ ಶಾಸಕ ಡಿ.ಎಸ್. ಸುರೇಶ್ ರವರು ಹತ್ತು ವ? ಶಾಸಕರಾಗಿದ್ದರು. ಜಿ.ಎಚ್. ಶ್ರೀನಿವಾಸ್ ಶಾಸಕರಾಗಿ ೮ ವ?ವಾಗಿದೆ. ಜನರಿಗೆ ದಿಕ್ಕು ತಪ್ಪಿಸುವ ಕೆಲಸ ಆಗಬಾರದು. ಜನರಿಗೆ ಸತ್ಯಾಸತ್ಯತೆ ತಿಳಿಯಲಿ. ಆದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಯಾರ ಕಾಲದಲ್ಲಿ ಹೆಚ್ಚು ಆಗಿವೆ ಎಂಬುದಕ್ಕೆ ಬಹಿರಂಗ ಚರ್ಚೆಗೆ ಬರಲಿ. ಅವರೇ ಸ್ಥಳ ನಿಗಧಿ ಮಾಡಲಿ ಎಂದು ಸವಾಲೆಸೆದರು.

ಪಟ್ಟಣದ ಸೋಮೇಶ್ವರ ಬಡಾವಣೆಯಲ್ಲಿ ಸರ್ಕಾರದಿಂದ ರೂ. ೩.೯೭ ಕೋಟಿ ಅನುದಾನದಲ್ಲಿ ಮೌಲಾನ ಅಜಾದ್ ಮಾದರಿ ಶಾಲೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಶೋಕ್ ಎಂಬುವರು ಇದರ ಗುತ್ತಿಗೆದಾರ. ಕಾಮಗಾರಿ ಸ್ಥಳಕ್ಕೆ ಬಿಜೆಪಿ ಮುಖಂಡರೊಬ್ಬರು ಹೋಗಿ ಕಳಪೆ ಕಾಮಗಾರಿಯಾಗಿತ್ತಿದೆ ಎಂದು ಆರೋಪಿಸಿ ಕೆಲಸ ನಿಲ್ಲಿಸಲು ಗಲಾಟೆ ಮಾಡಿದ್ದಾರೆ. ಆ ಸಂದರ್ಭದಲ್ಲಿ ಗುತ್ತಿಗೆದಾರರು ಪೊಲೀಸ್ ಮೊರೆ ಹೋಗಿರಬಹುದು. ಆಗ ಪೋಲೀಸ್ ಸಿಬ್ಬಂಧಿ ಬಂದಿರಬಹುದು. ಆದರೆ ಈ ವಿಚಾರದಲ್ಲಿ ಶಾಸಕರಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದರು.

ಕಾಂಗ್ರೇಸ್ ನಗರಾಧ್ಯಕ್ಷ ಪ್ರಕಾಶ್ ವರ್ಮಾ ಮಾತನಾಡಿ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಎಲ್. ರಮೇಶ್ ರವರು ಶಾಸಕರು ಮತ್ತು ಅವರ ಪತ್ನಿ ಹಾಗೂ ಮಗಳ ಬಗ್ಗೆ ಬಹಿರಂಗವಾಗಿ ಹಗುರವಾಗಿ ಮಾತನಾಡಿರುವುದು ಸರಿಯಲ್ಲ. ಇನ್ನೊಮ್ಮೆ ಈ ರೀತಿ ಮರುಕಳಿಸಿದರೆ ಪರಿಸ್ಥಿತಿ ಸರಿ ಇರುವುದಿಲ್ಲ ಎಂದು ಹೇಳಿದರು.

ಈ ಸಂದರಭದಲ್ಲಿ ಪುರಸಭಾಧ್ಯಕ್ಷ ವಸಂತಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠನ ಸಮಿತಿ ತಾಲ್ಲೂಕು ಅಧ್ಯಕ್ಷೆ ಹೇಮಲತಾ ರೇವಣ್ಣ, ಮುಖಂಡರಾದ ಎಚ್.ಎನ್. ಮಂಜುನಾಥ್, ಪರ್ವೀನ್ ತಾಜ್, ಸಿರಾಜ್, ಗಿರೀಶ್, ಟಿ.ಆರ್. ಶ್ರೀಧರ್, ಟಿ.ಎನ್. ಜಗದೀಶ್, ಇ?ದ್, ಆದಿಲ್ ಪಾಶ, ಪರಶುರಾಮ್, ವೀರಮಣಿ ಮೊದಲಾದವರು ಭಾಗವಹಿಸಿದ್ದರು.

Protest condemned by civic forum

 

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...