Home namma chikmagalur ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ದಸಂಸ ಪ್ರತಿಭಟನೆ
namma chikmagalurchikamagalurHomeLatest News

ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ದಸಂಸ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಅಂಬೇಡ್ಕರ್ ವಾದಿ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ನಾಯಕರು ವಿಧಾನ ಪರಿಷತ್ ಸದಸ್ಯರನ್ನು ಎತ್ತಿಕಟ್ಟುತ್ತಿರುವುದನ್ನು ವಿರೋಧಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿ ಗಳು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಂಗಳವಾರ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಬಾಲಕೃಷ್ಣ ಬಿಳೇಕಲ್ಲು ಸಚಿವ ಪ್ರಿಯಾಂಕ್ ಖರ್ಗೆಯವರ ಜನಪರ ಆಡಳಿತವನ್ನು ಸಹಿಸಿಕೊಳ್ಳದ ರಾಜ್ಯದ ಬಿಜೆಪಿ ನಾಯಕರು ಎಂ.ಎಲ್.ಸಿ.ಗಳಾದ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್.ರವಿಕುಮಾರ್ ಎತ್ತಿಕಟ್ಟುತ್ತಿರುವುದು ನಾಚಿಕೇಡಿನ ಸಂಗತಿ ಎಂ ದು ಹೇಳಿದರು.

ದಲಿತ ವಿರೋಧಿ, ಅಂಬೇಡ್ಕರ್ ಸಮುದಾಯ ವಂಚಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕ್ರಮ ಕ್ಕೆ ಆಗ್ರಹಿಸುವ ಜೊತೆಗೆ ಪ್ರಿಯಾಂಕ್ ಖರ್ಗೆ ಹೆಸರಿಗೆ, ವ್ಯಕ್ತಿತ್ವಕ್ಕೆ, ಕುಟುಂಬಕ್ಕೆ ಧಕ್ಕೆ ತಂದಿರುವ ಹಾಗೂ ಜನಾಂಗಕ್ಕೆ ತಪ್ಪು ಸಂದೇಶ ರವಾನಿಸುತ್ತಿರುವ ರವಿಕುಮಾರ್, ಭಾಜಪ ಆರ್‌ಎಸ್‌ಎಸ್ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ದಸಂಸ ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದೆ ಎಂದರು.

ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ನಡೆದ ಪ್ರತಿಭಟನೆ ರ್‍ಯಾಲಿಯಲ್ಲಿ ಕಲಬುರ್ಗಿ ಜಿಲ್ಲಾ ಧಿಕಾರಿಗಳು ನೆರೆದೇಶದಿಂದ ಬಂದವರಂತೆ ಕಾಣುತ್ತಾರೆಂದು ಅಗೌರವ, ಸಂವಿಧಾನ ವಿರೋಧಿ ಪದವನ್ನು ಬಳಸಿ, ಜನರ ಹಾಗೂ ಐಎಎಸ್ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿರುವ ವಿ.ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿಕೆಯನ್ನು ಖಂಡಿಸುತ್ತೇವೆ ಎಂದು ಹೇಳಿದರು.

ಉತ್ತಮ ಆಡಳಿತ ನೀಡುತ್ತಿರುವ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಜಾ ತರನುಂ ವಿರುದ್ಧ ಅವಮಾನಕಾ ರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಕ್ಷಮೆಯಾಚಿಸುವಂತೆ ಹೈಕೋರ್ಟ್ ತಾಕಿತೂ ಮಾಡಿದೆ. ಆದರೂ ಜವಾ ಬ್ದಾರಿ ಸ್ಥಾನದಲ್ಲಿರುವ ಅವರ ನಡವಳಿಕೆ ತರವಲ್ಲ. ಕೂಡಲೇ ಎಂಎಲ್‌ಸಿ ಸ್ಥಾನದಿಂದ ಅನರ್ಹಗೊಳಿಸಬೇ ಕು ಎಂದು ಒತ್ತಾಯಿಸಿದರು.

ಪ್ರತಿಭಟನೆ ಬಳಿಕ ಬಿಜೆಪಿ ವಿಧಾನ ಪರಿಷತ್ ಸದಸ್ಯರುಗಳ ಛಲವಾದಿ ನಾರಾಯಣಸ್ವಾಮಿ ಮತ್ತು ಎನ್.ರವಿಕುಮಾರ್ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕರಾದ ಯೋಗೀಶ್, ಸತೀಶ್, ಗಿರೀಶ್, ತಾಲ್ಲೂಕು ಸಂಚಾಲಕ ಪ್ರಸನ್ನ, ಖಜಾಂಚಿ ಸಿದ್ದಪ್ಪ, ಮಹಿಳಾ ಸಂಘಟನಾ ಸಂಚಾಲಕಿ ಸರೋಜ, ಮುಖಂ ಡರುಗಳಾದ ಚಂದ್ರು, ಉಮೇಶ್, ವಸಂತ್, ರಾಜೇಶ್, ರಘು, ಪವಿತ್ರ, ಪ್ರಮಿಳಾ ಮತ್ತಿತರರು ಹಾಜರಿದ್ದರು.

Protest condemning derogatory remarks against ministers

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...