Home namma chikmagalur chikamagalur ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಧರಣಿ
chikamagalurHomeLatest Newsnamma chikmagalur

ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಧರಣಿ

Share
Share

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ ಕಾರ್ಯಕರ್ತರು ಮಂಗಳವಾರ ಜಿಪಂ ಕಚೇರಿ ಎದರು ಧರಣಿ ನಡೆಸಿದರು.

ಗ್ರಾಪಂಗಳಲ್ಲಿ ಅಟೆಂಡರ್, ಬಿಲ್ ಕಲೆಕ್ಟರ್, ಕ್ಲರ್ಕ್, ಡಿಇಒ, ವಾಟರ್‌ಮ್ಯಾನ್, ಪಂಪ್ ಆಪರೇಟರ್ ಹಾಗೂ ಸ್ವಚ್ಛತಾ ಕಾರ್ಮಿಕರು ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರು ಹಲವು ವರ್ಷಗಳಿಂದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಮಾತನಾಡಿದ ಎಐಟಿಯುಸಿ ಮುಖಂಡ ಎಸ್.ವಿಜಯಕುಮಾರ್, ೨೦೧೭ಕ್ಕೂ ಮೊದಲು ಗ್ರಾಮ ಪಂಚಾಯಿತಿಗಳ ಆದಾಯದಿಂದ ಕೇವಲ ೫೦೦ರಿಂದ ೨ ಸಾವಿರ ರೂ.ವರೆಗೆ ವೇತನ ಪಡೆಯುತ್ತಿದ್ದ ನೌಕರರಿಗೆ ಸರ್ಕಾರದಿಂದ ನೇರವಾಗಿ ವೇತನ ದೊರೆಯುವಂತೆ ಮಾಡಲು ಸಂಘಟನೆ ಹೋರಾಟ ನಡೆಸಿತ್ತು. ಅಂದಿನ ಸಚಿವ ಎಚ್.ಕೆ. ಪಾಟೀಲ್ ಅವರೊಂದಿಗೆ ಸಭೆ ನಡೆಸಿ ಮನವಿ ಸಲ್ಲಿಸುವ ಮೂಲಕ ಈ ನಿಟ್ಟಿನಲ್ಲಿ ಯಶಸ್ವಿಯಾಗಿz್ದೆÃವೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವಂತೆ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ನ್ಯಾಯಾಲಯದ ಪ್ರಕ್ರಿಯೆಯ ಬಳಿಕ ಕನಿಷ್ಠ ವೇತನ ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದರೂ, ರಾಜ್ಯ ಸರ್ಕಾರ ಕನಿಷ್ಠ ವೇತನ ಪರಿಷ್ಕರಣೆಗಾಗಿ ಉಪಸಮಿತಿ ರಚಿಸಿ ಪರಿಷ್ಕೃತ ವೇತನ ಜಾರಿಗೆ ವಿಳಂಬ ಮಾಡುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ತಕ್ಷಣ ಜಾರಿಗೊಳಿಸುವುದು, ನಿವೃತ್ತ ನೌಕರರಿಗೆ ನಿಯಮಾನುಸಾರ ನೀಡಬೇಕಾದ ಉಪದಾನ ಬಿಡುಗಡೆ ಮಾಡುವುದು, ಉಳಿಕೆ ರಜೆ ಮತ್ತು ಗಳಿಕೆ ರಜೆ ಸೌಲಭ್ಯ ಕಲ್ಪಿಸುವುದು ಹಾಗೂ ನೀರುಗಂಟಿ ಮತ್ತು ವಾಟರ್‌ಮ್ಯಾನ್‌ಗಳಿಗೆ ಕಾರ್ಯಸ್ಥಳದ ಅಂತರಕ್ಕೆ ಅನುಗುಣವಾಗಿ ಪೆಟ್ರೋಲ್ ವೆಚ್ಚ ನೀಡಬೇಕು ಎಂದು ಆಗ್ರಹಿಸಿದರು.

ಅದೇ ರೀತಿ ನೌಕರರಿಗೆ ಜಾರಿಯಲ್ಲಿರುವ ಭವಿಷ್ಯ ನಿಧಿ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ೨೦೧೭ಕ್ಕೂ ಹಿಂದಿನ ಬಾಕಿ ವೇತನವನ್ನು ಪಾವತಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಅರ್ಹತೆ ಹೊಂದಿರುವ ಹಾಲಿ ಸಿಬ್ಬಂದಿಯಿAದ ಭರ್ತಿ ಮಾಡಬೇಕು. ಹೆಚ್ಚುವರಿ ಡಿಇಒಗಳ ಸೇವೆಯನ್ನು ಅನುಮೋದಿಸಿ ಖಾಯಂ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ನೌಕರರ ಸೇವಾ ಪುಸ್ತಕ, ಈಎಸ್‌ಐ ಹಾಗೂ ಪಿಂಚಣಿ ಸೌಲಭ್ಯಗಳಿಗೆ ಆದ್ಯತೆ ನೀಡಬೇಕು. ಬಿಲ್ ಕಲೆಕ್ಟರ್‌ಗಳ ಮೇಲೆ ಮುಂಗಡ ತೆರಿಗೆ ವಸೂಲಿ ರಸೀದಿಗಳ ಹೊರೆ ಹಾಕಲಾಗುತ್ತಿದ್ದು, ಗ್ರಾಮಸ್ಥರು ತೆರಿಗೆ ಪಾವತಿಸದ ಸಂದರ್ಭದಲ್ಲೂ ಬಿಲ್ ಕಲೆಕ್ಟರ್‌ಗಳೇ ರಸೀದಿ ಬರೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಅವರು ಮಾನಸಿಕ ಹಾಗೂ ಆರ್ಥಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದರು.

ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಬಿ.ಮಂಜಪ್ಪ, ಕೆ.ಉಮೇಶ್, ವಿ.ಮೋಹನ್, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

Protest demanding fulfillment of Gram Panchayat employees’ demands

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳ ಕಳ್ಳತನ

ಚಿಕ್ಕಮಗಳೂರು: ಮನೆಗೆ ಬೀಗ ಹಾಕಿ ಮಾಲೀಕರು ದೂರದ ಊರಿಗೆ ತೆರಳಿದ್ದನ್ನೇ ಹೊಂಚು ಹಾಕಿದ ಖದೀಮರು, ಹಿಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ ನಗದನ್ನು ದೋಚಿ ಪರಾರಿಯಾಗಿರುವ...

Related Articles

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...

ಮದುವೆಗೆ ಸಿದ್ಧತೆ ನಡೆಯುತ್ತಿದ್ದ ಮನೆಯಲ್ಲಿ ಯುವಕ ಸಾವು

ಮೂಡಿಗೆರೆ: ಮದುವೆ ನಿಶ್ಚಯವಾಗಿ, ಮುಂದಿನ ತಿಂಗಳು ವಿವಾಹ ನಡೆಯಬೇಕಿದ್ದ ಯುವಕ ವಿಷ ಸೇವಿಸಿ ಮೃತಪಟ್ಟಿರುವ ಘಟನೆ...