ಚಿಕ್ಕಮಗಳೂರು: ಅಲೆಮಾರಿ ಸಮುದಾಯದವರ ಮೇಲೆ ರಾಜ್ಯ ಅಲಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ನೀಡಿರುವ ದೂರನ್ನು ವಾಪಸ್ಸು ಪಡೆದು ಅವರ ರಾಜೀನಾಮೆಗೆ ಆಗ್ರಹಿಸಿ ಪರಿಶಿಷ್ಟ ಜಾತಿ ಮತ್ತು ಪಂಗಡ ಅಲೆಮಾರಿ ಸಂಘಟನೆಗಳ ಒಕ್ಕೂಟ ನಗರದಲ್ಲಿ ಇಂದು ಪ್ರತಿಭಟನೆ ನಡೆಸಿತು.
ನಗರದ ಆಜಾದ್‌ಪಾರ್ಕಿನಲ್ಲಿ ಸಮಾವೇಶಗೊಂಡ ಅಲೆಮಾರಿ ಸಂಘಟನೆಗಳ ಒಕ್ಕೂಟದ ಹಲವಾರು ಕಾರ್ಯಕರ್ತರು ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ವಿರುದ್ಧ ಘೋಷಣೆ ಕೂಗಿದರು.
ಈ ವೆಳೆ ಮುಖಂಡರು ಮಾತನಾಡಿ, ಅಲೆಮಾರಿಗಳ ರಾಜ್ಯ ಸಮ್ಮೇಳನ ನಡೆಸಲು ಬೆಂಗಳೂರಿನಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಅವರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು. ಸಭೆಗೆ ೪೯ ಅಲೆಮಾರಿ ಸಮುದಾಯದ ಮುಖಂಡರು ಮತ್ತು ರಾಜ್ಯಾಧ್ಯಕ್ಷರನ್ನು ಮಾತ್ರ ಆಹ್ವಾನಿಸಲಾಗಿತ್ತು.
ಆಹ್ವಾನವಿಲ್ಲದಿದ್ದರೂ ಸಮ್ಮೇಳನಕ್ಕೆ ಬಂದಿದ್ದ ನಿಗಮದ ಅಧ್ಯಕ್ಷೆ ಪಲ್ಲವಿ ಅವರು, ವಿನಾಃಕಾರಣ ಗೊಂದಲ ಉಂಟುಮಾಡಿದ್ದಾರೆ. ಅವರ ಆಪ್ತ ಕಾರ್ಯದರ್ಶಿ ಆನಂದ್‌ಕುಮಾರ್ ಏಕಲವ್ಯ ಅವರು ಮುಖಂಡರಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೂಂಡಾ ವರ್ತನೆ ತೋರಿದ್ದಾರೆ. ಅಲ್ಲದೆ ಅಲೆಮಾರಿ ಸಮುದಾಯದ ೭ ಮಂದಿ ಮೇಲೆ ಕೇಸು ದಾಖಲಿಸಿದ್ದಾರೆ.
ಹೀಗಾಗಿ ಆನಂದ್‌ಕುಮಾರ್ ಏಕಲವ್ಯನನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಬೇಕು. ಅಧ್ಯಕ್ಷೆ ಪಲ್ಲವಿ ಅವರ ರಾಜೀನಾಮೆ ಪಡೆಯಬೇಕು. ಹಾಗೂ ಮುಖಂಡರ ಮೇಲೆ ಹಾಕಿರುವ ಕೇಸನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಧ್ಯಕ್ಷ ಕೆ.ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮತ್ತಿತರೆ ಪದಾಧಿಕಾರಿಗಳು ಉಪಸ್ಥಿತರಿದ್ದರು.
Protest demanding resignation of Nomad Corporation chairperson
Leave a comment