Home namma chikmagalur chikamagalur ಬಳ್ಳಾರಿ ಎಸ್ಪಿ ಅಮಾನತ್ತು ಆದೇಶ ಹಿಂಡೆಯಲು ಆಗ್ರಹಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಬಳ್ಳಾರಿ ಎಸ್ಪಿ ಅಮಾನತ್ತು ಆದೇಶ ಹಿಂಡೆಯಲು ಆಗ್ರಹಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪವನ್ ನಜ್ಜೂರ್ ಅವರ ಅಮಾನತ್ತು ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಸಮೃದಿ ಕರುನಾಡು ರಕ್ಷಣಾ ವೇದಿಕೆ ಜಿಲ್ಲಾ ಮುಖಂಡರುಗಳು ನಗರದ ಚಂದ್ರಶೇಖರ್ ಆಜಾದ್‌ವೃತ್ತದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಧಿಕ್ಕಾರ ಕೂಗಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ವೇದಿಕೆ ಜಿಲ್ಲಾಧ್ಯಕ್ಷ ಟಿ.ಎ.ಮಂಜುನಾಥ್ ಬಳ್ಳಾರಿ ಎಸ್ಪಿ ಅಧಿಕಾರ ವಹಿಸಿ ಕೊಂಡು ಕೇವಲ ೨೪ ಗಂಟೆಯಲ್ಲಿ ದುರ್ಘಟನೆ ನಡೆದಿದೆ. ಈ ಹೊಣೆ ಎಸ್ಪಿಯವರ ತಲೆಗೆ ಕಟ್ಟುವ ಮೂ ಲಕ ರಾಜ್ಯಸರ್ಕಾರ ಅಮಾನತ್ತು ಮಾಡಿರುವುದು ಖಂಡನೀಯ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲಾ ಎಸ್ಪಿ ಅಧಿಕಾರ ವಹಿಸಿಕೊಂಡ ನಂತರ ಎಲ್ಲಾ ಪೊಲೀಸ್ ಠಾಣೆಗಳ ಬಗ್ಗೆ ಕೆಲವು ಚಟು ವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಕನಿಷ್ಟ ಎರಡ್ಮೂರು ತಿಂಗಳು ಅಗತ್ಯ. ಈ ನಡುವೆ ಹೊಸ ವರ್ಷ ದಂದು ನಡೆದ ಘಟನೆಗೆ ರಾಜ್ಯಸರ್ಕಾರ ಎಸ್ಪಿ ಪವನ್ ನಜ್ಜೂರ್ ಅವರನ್ನು ಅಮಾನತಿಸಿ ಪೊಲೀಸ್ ಇಲಾ ಖೆಗೆ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದೆ ಎಂದು ದೂರಿದರು.

ಈಗಾಗಲೇ ಕಳೆದ ಎರಡು ವರ್ಷಗಳಿಂದ ಮಾಧ್ಯಮಗಳಲ್ಲಿ ಕೊಲೆ, ಸುಲಿಗೆ, ಹಲ್ಲೆ, ಕಳ್ಳತನ, ರಾಬರಿ ಪ್ರಕರಣಗಳು ಭಿತ್ತರಗೊಳ್ಳುತ್ತಿದ್ದು ಈ ಬಗ್ಗೆ ಗೃಹ ಇಲಾಖೆ ಮತ್ತು ಮುಖ್ಯಮಂತ್ರಿಗಳು ಘಟನೆಗಳು ಮರು ಕಳುಹಿಸದಂತೆ ಕ್ರಮ ಕೈಗೊಳ್ಳಬೇಕು. ಈ ಘಟನೆಗಳಿಗೆ ಉತ್ತೇಜನ ನೀಡುವುದರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕೂಡಲೇ ರಾಜ್ಯಸರ್ಕಾರ ತಪ್ಪಿತಸ್ಥರ ವಿರುದ್ಧ ಸಮಗ್ರ ತನಿಖೆ ನಡೆಸಿ ಆರೋಪಿಗಳ ಮೇಲೆ ಕೈಗೊಳ್ಳ ಬೇಕು. ಅಲ್ಲದೇ ಯಾವುದೇ ತಪ್ಪಿಗೆ ಕಾರಣವಾಗದ ಬಳ್ಳಾರಿ ಎಸ್ಪಿಯ ಆದೇಶವನ್ನು ತಕ್ಷಣವೇ ಹಿಂಪಡೆಯ ಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಬಳ್ಳಾರಿ ಎಸ್ಪಿ ಅಮಾನತ್ತು ಹಿಂಪಡೆಯಬೇಕು ಎಂದು ಜಿಲ್ಲಾ ಎಸ್ಪಿ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮುಖಂಡರುಗಳು ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ವೇದಿಕೆ ಜಿಲ್ಲಾ ಉಪಾಧ್ಯಕ್ಷ ಡಿ.ಓ. ಅಶ್ವಿನ್, ಪ್ರಧಾನ ಕಾರ್ಯದರ್ಶಿ ಜಿ.ಟಿ.ರೇಣುಕಾ, ಕಾರ್ಯದರ್ಶಿ ಜಿ.ಎಲ್.ದರ್ಶನ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಡಿ.ಕೆ.ಶೃತಿ, ಅಜ್ಜಂಪುರ ತಾಲ್ಲೂಕು ಅಧ್ಯಕ್ಷ ಮಧುಸೂದನ್ ಹಾಜರಿದ್ದರು.

Protest demanding the lifting of the suspension order of Bellary SP

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...