Home namma chikmagalur chikamagalur ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸುವಂತೆ ಆಗ್ರಹಿಸಿ ಧರಣಿ
chikamagalurHomeLatest Newsnamma chikmagalur

ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಳಿಸುವಂತೆ ಆಗ್ರಹಿಸಿ ಧರಣಿ

Share
Share
ಚಿಕ್ಕಮಗಳುರು: ಸರ್ಕಾರಿ ಶಾಲೆಗಳನ್ನು ಮುಚ್ಚುವ ಮೂಲಕ ಬಡ, ರೈತ, ಕೂಲಿ ಕಾರ್ಮಿಕ ಮಕ್ಕಳನ್ನು ಶಿಕ್ಷಣದಿಂದ ವಂಚಿಸಲಾಗುತ್ತಿದೆ ಎಂದು ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್‌ ಬೆಟ್ಟದ ಕೊಪ್ಪ ಆರೋಪಿಸಿದರು.
ತಾಲೂಕಿನ ಇಳೆಹೊಳೆ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಉಳಿಸುವಂತೆ ಆಗ್ರಹಿಸಿ ಎಐಡಿಎಸ್‌ಒ ಸಂಘಟನೆ, ವಿದ್ಯಾರ್ಥಿಗಳು ಮತ್ತು ಪೋಷಕರು ನೆತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಕೆಪಿಎಸ್‌ ಶಾಲೆ ಹೆಸರಿನಲ್ಲಿ ಸರ್ಕಾರ ಸಾರ್ವಜನಿಕ ಶಿಕ್ಷಣವನ್ನು ಸಂಪೂರ್ಣ ವಾಗಿ ಖಾಸಗೀಕರಣ ಮಾಡಲು ಹೊರಟಿದೆ. ಇಳೆಹೊಳೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 17 ಮಕ್ಕಳು ಶಿಕ್ಷಣ ಪಡೆಯುತ್ತಿದ್ದು, ವಿದ್ಯಾರ್ಥಿಗಳ ತಂದೆ ತಾಯಿ ಕಾಫಿತೋಟಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಬೆಳಿಗ್ಗೆ ಕೆಲಸಕ್ಕೆ ಹೋದರೆ ಸಂಜೆ ಬರುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಶಾಲೆ ಮುಚ್ಚಿದರೇ ಮಕ್ಕಳು ಇನ್ನೊಂದು ಊರಿಗೆ ಹೋಗಿ ಶಿಕ್ಷಣ ಪಡೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಮಕ್ಕಳ ಸುರಕ್ಷತೆಯ ಜವಬ್ದಾರಿಯನ್ನು ಯಾರು ತಗೆದುಕೊಳ್ಳುತ್ತಾರೆ. ಈ ಊರಿನ ಶಾಲೆ ಮುಚ್ಚಿದರೇ ಇವರ ಭವಿಷ್ಯವೇ ಇಲ್ಲದಂತಾಗುತ್ತದೆ ಹಾಗಾಗಿ ಈ ಶಾಲೆ ಉಳಿಯಬೇಕೆಂದು ಆಗ್ರಹಿಸಿದರು.
ಚಿಕ್ಕಮಗಳೂರು ಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶ, ಮಳೆಗಾಲದಲ್ಲಿ ತುಂಬಾ ಮಳೆ ಬೀಳುತ್ತದೆ. ಐದಾರು ಕಿಲೋ ಮೀಟರ್ ನಡೆದುಕೊಂಡು ಶಾಲೆಗೆ ಹೋಗುವುದು ತುಂಬಾ ಕಷ್ಟಕರವಾದ ಪರಿಸ್ಥಿತಿ. 1ನೇ, 2ನೇ ತರಗತಿಯ ಚಿಕ್ಕ ಮಕ್ಕಳು ಬಹಳ ಸಮಸ್ಯೆಗಳನ್ನು ಅನುಭವಿಸುತ್ತಾರೆ. ಈ ಹಿನ್ನೆಲೆಯಲ್ಲಿ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿದರು.
ರಾಜ್ಯದ 21 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳ ಕಟ್ಟಡಗಳು ಒಂದಲ್ಲ ಒಂದು ದುರಸ್ತಿಗೆ ವರ್ಷಗಳಿಂದ ಕಾಯುತ್ತಿವೆ. 3,500ಕ್ಕೂ ಅಧಿಕ ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯದ ವ್ಯವಸ್ಥೆ ಇಲ್ಲ. ಶೌಚಾಲಯವಿಲ್ಲದ ಕಾರಣ ಅನೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಮಸ್ಯೆ ಎದುರಿಸುತ್ತಿದ್ದಾರೆ. ಶಿಕ್ಷಣ ನೀತಿ ರೂಪಿಸುತ್ತಿರುವ ಸರ್ಕಾರದ ಕಣ್ಣಿಗೆ ಕಾಣುತ್ತಿಲ್ಲವೆ ಎಂದರು.
ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ ವಿದ್ಯುತ್ ಸೌಲಭ್ಯವಿಲ್ಲ ಅನೇಕ ಶಾಲೆಗಳಿಗೆ ಕುಡಿಯುವ ನೀರಿನ ಸೌಲಭ್ಯವಿಲ್ಲ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕಿ ಚೈತ್ರ , ಕಾರ್ಯಕರ್ತರಾದ ಸುಷ್ಮಾ , ಅಭಿಷೇಕ್, ಗ್ರಾಮಸ್ಥರಾದ ದೇವರಾಜು, ದಿನೇಶ್, ಕಲ್ಲೇಶ್, ಕೃಷ್ಣ, ಸಿದ್ದೇಶ್ ಸೇರಿದಂತೆ ಇತರರು ಇದ್ದರು.
Protest demanding the preservation of government lower primary school
Share

Leave a comment

Leave a Reply

Your email address will not be published. Required fields are marked *

Don't Miss

ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಅಣೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಸರಿಕೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಮೈಲಿಮನೆ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಬುಧವಾರ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ಕೆಸರಿಕೆಯ...

ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಧರಣಿ

ಚಿಕ್ಕಮಗಳೂರು:  ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಮತ್ತು ಕಾರ್ಮಿಕ ಕಲ್ಯಾಣ ಮಂಡಳಿಗೆ ಮಾಡುತ್ತಿರುವ ದ್ರೋಹವನ್ನು ಸರಿಪಡಿಸುವಂತೆ ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಬುಧವಾರ ಕಾರ್ಮಿಕರು ಪ್ರತಿಭಟನೆ...

Related Articles

ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದವರ ಬಂಧನ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತಾಂತರದ ಭೂತ ಮತ್ತೆ ದರ್ಶನ ನೀಡಿದೆ. ವಾರದ ಸಂತೆಯಲ್ಲಿ ವ್ಯಾಪಾರಕ್ಕೆ ಬಂದಿದ್ದ...

ಏ.2ಕ್ಕೆ ಕಡೂರಿನಲ್ಲಿ ದೇವರದಾಸಿಮಯ್ಯ ಜಯಂತಿ

ಚಿಕ್ಕಮಗಳೂರು: ಜಿಲ್ಲಾ ಮಟ್ಟದ ೧೦೪೬ನೇ ಶ್ರೀ ದೇವರ ದಾಸಿಮಯ್ಯನವರ ಜಯಂತಿ ಮತ್ತು ದೇವಾಂಗ ಜನಜಾಗೃತಿ ಹಾಗೂ...

ಗ್ಯಾಸ್ ಏಜೆನ್ಸಿ-ಗೋದಾಮಿನಿಂದ ಸಿಲಿಂಡರ್ ವಿತರಣೆ ಇಲ್ಲ

ಚಿಕ್ಕಮಗಳೂರು:  ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ಎಂದಿನಂತೆ ಜೇಷ್ಠತೆ ಆಧಾರದ ಮೇಲೆ ಗ್ರಾಹಕರ ಮನೆಗಳಿಗೆ ಸಂಬಂಧಿಸಿದ ಗ್ಯಾಸ್...

ಸಾರ್ವಜನಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಲು ಅವಕಾಶ

ಚಿಕ್ಕಮಗಳೂರು: ಜನಗಣತಿಯು ದೇಶದ ಜನಸಂಖ್ಯೆಯ ಗಣತಿಯ ಜೊತೆಗೆ ದೇಶದ ಸಾಮಾಜಿಕ, ಆರ್ಥಿಕ ಸ್ಥಿತಿಗತಿಗಳು ಮತ್ತು ಸಾಂಸ್ಕೃತಿಕ...