Home namma chikmagalur chikamagalur ನಿವೇಶನಕ್ಕೆ ಒತ್ತಾಯಿಸಿ ಹೋರಾಟ ವೇದಿಕೆಯಿಂದ ಪ್ರತಿಭಟನೆ
chikamagalurHomeLatest Newsnamma chikmagalur

ನಿವೇಶನಕ್ಕೆ ಒತ್ತಾಯಿಸಿ ಹೋರಾಟ ವೇದಿಕೆಯಿಂದ ಪ್ರತಿಭಟನೆ

Share
Share
ಮೂಡಿಗೆರೆ: ನಿವೇನಕ್ಕಾಗಿ ಒತ್ತಾಯಿಸಿ ತಾಲೂಕಿನ ಗೋಣಿಬೀಡು ಗ್ರಾ.ಪಂ. ಎದುರು ಗುರುವಾರ ವಸತಿಗಾಗಿ ಹೋರಾಟ ವೇದಿಕೆಯ ಮುಖಂಡರು  ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ವೇದಿಕೆಯ ಗೌರವಾಧ್ಯಕ್ಷ ಬಿ.ರುದ್ರಯ್ಯ ಮಾತನಾಡಿ, ಗೋಣಿಬೀಡು ಹೋಬಳಿ, ಕಮ್ಮರಗೋಡು ಗ್ರಾಮದ ಸರ್ವೆ ನಂ.೧೨೭ ರಲ್ಲಿ ೨.೧೫ ಎಕರೆ ಹಾಗೂ ಸರ್ವೆ ನಂ.೧೨೬ ರಲ್ಲಿ ೨೫ ಗುಂಟೆ ಒಟ್ಟು ೩ ಎಕರೆ ಸರಕಾರಿ ಭೂಮಿಯನ್ನು ಆಶ್ರಯ ನಿವೇಶನಕ್ಕಾಗಿ ಕಾಯ್ದಿರಿಸಲಾಗಿತ್ತು.
ಅಲ್ಲದೇ ಅಧಿಕಾರಿಗಳು ಸ್ಥಳ ಪರಿಶೀಲಿಸಿ ನಕಾಶೆ ತಯಾರಿಸಿದ್ದಾರೆ.  ಆದರೆ ಇದುವರೆಗೂ ಈ ಭೂಮಿಯನ್ನು ಗ್ರಾ.ಪಂ. ವ್ಯಾಪ್ತಿಗೆ ವರ್ಗಾಯಿಸದೇ ಜನವರೋಧಿ ನೀತಿ ಮತ್ತು ಭೂಮಾಲಿಕರ ವಕಾಲತ್ತು ವಹಿಸುತ್ತಿರುವುದು ಖಂಡನೀಯ. ಕೂಡಲೇ ಈ ಭೂಮಿಯನ್ನು ಪಂಚಾಯಿತಿಗೆ ವರ್ಗಾಯಿಸಬೇಕೆಂದು ಆಗ್ರಹಿಸಿದರು.
ವೇದಿಕೆ ಅಧ್ಯಕ್ಷ ಕೆ.ಕೆ.ಕೃಷ್ಣಪ್ಪ ಮಾತನಾಡಿ, ಸರ್ವೆ ನಂ.೧೪೪ ರಲ್ಲಿ ಈಗಾಗಲೇ ಕಳೆದ ೧೦ ವರ್ಷದಿಂದ ಆಶ್ರಯ ನಿವೇಶನಕ್ಕೆ ಕಾಯ್ದಿರಿಸಿರುವ ಜಾಗದಲ್ಲಿ ನಿವೇಶನ ಕಲ್ಪಿಸುವಂತೆ ಹಲವು ಬಾರಿ ಹೋರಾಟ ನಡೆಸಿದರೂ ಇದೂವರೆಗೂ ಫಲಾನುಭವಿಗಳ ಪಟ್ಟಿ ಆಯ್ಕೆ ಮಾಡದೇ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಈ ಜಾಗದಲ್ಲಿ ಈಗಾಗಲೇ ೨ ಅಕ್ರಮ ಮನೆ ನಿರ್ಮಿಸುತ್ತಿದ್ದು, ಈ ಬಗ್ಗೆ ದೂರು ನೀಡಲಾಗಿದ್ದು,
ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕೂಲಿ ಲೈನಿನ ವಾಸಿಗಳು ಮತ್ತು ಬಾಡಿಗೆ ಮನೆ ವಾಸಿಗಳ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ ನಿವೇಶನ ಕಲ್ಪಿಸಬೇಕು. ವಿಳಂಬ ನೀತಿ ಅನುಸರಿಸಿದರೆ ಗುಡಿಸಲು ನಿರ್ಮಿಸಲು ಮುಂದಾಗುವುದಾಗಿ ಎಚ್ಚರಿಕೆ ನೀಡಿದರು. ಬಳಿಕ ಪಿಡಿಒ ಸಿಂಚನಾ ಅವರಿಗೆ ಮನವಿ ಸಲ್ಲಿಸಿದರು.
ವೇದಿಕೆಯ ಕಾರ್ಯದರ್ಶಿ ರಾಜೇಶ್, ಜಾನಕಿ, ಯಶೋಧ, ಎಚ್.ಸುರೇಶ್, ರವಿ, ರಾಜೇಶ್, ಭಾಗ್ಯ, ಮಂಜುಳ ಮತ್ತಿತರರಿದ್ದರು.
Protest from the Harota Vedika demanding a site
Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....