ಮೂಡಿಗೆರೆ: ವಿವಾಹಿತ ಮಹಿಳೆಯೊಂದಿಗೆ ಅನ್ಯಕೋಮಿನ ಯುವಕನೊಬ್ಬ ಪರಾರಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತ ಪಡಿಸಿದರು.
ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರು ಏಳು ವರ್ಷದ ಹಿಂದೆ ವಿವಾಹವಾಗಿದ್ದು ಮೂರು ತಿಂಗಳ ಹಿಂದೆ ಮೂಡಿಗೆರೆ ಹ್ಯಾಂಡ್ ಪೋಸ್ಟ್‌ನ ಕಾಫಿ ಲಿಂಕ್ಸ್ ಅಂಗಡಿಯೊಂದಕ್ಕೆ ಕೆಲಸಕ್ಕೆಂದು ಸೇರಿದ್ದರು.
ಆ ಅಂಗಡಿಯಲ್ಲಿ ಪರಿಚಯವಾದ ಕೇರಳ ಮೂಲದ ಅನ್ಯಕೋಮಿನ ಯುವಕನೊಂದಿಗೆ ಪರಿಚಯವಾಗಿದ್ದು ಕೆಲದಿನಗಳ ಹಿಂದೆ ಆ ಯುವಕ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದಾನೆ. ಮಹಿಳೆಯ ಪತಿ ವಿಷಯ ತಿಳಿದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೇ ಗುರುವಾರ ಬಣಕಲ್ ಪೊಲೀಸ್ ಠಾಣೆ ಬಳಿ ಜಮಾಯಿಸಿದ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಅನ್ಯಕೋಮಿನ ಯುವಕನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಪೊಲೀಸ್ ಠಾಣೆ ಬಳಿ ಬರುತ್ತಿದ್ದಂತೇ ಠಾಣೆಯ ಗೇಟ್ ಹಾಕಿದ್ದ ಹಿನ್ನಲೆಯಲ್ಲಿ ಕಾರ್ಯಕರ್ತರು ಆಕ್ರೋಶಗೊಂಡು ಕೆಲ ಕಾಲ ಬಣಕಲ್ ಮುಖ್ಯರಸ್ತೆ ತಡೆ ನಡೆಸಿದರು. ನಂತರ ಪೊಲೀಸ್ ಠಾಣೆಯ ಒಳಗೆ ಬಿಡುವ ಭರವಸೆ ನೀಡಿದ ನಂತರ ರಸ್ತೆ ತಡೆ ಕೈಬಿಡಲಾಯಿತು.
Protest in front of the police station in Banakal
Leave a comment