Home Latest News ಬಣಕಲ್‌ನಲ್ಲಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
Latest NewschikamagalurCrime NewsHomenamma chikmagalur

ಬಣಕಲ್‌ನಲ್ಲಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ

Share
Share

ಮೂಡಿಗೆರೆ: ವಿವಾಹಿತ ಮಹಿಳೆಯೊಂದಿಗೆ ಅನ್ಯಕೋಮಿನ ಯುವಕನೊಬ್ಬ ಪರಾರಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಹಿಂದೂಪರ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತ ಪಡಿಸಿದರು.

ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ಮಹಿಳೆಯೊಬ್ಬರು ಏಳು ವರ್ಷದ ಹಿಂದೆ ವಿವಾಹವಾಗಿದ್ದು ಮೂರು ತಿಂಗಳ ಹಿಂದೆ ಮೂಡಿಗೆರೆ ಹ್ಯಾಂಡ್ ಪೋಸ್ಟ್‌ನ ಕಾಫಿ ಲಿಂಕ್ಸ್ ಅಂಗಡಿಯೊಂದಕ್ಕೆ ಕೆಲಸಕ್ಕೆಂದು ಸೇರಿದ್ದರು.

ಆ ಅಂಗಡಿಯಲ್ಲಿ ಪರಿಚಯವಾದ ಕೇರಳ ಮೂಲದ ಅನ್ಯಕೋಮಿನ ಯುವಕನೊಂದಿಗೆ ಪರಿಚಯವಾಗಿದ್ದು ಕೆಲದಿನಗಳ ಹಿಂದೆ ಆ ಯುವಕ ವಿವಾಹಿತ ಮಹಿಳೆಯೊಂದಿಗೆ ಪರಾರಿಯಾಗಿದ್ದಾನೆ. ಮಹಿಳೆಯ ಪತಿ ವಿಷಯ ತಿಳಿದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೇ ಗುರುವಾರ ಬಣಕಲ್ ಪೊಲೀಸ್ ಠಾಣೆ ಬಳಿ ಜಮಾಯಿಸಿದ ಹಿಂದೂಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಅನ್ಯಕೋಮಿನ ಯುವಕನ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಪೊಲೀಸ್ ಠಾಣೆ ಬಳಿ ಬರುತ್ತಿದ್ದಂತೇ ಠಾಣೆಯ ಗೇಟ್ ಹಾಕಿದ್ದ ಹಿನ್ನಲೆಯಲ್ಲಿ ಕಾರ್ಯಕರ್ತರು ಆಕ್ರೋಶಗೊಂಡು ಕೆಲ ಕಾಲ ಬಣಕಲ್ ಮುಖ್ಯರಸ್ತೆ ತಡೆ ನಡೆಸಿದರು. ನಂತರ ಪೊಲೀಸ್ ಠಾಣೆಯ ಒಳಗೆ ಬಿಡುವ ಭರವಸೆ ನೀಡಿದ ನಂತರ ರಸ್ತೆ ತಡೆ ಕೈಬಿಡಲಾಯಿತು.

Protest in front of the police station in Banakal

 

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....