Home namma chikmagalur chikamagalur ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ
chikamagalurHomeLatest Newsnamma chikmagalur

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ ಪಂಚಾಯಿತಿಯಲ್ಲಿರುವ ಶಾಲೆಗೆ ಸಂಯೋಜನೆ ಮಾಡುವ ಮೂಲಕ ಮುಚ್ಚಲಾಗುತ್ತಿದೆ ಎಂದು ಆರೋಪಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಗ್ರಾಮಸ್ಥರು ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಸಂಚಾಲಕಿ ಚೈತ್ರ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆ ಮುಚ್ಚಿ ಇಲ್ಲಿನ ವಿದ್ಯಾರ್ಥಿಗಳನ್ನು ಮೈಲಿಮನೆ ಶಾಲೆಗೆ ಕಳುಹಿಸಲಾಗುತ್ತದೆ. ಈ ರೀತಿ ಚಿಕ್ಕಮಗಳೂರಿನಲ್ಲಿ ಅಂದಾಜು ೧೦೦೦ ಶಾಲೆಗಳನ್ನು ಮುಚ್ಚಲು ಪಟ್ಟಿ ತಯಾರಿಸಲಾಗಿದೆ. ರಾಜ್ಯವ್ಯಾಪಿ ೪೦ ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ದೂರಿದರು.

ಗ್ರಾಮದ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯರವರಲ್ಲಿ ಒಬ್ಬರಾದ ಮಹೇಶ್ ಮಾತನಾಡಿ, ೬ನೇ ಕ್ಲಾಸಿನಿಂದಲೇ ಕೆಪಿಎಸ್ ಶಾಲೆಯಲ್ಲಿ ಅಡಕೆ ಸುಲಿಯುವುದು ಸೇರಿದಂತೆ ಇತರೆ ಕಸುಬುಗಳನ್ನು ಕಲಿಸುವುದಾಗಿ ಸರ್ಕಾರ ಹೇಳಿದೆ. ಸಮಾಜದ ತಳಸಮುದಾಯದ ಮಕ್ಕಳ ವಿದ್ಯೆ ಕಸಿದು ಕೂಲಿಗೆ ಕಳಿಸುವ ಸರ್ಕಾರದ ಹುನ್ನಾರವನ್ನು ನಾವು ಒಪ್ಪುವುದಿಲ್ಲ. ಈ ಯೋಜನೆ ರದ್ದಾಗುವವರೆಗೂ ನಿರಂತರವಾಗಿ ಹೋರಾಟ ನಡೆಸುತ್ತೇವೆ. ನಮ್ಮ ಶಾಲೆ ಮುಚ್ಚಲು ನಾವು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಂಘಟನೆಯ ಅಧ್ಯಕ್ಷೆ ಚೈತ್ರಾ , ಉಪಾಧ್ಯಕ್ಷ ಪುರುಷೋತ್ತಮ್, ಜೋಳದಾಳು ಗ್ರಾಮಸ್ಥರಾದ ಮಹೇಶ್, ಶೇಖರ್, ಭರತ್, ಕಮಲಾಕ್ಷಿ, ನಿರ್ಮಲ, ಪರಮೇಶ್, ಪುಟ್ಟಸ್ವಾಮಿ, ಹರೀಶ್, ಮನೋಹರ್, ಶಾರದಾ, ಪವಿತ್ರ, ಸುನೀತಾ ಮತ್ತಿತರರಿದ್ದರು.

Protest in Jholdal village led by student organization

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....