Home namma chikmagalur chikamagalur ಬಾಕಿ ಅನುದಾನ ಬಿಡುಗಡೆಗೆ ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ ಆಗ್ರಹ
chikamagalurHomeLatest Newsnamma chikmagalur

ಬಾಕಿ ಅನುದಾನ ಬಿಡುಗಡೆಗೆ ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ ಆಗ್ರಹ

Share
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 0; brp_mask:0; brp_del_th:null; brp_del_sen:null; motionR: 0; delta:1; bokeh:1; module: photo;hw-remosaic: false;touch: (-1.0, -1.0);sceneMode: 7864320;cct_value: 0;AI_Scene: (-1, -1);aec_lux: 240.47885;aec_lux_index: 0;albedo: ;confidence: ;motionLevel: 0;weatherinfo: null;temperature: 37;
Share

ಚಿಕ್ಕಮಗಳೂರು: ಇಲ್ಲಿನ ಪ್ರೊಟೆಸ್ಟಂಟ್ ಕ್ರೈಸ್ತರ ಅಭಿವೃದ್ಧಿಗೆ ಬಾಕಿ ಉಳಿದಿರುವ ೧೬೫ ಕೋಟಿ ರೂಗಳನ್ನು ಈ ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಬೇಕೆಂದು ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ ಅಧ್ಯಕ್ಷ ಕೆ.ಕೆ. ವರ್ಗೀಸ್ ಮನವಿ ಮಾಡಿದರು.

ಅವರು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೨೫-೨೬ನೇ ಸಾಲಿನಲ್ಲಿ ಕೆಸಿಸಿಡಿಸಿಎಲ್ ಗೆ ೨೫೦ ಕೋಟಿ ರೂ ಘೋಷಿಸಿದ್ದು, ಈ ಪೈಕಿ ಕೇವಲ ೮೫ ಕೋಟಿ ರೂಗಳನ್ನು ಬಿಡುಗಡೆ ಮಾಡಲಾಗಿದೆ. ಕ್ರೈಸ್ತ ಸಮುದಾಯದ ಜನಸಂಖ್ಯೆ ಮತ್ತು ಅಗತ್ಯಗಳನ್ನು ಪೂರೈಸಲು ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಕ್ರೈಸ್ತ ಸಮುದಾಯಗಳಿಗೆ ಜಿಲ್ಲೆ, ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಸಮಾಧಿ ಸ್ಥಳಗಳಿಗೆ ಜಾಗವನ್ನು ಮೀಸಲಿಡಬೇಕು, ರಾಜ್ಯಾದ್ಯಂತ ಕ್ರೈಸ್ತ ಸಮುದಾಯ ಭವನವನ್ನು ನಿರ್ಮಿಸಬೇಕು, ಪಾಸ್ಟರ್‌ಗಳಿಗೆ ಮುಜುರಾಯಿ ಇಲಾಖೆ ಅಡಿಯಲ್ಲಿ ಮಾಸಿಕ ಗೌರವಧನ ನೀಡಬೇಕು ಹಾಗೂ ಗುರುತಿನ ಚೀಟಿ ವಿತರಿಸುವಂತೆ ಆಗ್ರಹಿಸಿದರು.

ಪ್ರಸ್ತುತ ಅಲ್ಪಸಂಖ್ಯಾತರ ನಿರ್ದೇಶನಾಲಯ ನೀಡುತ್ತಿರುವ ವಿದ್ಯಾರ್ಥಿ ವೇತನಗಳು , ವಸತಿ ನಿಲಯಗಳು, ಶಿಕ್ಷಣ ಸಹಾಯ, ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಸಮುದಾಯ ಅಭಿವೃದ್ಧಿ ಯೋಜನೆಗಳು, ಉದ್ಯೋಗ ಮತ್ತು ಜೀವನೋಪಾಯ ಯೋಜನೆಗಳು ಸೇರಿದಂತೆ ಎಲ್ಲಾ ಯೋಜನೆಗಳನ್ನು ಕ್ರೈಸ್ತ ಸಮುದಾಯಕ್ಕೆ ವಿಸ್ತರಿಸಬೇಕೆಂದು ವಿನಂತಿಸಿದರು.

ಕ್ರೈಸ್ತರ ಇತಿಹಾಸ, ಸಾಹಿತ್ಯ, ಸಂಸ್ಕೃತಿ ಮತ್ತು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸಂರಕ್ಷಿಸಲು ಬೆಂಗಳೂರಿನಲ್ಲಿ ಕ್ರೈಸ್ತ ಪರಂಪರೆ ಸಂಗ್ರಹಾಲಯವನ್ನು ಸ್ಥಾಪಿಸಬೇಕು. ಕ್ರೈಸ್ತ ಅಧ್ಯಯನ ಮತ್ತು ಸಾಂಸ್ಕೃತಿಕ ಕೇಂದ್ರಗಳನ್ನು ಉತ್ತೇಜಿಸುವ ಜೊತೆಗೆ ಯುವಕರಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಆರಂಭಿಸಬೇಕೆಂದು ಹೇಳಿದರು.

ಕ್ರೈಸ್ತರಿಗೆ ಪ್ರತ್ಯೇಕ ೨ಸಿ ವರ್ಗವನ್ನು ರಚಿಸಬೇಕು. ಹಿಂದಿನ ಸರ್ಕಾರ ಜಾರಿಗೆ ತಂದಿರುವ ಮತಾಂತರ ವಿರೋಧಿ ಕಾಯ್ದೆಯನ್ನು ರದ್ದುಪಡಿಸಿ ಧಾರ್ಮಿಕ ಸ್ವಾತಂತ್ರ್ಯ, ಸಾಮಾಜಿಕ ಸೌಹಾರ್ಧತೆಗೆ ಸಹಕರಿಸಬೇಕೆಂದು ವಿನಂತಿಸಿದರು.

ಕ್ರೈಸ್ತ ಸಂಸ್ಥೆಗಳನ್ನು ರಕ್ಷಣೆ ಮಾಡಬೇಕು, ಕ್ರೈಸ್ತ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ನೆರವು ನೀಡುವ ಜೊತೆಗೆ ಯೆರೂಸಲೇಮ್ ಯಾತ್ರೆಗೆ ಕ್ರೈಸ್ತರಿಗೆ ಆರ್ಥಿಕ ನೆರವು ನೀಡಬೇಕೆಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕ್ರೈಸ್ತರ ಮಹಾಸಭಾ ಮುಖಂಡರುಗಳಾದ ಸುಂದರಬಾಬು, ರಮೇಶ್‌ಪ್ರಾನ್ಸಿಸ್, ಸುರೇಶ್‌ಜಾಕೋಬ್, ವಿ.ಪಿ. ರಂಗ ಉಪಸ್ಥಿತರಿದ್ದರು.

Protestant Christian Conference demands release of outstanding funds

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ ಬಳಸಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಕನ್ನಡಸೇನೆ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಭಂವರ್‌ಸಿಂಗ್...

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ

ಮೂಡಿಗೆರೆ: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕೊನೆಗೂ ಮಳೆಗಾಲದ ದರ್ಶನವಾಗಿದ್ದು, ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಒಂದೆಡೆ ಆತಂಕ, ಮತ್ತೊಂದೆಡೆ ಹರ್ಷದ ವಾತಾವರಣ ನಿರ್ಮಾಣವಾಗಿದೆ. ಮಳೆಗಾಲ ಆರಂಭವಾಗಿ ತಿಂಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಬಾರದ...

Related Articles

ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಗುದ್ದಲಿ ಪೂಜೆ

ಚಿಕ್ಕಮಗಳೂರು: ಆರೋಗ್ಯ, ಶಿಕ್ಷಣ ಮತ್ತು ಜನರ ಬದುಕಿಗಾಗಿ ಆದ್ಯತೆಯ ಮೇಲೆ ಕೆಲಸ ಮಾಡಬೇಕಾಗಿರುವುದು ಚುನಾಯಿತ ಪ್ರತಿನಿಧಿಗಳ...

ಹಂದಿ ಬೇಟೆ: 7 ಜನರ ಬಂಧನ

ಕಡೂರು: ತಾಲ್ಲೂಕಿನ ಮಲ್ಲಾಘಟ್ಟ ಗ್ರಾಮದಿಂದ ಸಿಂಗಟಗೆರೆಗೆ ಹೋಗುವ ರಸ್ತೆಯಲ್ಲಿ ಭಾನುವಾರ ಮುಂಜಾನೆ ಹಂದಿ ಬೇಟೆಗೆ ಬಂದಿದ್ದ...

ಕೈಕುಸ್ತಿ(ಪಂಝಾ)ಆಡುತ್ತಿದ್ದ ವೇಳೆ ಯುವಕನ ಸಾವು

ಕಡೂರು:  ಕೈಕುಸ್ತಿ(ಪಂಝಾ)ಆಡುತ್ತಿದ್ದ ಸ್ನೇಹಿತರುಗಳ ನಡುವೆ ನಡೆದ ಮಾತಿನಚಕಮಕಿಯಿಂದ ಮಾರಣಾಂತಿಕ ಹಲ್ಲೆಗೆ ತಿರುಗಿ ಯುವಕನೊಬ್ಬನು ಮೃತಪಟ್ಟಿದ್ದು, ಕೊಲೆ...

ಉದ್ಯಮ ವಿಸ್ತರಣೆಗೆ ‘ಇ-ಹರಾಜು’ ಸುವರ್ಣಾವಕಾಶ

ಚಿಕ್ಕಮಗಳೂರು:  ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮದ್ಯದ ಅಂಗಡಿಗಳ ಲೈಸೆನ್ಸ್ ಇ-ಹರಾಜು ಪ್ರಕ್ರಿಯೆಯು ಜಿಲ್ಲೆಯ ಹಾಗೂ...