Home namma chikmagalur ಅಭಿವೃದ್ಧಿ ಕೆಲಸಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ
namma chikmagalurHomeLatest News

ಅಭಿವೃದ್ಧಿ ಕೆಲಸಗಳಿಗೆ ಸಾರ್ವಜನಿಕರ ಸಹಕಾರ ಅಗತ್ಯ

Share
Share

ಚಿಕ್ಕಮಗಳೂರು: ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸರ್ಕಾರದ ವಿಶೇಷ ಅನುದಾನವನ್ನು ನಗರಕ್ಕೆ ನೀಡಿದ್ದು ಅದರ ಭಾಗವಾಗಿ ರಸ್ತೆ ಡಾಂಬರೀಕರಣಕ್ಕೆ ಗುದ್ಧಲಿ ಪೂಜೆ ನೆರೆವೇರಿಸಲಾಗುತ್ತಿದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು.

ಅವರು ಇಂದು ಹಿರೇಮಗಳೂರು ಮುಖ್ಯ ರಸ್ತೆಗೆ ೩೩.೭೦ ಕಲ್ಯಾಣ ನಗರ ರಸ್ತೆ ಕಾಮಗಾರಿಗೆ ೩೬.೦೦, ಹೌಸಿಂಗ್ ಬೋರ್ಡ್ ರಸ್ತೆ ಕಾಮಗಾರಿಗೆ ೨೫.೦೦ ವೆಚ್ಚದಲ್ಲಿ ವಿವಿಧ ರಸ್ತೆ ಡಾಂಬರೀಕರಣಕ್ಕೆ ಶಂಕುಸ್ಥಾಪನೆ ನೆರೆವೇರಿಸಿ ಮಾತನಾಡಿ ಚಿಕ್ಕಮಗಳೂರು ನಗರದಲ್ಲಿ ಹಲವು ರಸ್ತೆಗಳು ಗುಂಡಿ ಬಿದ್ದಿದ್ದು, ನನ್ನ ಹುಟ್ಟೂರು ಆದ ಹಿರೇಮಗಳೂರಿನ ಮುಖ್ಯ ರಸ್ತೆ ಅತಿ ಹೆಚ್ಚು ಗುಂಡಿ ಬಿದ್ದು ಹಾಳಾಗಿದ್ದು ಸರ್ಕಾರದ ವಿಶೇಷ ಅನುದಾನದಡಿ ೩೩.೭೦ ಲಕ್ಷ ರೂ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗುತ್ತಿದೆ, ನಂತರ ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿಗೆ ಹಂತ-ಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

ನಾವು ಓದಿದ ಶಾಲೆಯ ೧ ರಿಂದ ೭ನೇ ತರಗತಿಗಳನ್ನು ಆಧುನಿಕ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ ಹಾಗೂ ಕೋದಂಡ ರಾಮ ಸ್ವಾಮಿ ದೇವಾಲಯದ ಜೊತೆಗೆ ಹಲವಾರು ದೇವಾಲಯಗಳ ಪುನಶ್ಚೇತನ ಕಾರ್ಯ ಪ್ರಾರಂಭಗೊಂಡಿದ್ದು ಶೀಘ್ರದಲ್ಲಿ ಮುಕ್ತಾಯ ಗೊಳಿಸಲಾಗುವುದು, ಬಡವರ ಪರವಾದ ೫ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಬಡವರ ಪರವಾದ ಕೆಲಸಗಳನ್ನು ಸಿದ್ಧರಾಮಯ್ಯ, ಡಿ.ಕೆ ಶಿವಕುಮಾರ್ ರವರ ನೇತೃತ್ವದ ಸರ್ಕಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸೈಕಲ್ ತುಳಿ ಸಮಸ್ಯೆ ತಿಳಿ ಎಂದು ಸೈಕಲ್‌ನಲ್ಲಿ ನಗರ ಪ್ರದಕ್ಷಿಣೆ ಮಾಡುವ ಮೂಲಕ ನಗರದ ಸಮಸ್ಯೆಯನ್ನು ಪ್ರಾಮಾಣಿಕವಾಗಿ ತಿಳಿದುಕೊಳ್ಳುವ ಕೆಲಸವನ್ನು ಮಾಡಲಾಗುತ್ತಿದೆ, ನಗರದ ನಾಗರೀಕರಿಂದ ಉತ್ತಮ ಸ್ಪಂದನೆಯು ದೋರಕಿದೆ, ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವನ್ನು ಸಹ ಮಾಡಲಾಗುತ್ತಿದೆ ಎಂದರು.

ಹಿರೇಮಗಳೂರು ಶ್ರೀದೇವಿ ಯುವಕ ಸಂಘದಿಂದ ನಮ್ಮ ರಾಜಕೀಯ ಜೀವನ ಪ್ರಾರಂಭಗೊಂಡು ಶ್ರೀ ಕೊದಂಡ ರಾಮ ಸ್ವಾಮಿಯ ಸಂಚಾಲಕನಾಗಿ ಇಂದು ೭ ಕೋಟಿ ಜನಸಂಸ್ಯೆಯಲ್ಲಿ ೨೨೪ ಜನರು ಮಾತ್ರ ವಿಧಾನ ಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಅವಕಾಶವಿದ್ದು, ಅವರಲ್ಲಿ ನಾನು ಒಬ್ಬನಾಗಿ ಪ್ರಮಾಣ ವಚನ ಸ್ವೀಕರಿಸಿರುವುದು ಪ್ರಪಂಚ ಇರುವ ವರೆಗೂ ದಾಖಲೆಯಲ್ಲಿ ಉಳಿಯುವುದಾಗಿ ತಿಳಿಸಿದರು.

ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ ಶಾಸಕರು ೨೭.೫ ಕೋಟಿ ರೂಗಳ ಅನುದಾನ ತಂದು ನಗರದ ಎಲ್ಲಾ ರಸ್ತೆಗಳ ಡಾಂಬರೀಕರಣಕ್ಕೆ ಚಾಲನೆ ನೀಡಲಾಗುತ್ತಿದೆ, ಇದೇ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾ ಬಾಯಿ, ಸದಸ್ಯರಾದ ಎ,ಸಿ ಕುಮಾರೆಗೌಡ, ಕವಿತಾ ಶೇಖರ್, ಅರುಣ್ ಕುಮಾರ್, ವರಸಿದ್ಧಿ ವೇಣುಗೋಪಾಲ್, ಇಂದಿರಾ ಶಂಕರ್, ಪರಮೇಶ್ ರಾಜ್ ಅರಸ್, ಗುರುಮಲ್ಲಪ್ಪ, ಲಕ್ಷ್ಮಣ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜೇಗೌಡ, ಗ್ರಾಮಸ್ಥರಾದ ಹೆಚ್.ಎಂ ನಾರಾಯಣ್, ನಗರಾಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತರಾದ ಸುರೇಶ್, ಕಾಂಗ್ರೆಸ್ ಮುಖಂಡರಾದ ರಾಮಚಂದ್ರ, ಜಗಧೀಶ್, ಗಂಗಾಧರ್, ಶಿವಣ್ಣ, ರಮೇಶ್, ಶಿವಣ್ಣ, ಸುರೇಶ್, ವೆಂಕಟೇಶ್, ಯೋಗೀಶ್, ಲೋಕಣ್ಣ, ಚಂದ್ರಪ್ಪ, ಪ್ರಸಾದ್ ಅಮೀನ್, ಪುಟ್ಟಸ್ವಾಮಿ, ರಾಮಣ್ಣ, ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Public cooperation is needed for development work.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...