ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಲಿಪಿಕ ನೌಕರರು ಮತ್ತು ವಾಹನ ಚಾಲಕರು ಹಾಗೂ ಡಿ,ಗ್ರೂಪ್ ನೌಕರರ ಸಂಘಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಟಿ.ಪೂರ್ಣೇಶ್ ಅತ್ಯಧಿಕ ಮತ ಪಡೆದು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪಿ.ಟಿ.ನವೀನ್,ಖಜಾಂಚಿಯಾಗಿ ಶ್ರೀನಿವಾಸ್, ಕಾರ್ಯದರ್ಶಿ ಯಾಗಿ ಸತೀಶ್ ಮತ್ತು ಸಹ ಕಾರ್ಯದರ್ಶಿಯಾಗಿ ಮಹಮ್ಮದ್ ಉಸ್ಮಾನ್ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ಎಸ್.ಟಿ.ಪೂರ್ಣೇಶ್ ಈಗಾಗಲೇ ಜಿಲ್ಲಾ ಸರ್ಕಾರಿ ನೌಕರರ ಸಂಘದ ಖಜಾಂಚಿ ಯಾಗಿದ್ದು ನೌಕರರ ಸಂಘಟನೆ ಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
Purnesh elected as president
Leave a comment