Home namma chikmagalur chikamagalur ಪೂರ್ವಿ ಗಾನಯಾನ 115 ನಗರದಲ್ಲಿ ನಾಳೆ `ಅವತರಿಸು ಬಾ’
chikamagalurHomeLatest Newsnamma chikmagalur

ಪೂರ್ವಿ ಗಾನಯಾನ 115 ನಗರದಲ್ಲಿ ನಾಳೆ `ಅವತರಿಸು ಬಾ’

Share
Share
ಚಿಕ್ಕಮಗಳೂರು: ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ, ಕರ್ನಾಟಕ ಸುಗಮ ಸಂಗೀತ ಪರಿಷತ್ತು ಚಿಕ್ಕಮಗಳೂರು ಘಟಕ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಡಾ.ಸಿ.ಅಶ್ವತ್ಥ್ ಜನ್ಮ ದಿನಾಚರಣೆಯ ಪ್ರಯುಕ್ತ `ಅವತರಿಸು ಬಾ’ ಶೀರ್ಷಿಕೆಯಡಿ ಡಾ.ಸಿ.ಅಶ್ವತ್ಥ್ ಸ್ವರ ಸಂಯೋಜನೆಯ ಕಾವ್ಯ ಗಾಯನ ಕಾರ್ಯಕ್ರಮವು ನಗರದ ಎಂಇಎಸ್ ಸಭಾಂಗಣದಲ್ಲಿ  ಡಿಸೆಂಬರ್ ೨೯ ರಂದು ಸಂಜೆ ೬ ಗಂಟೆಗೆ ನಡೆಯಲಿದೆ.
ಮಲೆನಾಡು ವಿದ್ಯಾಸಂಸ್ಥೆ, ಲಯನ್ಸ್ ಸಂಸ್ಥೆ ಹಾಗೂ ಕಲ್ಕಟ್ಟೆ ಪುಸ್ತಕದ ಮನೆಯ ಸಹಕಾರದಲ್ಲಿ ನಡೆಯುವ ಪೂರ್ವಿ ಗಾನಯಾನ ೧೧೫ ಸರಣಿಯ ಈ ಕಾರ್ಯಕ್ರಮವನ್ನು ಸುಗಮ ಸಂಗೀತ ಗಂಗಾದ ಉಪಾಧ್ಯಕ್ಷ ಸ.ಗಿರಿಜಾಶಂಕರ ಉದ್ಘಾಟಿಸಲಿದ್ದು, ಯುರೇಕಾ ಅಕಾಡೆಮಿಯ ಸಂಸ್ಥಾಪಕ ದೀಪಕ್ ದೊಡ್ಡಯ್ಯ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಸುಗಮ ಸಂಗೀತ ಪರಿಷತ್ತು ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ನುಡಿನಮನ ಸಲ್ಲಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಪೂರ್ವಿ ತಂಡದ ಮುಖ್ಯಸ್ಥ ಎಂ.ಎಸ್.ಸುಧೀರ್ ನೇತೃತ್ವದಲ್ಲಿ ನಡೆಯುವ ಕಾವ್ಯ ಗಾಯನದಲ್ಲಿ ಹೆಚ್.ಎಂ.ನಾಗರಾಜರಾವ್, ಚೇತನ್‌ರಾಮ್, ರೂಪ ಅಶ್ವಿನ್, ಅನುಷ, ಪೃಥ್ವಿಶ್ರೀ, ಮೇಘ, ಚಿನ್ಮಯಿ ಕೆ.ಎಸ್., ಮಾನ್ಯ ಭಟ್ ಎಸ್.ಆರ್., ಮಾನ್ಯತ ಎಸ್,, ರಚನಾ ಕೆ.ಎಸ್., ಅದ್ವಿತ್ ದೇಶ್, ಮಂಥನ್ ಭಟ್ ಹಾಗೂ ಆದ್ವಿಕಾ ಇವರುಗಳು ಡಾ.ಸಿ.ಅಶ್ವತ್ಥ್ ಸ್ವರ ಸಂಯೋಜನೆಯ ಗೀತೆಗಳಿಗೆ ಧ್ವನಿಯಾಗಲಿದ್ದಾರೆ.
Purvi Ganayana 115 to be ‘incarnated’ tomorrow in the city
Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...