Home Crime News ರೈಲ್ವೆ ಇಲಾಖೆಯ ಉದ್ಯೋಗಿಯ ಮೇಲೆ ಹಲ್ಲೆ
Crime NewsHomeKadurLatest Newsnamma chikmagalur

ರೈಲ್ವೆ ಇಲಾಖೆಯ ಉದ್ಯೋಗಿಯ ಮೇಲೆ ಹಲ್ಲೆ

Share
Share

ಕಡೂರು: ತಾಲೂಕಿನ ಚೌಳಹಿರಿಯೂರಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ರೈಲ್ವೆ ಇಲಾಖೆಯ ಉದ್ಯೋಗಿಯ ಮೇಲೆ ಹಲ್ಲೆ ನಡೆದಿದ್ದು, ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸದುರ್ಗ ತಾಲೂಕಿನ ಎಂ.ಜಿ. ದಿಬ್ಬದ ನಿವಾಸಿಯಾದ ರೈಲ್ವೆ ನೌಕರ ಯತೀಶ್ ಕುಮಾರ್ ಮತ್ತು ಅವರ ತಮ್ಮ ಮೋಹನ್ ಹಲ್ಲೆಗೊಳಗಾದವರು. ಹಬ್ಬದ ಪ್ರಯುಕ್ತ ತಂಗಿಯ ಮನೆಗೆ ಹೋಗುತ್ತಿದ್ದಾಗ ಪೆಟ್ರೋಲ್ ಬಂಕ್ ಬಳಿ ಪರಿಚಿತರಾದ ಪುಟ್ಟರಾಜು ಎಂಬುವವರನ್ನು ಮಾತನಾಡಿಸಲು ಬೈಕ್ ನಿಲ್ಲಿಸಿದಾಗ, ಹಿಂದಿನಿಂದ ಬಂದ ಸವಾರ ಬೈಕ್‌ಗೆ ಗುದ್ದಿದ್ದಾನೆ.

ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿ ಯತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ಯತೀಶ್ ಕುಮಾರ್ ಅವರು ಮೊದಲು ಯಗಟಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಯತೀಶ್, ಮಲ್ಲೇಶ್, ರಘು, ಸ್ವಾಮಿ ವಿರುದ್ಧ ದೂರು ನೀಡಲಾಗಿದೆ.

Railway employee attacked

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...