Home ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ
HomechikamagalurLatest Newsnamma chikmagalur

ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ನಿಲ್ದಾಣಗಳು ಮೇಲ್ದರ್ಜೆಗೆ

Share
Share

ಚಿಕ್ಕಮಗಳೂರು: ಒಂದು ಸಾವಿರ ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ನಡೆಯುತ್ತಿದೆ. ಇದೊಂದೇ ರಾಜ್ಯಕ್ಕೆ ಹತ್ತು ಒಂದೇ ಭಾರತ್ ರೈಲುಗಳು ಬರುತ್ತಿವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ನಗರದ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ಚಿಕ್ಕಮಗಳೂರು ತಿರುಪತಿ ರೈಲಿಗೆ ಹಸಿರು ನಿಶಾನೆ ತೋರಿ ಮಾತನಾಡಿದ ಅವರು, 2014 ರಿಂದ ಇದುವರೆಗೆ ರಾಜ್ಯದಲ್ಲಿ 664 ರೈಲ್ವೆ ಮೇಲ್ಸೇತುವೆ ಹಾಗೂ ಕೆಳಸೇತುವೆ ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅರಸೀಕೆರೆ ತುಮಕೂರು ಮಧ್ಯೆ ಡಬ್ಲಿಂಗ್ ಕಾರ್ಯ 750 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಂಡಿದೆ. ಇದಲ್ಲದೆ ಬೀರೂರು ಶಿವಮೊಗ್ಗ ಡಬ್ಲಿಂಗ್ ಕಾರ್ಯ ಶೀಘ್ರವೇ ಆರಂಭ ಮಾಡುತ್ತೇವೆ. ಹಾಸನ ಬೇಲೂರು ಚಿಕ್ಕಮಗಳೂರು ರೈಲ್ವೆ ಮಾರ್ಗ ಇನ್ನೆರಡು ವರ್ಷದ ಒಳಗಾಗಿ ಮುಕ್ತಾಯಗೊಳ್ಳಲಿದ್ದು, ಆಗ ಚಿಕ್ಕಮಗಳೂರಿಗೆ ಹೆಚ್ಚಿನ ರೈಲುಗಳು ಸಂಚರಿಸುತ್ತವೆ ಎಂದು ಹೇಳಿದರು.

ಚಿಕ್ಕಮಗಳೂರು ರೈಲ್ವೆ ನಿಲ್ದಾಣವನ್ನು 24 ಕೋಟಿ ರೂ. ವೆಚ್ಚದಲ್ಲಿ, ಪ ಸಕಲೇಶಪುರ ರೈಲ್ವೆ ನಿಲ್ದಾಣವನ್ನು 26 ಕೋಟಿ ರೂ. ವೆಚ್ಚದಲ್ಲಿ, ಹಾಸನ 23ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳಿಸಿ ಮೇಲ್ದರ್ಜೆಗೇರಿಸಲಾಗುತ್ತಿದೆ. ಇದೇ ರೀತಿ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವ ಕಾರ್ಯ ನಿರಂತರವಾಗಿ ಮುಂದುವರೆದಿದೆ ಎಂದರು.

ಕೆಲವೊಮ್ಮೆ ಜಾಸ್ತಿ ಬುದ್ಧಿವಂತರಿಗೆ ತೊಂದರೆಯಾಗುತ್ತದೆ. ಹೀಗೆ ತೊಂದರೆ ಅನುಭವಿಸಿದವರಲ್ಲಿ ನಾನು ಒಬ್ಬ ಹಾಗೆ ಸಿ.ಟಿ.ರವಿಯು ಒಬ್ಬ. ನನಗೆ ಆದಂತೆ ಆಗಿದ್ದರೆ ಸಿಟಿ ರವಿ ಊರು ಬಿಟ್ಟು ಓಡಿ ಹೋಗುತ್ತಿದ್ದ. ಒಂದೇ ಸೋಲಿಗೆ ಒದ್ದಾಡುತ್ತಿದ್ದಾರೆ ಆದರೆ ನಾನು ಐದು ಬಾರಿ ಸೋತಿದ್ದೇನೆ  ತಿಳಿಸಿದರು.

ನಾನು ಐದು ಬಾರಿ ಸೋತರು ಹೇಗೆ ಸೋತಿದ್ದೇನೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಭಗವಂತನ ಮೇಲೆ ನಂಬಿಕೆ ಇಟ್ಟುಕೊಂಡು ಇರಬೇಕು. ಸಾರ್ವಜನಿಕ ಜೀವನ ಎಂಬುದು ಮುಳ್ಳಿನ ಹಾಸಿಗೆ ಇದ್ದಂತೆ ಎಂದು ಹೇಳಿದರು.

ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮಾತನಾಡಿ, ವಿ ಸೋಮಣ್ಣ ಅವರು ರಾಜ್ಯ ರಾಜಕಾರಣದಲ್ಲಿ ಕಳೆದೆ ಹೋಗಿದ್ದರು ಎಂಬ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಪಿನಿಕ್ಸ್ ಹಕ್ಕಿಯಂತೆ ಎದ್ದು ಬಂದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಇದು ಅವರ ರಾಜಕೀಯ ಚಾಣಾಕ್ಷತನಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದರು.

ಚಿಕ್ಕಮಗಳೂರು ತಿರುಪತಿ ರೈಲು ಸಂಚಾರ ಆರಂಭ ಮಾಡುವಂತೆ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದಾಗ ಇಷ್ಟು ಬೇಗನೆ ರೈಲು ಸೇವೆ ಆರಂಭಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ. ನೂತನ ರೈಲಿಗೆ ದತ್ತಪೀಠವನ್ನು ಕೇಂದ್ರವಾಗಿಟ್ಟುಕೊಂಡು ಹೆಸರನ್ನು ಇಡಬೇಕು. ದತ್ತಪೀಠ ತಿರುಪತಿ ಎಕ್ಸ್ ಪ್ರೆಸ್, ದತ್ತಪೀಠ ಹೀಗೆ ಕೆಲ ಹೆಸರುಗಳು ಕೇಳಿಬರುತ್ತವೆ. ಈ ಬಗ್ಗೆ ಸಿಟಿ ರವಿ ಅವರು ಅಂತಿಮ ತೀರ್ಮಾನ ಕೈಗೊಳ್ಳಬೇಕು ಎಂದರು.

ಪ್ರಸ್ತುತ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಬೆಳಗ್ಗೆ 8:15ಕ್ಕೆ ರೈಲು ತೆರಳುತ್ತಿದೆ. ಆದರೆ ಬೆಳಗಿನ ಜಾವ 5.15ಕ್ಕೆ ರೈಲು ಸಂಚಾರ ಆರಂಭಿಸಿದರೆ ಜನರಿಗೆ ಹೆಚ್ಚಿನ ಅನುಕೂಲವಾಗುತ್ತದೆ. ಈ ಬಗ್ಗೆ ರೈಲ್ವೆ ಸಚಿವರು ಗಮನಹರಿಸಬೇಕು ಎಂದು ಮನವಿ ಮಾಡಿದರು.

ಪರಿಷತ್ ಸದಸ್ಯ ಸಿ.ಟಿ.ರವಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಡೀ ದೇಶಾದ್ಯಂತ ಸಂಪರ್ಕ ಕ್ರಾಂತಿಯನ್ನೇ ಮಾಡುತ್ತಿದೆ. ರಸ್ತೆ, ರೈಲ್ವೆ, ಡಿಜಿಟಲ್, ಏರ್ ಕನೆಕ್ಟಿವಿಟಿ ಕ್ಷೇತ್ರದಲ್ಲಿ ಕ್ರಾಂತಿಯೇ ನಡೆಯುತ್ತಿದೆ. ಇದರ ಭಾಗವಾಗಿಯೇ ರಾಜ್ಯದಲ್ಲಿಯೂ ರೈಲ್ವೆ ಇಲಾಖೆ ಸಾಕಷ್ಟು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಗಾಯತ್ರಿ ಶಾಂತೇಗೌಡ, ಮಾಜಿ ಶಾಸಕ ಡಿ.ಎಸ್.ಸುರೇಶ್, ನಗರ ಸಭೆ ಅಧ್ಯಕ್ಷೆ ಶೀಲಾ ದಿನೇಶ್, ಪ್ರಮುಖರಾದ ಎಚ್.ಸಿ.ಕಲ್ಮರುಡಪ್ಪ, ಎಂ.ಆರ್.ದೇವರಾಜ ಶೆಟ್ಟಿ ಮತ್ತಿತರರಿದ್ದರು.

Railway stations to be upgraded at a cost of Rs. 1000 crore

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...