ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಇಡೀ ದಿನ ಬಿಡುವಿಲ್ಲದೇ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು.
ತಾಲ್ಲೂಕಿನ ಗಂಗನಮಕ್ಕಿ ಗ್ರಾಮದಲ್ಲಿ ಮಂಜುನಾಥ್ ಹಾಗೂ ಗಿರೀಶ್ ಅವರಿಗೆ ಸೇರಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಕಟ್ಟಡಲ್ಲಿದ್ದ ಅಕ್ಮಲ್ ಖಾನ್ ಅವರಿಗೆ ಸೇರಿದ ಎಲೆಕ್ಟ್ರಿಕಲ್ ಅಂಗಡಿಯು ಸಂಪೂರ್ಣ ಹಾನಿಯಾಗಿದೆ. ಕಟ್ಟಡದ ಬಳಿ ನಿಲ್ಲಿಸಿದ್ದ ಕಾರು, ಎರಡು ಬೈಕ್‌ಗಳು ಜಖಂಗೊಂಡಿವೆ. ಕಟ್ಟಡದಲ್ಲಿ ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದು, ಘಟನೆ ವೇಳೆ ಊಟಕ್ಕಾಗಿ ಹೊರ ಹೋಗಿದ್ದರಿಂದ ಜೀವ ಹಾನಿ ತಪ್ಪಿದಂತಾಗಿದೆ.
ಮಳೆಯಿಂದ ಗೆಂಡೆಹಳ್ಳಿ ಬೇಲೂರು ರಸ್ತೆಯಲ್ಲಿ ಮರಬಿದ್ದು ಸಂಚಾರಕ್ಕೆ ಅಡ್ಡಿಯಾಗಿದ್ದು, ಸ್ಥಳೀಯರು ಮರವನ್ನು ತೆರವುಗೊಳಿಸಿದ ಬಳಿಕ ಸಂಚಾರ ಸುಗಮವಾಗಿತ್ತು. ಮಳೆಯ ನಡುವೆಯೇ ತಾಲ್ಲೂಕಿಗೆ ಭಾನುವಾರ ಪ್ರವಾಸಿಗರ ದಂಡು ಹರಿದು ಬಂದಿದ್ದು, ಭೈರಾಪುರ, ದೇವರಮನೆ, ರಾಣಿಝರಿ ಪ್ರದೇಶಗಳಲ್ಲಿ ಪ್ರವಾಸಿಗರಿಂದ ವಾಹನ ದಟ್ಟಣೆ ಉಂಟಾಗಿತ್ತು.
Rain disrupts normal life across Mudigere taluk
Leave a comment