Home namma chikmagalur chikamagalur ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ
chikamagalurHomeLatest Newsnamma chikmagalur

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

Share
Share

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ ಪೋಕ್ಸೋ ನ್ಯಾಯಾಲಯವು ೨೦ ವರ್ಷಗಳ ಕಠಿಣ ಶಿಕ್ಷೆ ಹಾಗೂ ೨೫ ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಕಳಸ ತಾಲ್ಲೂಕು ಬಾಳೆಹೊಳೆ ಇಡಿಕಿಣಿ ಗ್ರಾಮದ ಬಾಳೆಹೊಳೆ ಎಸ್ಟೇಟ್‌ನ ಕೂಲಿ ಲೈನ್‌ನಲ್ಲಿ ವಾಸವಾಗಿದ್ದ ಅನಿಲ್ ಪೂಜಾರಿ ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಈತ ಬಾಳೆಹೊಳೆ ಎಸ್ಟೇಟ್‌ಗೆ ೨೦೨೪ ರಲ್ಲಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯನ್ನು ಪರಿಚಯಿಸಿಕೊಂಡು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆಕೆಯೊಂದಿಗೆ ನಿರಂತರವಾಗಿ ಮೊಬೈಲ್ ಸಂಪರ್ಕದಲ್ಲಿದ್ದ ಆತ, ಆಕೆಯನ್ನು ಹೆಮ್ಮಕ್ಕಿ ಗ್ರಾಮದ ಬಿಳಗೂರಿನಲ್ಲಿರುವ ತನ್ನ ಮನೆಗೆ ಕರೆಸಿಕೊಂಡು ಬಲವಂತವಾಗಿ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಒಂದು ವೇಳೆ ಆಕೆ ಗರ್ಭಿಣಿಯಾದಲ್ಲಿ ತಾನೇ ಮದುವೆಯಾಗುವುದಾಗಿ ಭರವಸೆಯನ್ನೂ ನೀಡಿದ್ದ ಎನ್ನಲಾಗಿದೆ.

ಈ ನಡುವೆ ಆನಾರೋಗ್ಯಕ್ಕೆ ಒಳಗಾದ ಆಕೆಯನ್ನು ಕೊಪ್ಪ ಆಸ್ಪತ್ರೆಗೆ ಕರೆದೊಯ್ದು ತಪಾಸಣೆಗೆ ಒಳಗಾದಾಗ ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಈ ಬಗ್ಗೆ ಕೊಪ್ಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಬಾಲಾಜಿ ಸಿಂಗ್, ಪಿಎಸ್‌ಐ ಚಂದ್ರಶೇಖರ್, ಸಿಬ್ಬಂದಿಯಾದ ಸಾಧಿಕ್ ಭಾಷಾ, ಎ.ಬಿ.ಪರಮೇಶ, ಶಿವಕುಮಾರ್ ಮತ್ತು ವಿಶ್ವನಾಥ್ ಪಾಳೇಗಾರ ಅವರನ್ನು ಒಳಗೊಂಡ ತಂಡ ಈ ಸಂಬಂಧ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ರಾಘವೇಂದ್ರ ಗುರುಪ್ರಸಾದ್ ಕುಲಕರ್ಣಿ ಅವರು, ಸೂಕ್ತ ಸಾಕ್ಷ್ಯಾಧಾರಗಳ ಹಿನ್ನೆಲೆಯಲ್ಲಿ ಆರೋಪ ಸಾಬೀತಾಗಿದ್ದರಿಂದ ಆರೋಪಿಗೆ ೨೦ ವರ್ಷಗಳ ಕಠಿಣ ಸಜೆ ಹಾಗೂ ೨೫ ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ದಂಡ ತೆರಲು ತಪ್ಪಿದಲ್ಲಿ ಮತ್ತೆ ಆರು ತಿಂಗಳ ಸಾಧಾರಣ ಸಜೆ ಅನುಭವಿಸುವಂತೆ ತಿಳಿಸಿದ್ದಾರೆ. ನೊಂದ ಬಾಲಕಿಗೆ ಕರ್ನಾಟಕ ರಾಜ್ಯದ ಸಂತ್ರಸ್ತರ ಪರಿಹಾರ ನಿಧಿಯಿಂದ ೪ ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ. ಸರ್ಕಾರದ ಪರವಾಗಿ ಪೋಕ್ಸೋ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ ಕುಮಾರ್ ವಾದ ಮಂಡಿಸಿದ್ದರು.

Rape accused gets 20 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ಅನಧಿಕೃತ ಜೀಪ್‌ಗಳ ಹಾವಳಿ ತಪ್ಪಿಸಲು ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

ಚಿಕ್ಕಮಗಳೂರು:  ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಅನಧಿಕೃತ ಮತ್ತು ಅಕ್ರಮ ಜೀಪ್ ಗಳ ಹಾವಳಿ ತಡೆಗಟ್ಟಿ ಪ್ರವಾಸಿಗರ ಸುರಕ್ಷತೆ ಕಾಪಾಡಬೇಕು ಎಂದು ಆಗ್ರಹಿಸಿ ಜಿಲ್ಲೆಯ ಸ್ಥಳೀಯ ನಾಗರೀ ಕರು ಸೋಮವಾರ ಅಪರ ಜಿಲ್ಲಾಧಿಕಾರಿ...

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಮಾಫಿಯಾ ದಂದೆಗಳು ?

ಚಿಕ್ಕಮಗಳೂರು: ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಅಗ್ರಸ್ಥಾನವಿದೆ.ನಿಜವಾದ ಪ್ರವಾಸಿಗರು ಜಿಲ್ಲೆಯ ಪ್ರಕೃತಿ ಸೌಂದರ್ಯದ ಜೊತೆಗೆ ಧಾರ್ಮಿಕ ಸ್ಥಳಗಳು, ಝರಿಗಳ ಜೊತೆಗೆ ಬೋರ್ಗರಿಯುವ ನದಿಗಳು, ಉಪ ನದಿಗಳು,ಅರಣ್ಯದ ಜೊತೆಗೆ ಕಾಡು ಪ್ರಾಣಿಗಳು...

Related Articles

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ...

ಅಂಚೆ ನಾಗಭೂಷಣ್ ಗೆ’ಪತ್ರಿಕಾ ರತ್ನ’ ಪ್ರಶಸ್ತಿ ಪ್ರಧಾನ

ತರೀಕೆರೆ : ಪಟ್ಟಣದ ಹಿರಿಯ ಪತ್ರಕರ್ತರು, ಜಿಲ್ಲಾ ಕನ್ನಡ ವಾರಪತ್ರಿಕೆ ಅಂಚೆವಾರ್ತೆ ಸಂಪಾದಕರು ಆದ ಅಂಚೆ...

ಇಂದು ಆರ್‌ಟಿಒ ರಾಕೇಶ್ ಕುಮಾರ್ ವಿರುದ್ಧ ವಿಚಾರಣೆ

ಚಿಕ್ಕಮಗಳೂರು: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಭ್ರಷ್ಟಾಚಾರ ಹಾಗೂ ಹಣಕಾಸು ಅಕ್ರಮಗಳ ಆರೋಪ ಕೇಳಿಬಂದಿರುವ ಬೆನ್ನಲ್ಲೇ...

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು...