Home ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಪೊಲೀಸ್ ವಶಕ್ಕೆ
HomeLatest Newsnamma chikmagalurNational News

ಕೊಚ್ಚಿ ವಿಮಾನ ನಿಲ್ದಾಣದಲ್ಲಿ ರವಿ ಹಂಜ್ ಪೊಲೀಸ್ ವಶಕ್ಕೆ

Share
Share

ಚಿಕ್ಕಮಗಳೂರು: ಬಸವಣ್ಣ ಮತ್ತು ಅವರ ವಿಚಾರಧಾರೆಗಳ ಕುರಿತು ಅವಹೇಳನಕಾರಿ ಅಂಶಗಳನ್ನು ಪ್ರಕಟಿಸಲಾಗಿದೆ ಎನ್ನಲಾದ ‘ಬಸವ ಮಂಟಪ’ ಪುಸ್ತಕದ ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪುಸ್ತಕದ ವಿಚಾರವಾಗಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ರವಿ ಹಂಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು. ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ ವೇಳೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಕರ್ನಾಟಕ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಮನು ಬಳಿಗಾರ್ ಅವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ.

ಸಾರ್ವಜನಿಕ ಹುದ್ದೆಗಳನ್ನು ಅಲಂಕರಿಸಿರುವವರು ಸಮಾಜದ ಸ್ವತ್ತು ಹಾಗೂ ದಾರ್ಶನಿಕರ ಗೌರವ ಕಾಪಾಡುವ ಜವಾಬ್ದಾರಿ ಹೊಂದಿರಬೇಕು. ಬಸವಣ್ಣನವರ ವಿಚಾರಧಾರೆ ಮತ್ತು ಸಮಾಜಕ್ಕೆ ಅವರ ಕೊಡುಗೆಯ ಗೌರವ ಉಳಿಸಲು ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Ravi Hanj taken into police custody at Kochi Airport

Share

Leave a comment

Leave a Reply

Your email address will not be published. Required fields are marked *

Don't Miss

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ

ತರೀಕೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಪಟ್ಟಣದ ತಾಯರ್ ಬೀದಿಯಲ್ಲಿ ನಡೆದಿದೆ. ಪಟ್ಟಣದ ಗಣಪತಿ ಪೆಂಡಾಲ್ ಹಿಂಭಾಗದ ತಾಯರ್ ಬೀದಿಯ ನೂರ್...

 ಕಾರು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ – ಐವರು ಆರೋಪಿಗಳ ಬಂಧನ

ಕಡೂರು: ಹೊನ್ನಾವರ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮೀಯ ರೀತಿಯಲ್ಲಿ ಅಡಿಕೆ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 58 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕಡೂರು ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

Related Articles

ಐಡಿಎಸ್‌ಜಿ ಪ್ರಾಂಶುಪಾಲರಾಗಿ ಡಾ. ಚೇತನ್ ಡಿ.ಎಂ. ಅಧಿಕಾರ ಸ್ವೀಕಾರ

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಐಡಿಎಸ್‌ಜಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಚೇತನ್ ಡಿ.ಎಂ. ಅವರು ನವೆಂಬರ್...

ತರೀಕೆರೆ ಶಾಸಕ ಶ್ರೀನಿವಾಸ್‌ಗೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ

ತರೀಕೆರೆ: ರಾಜ್ಯ ಸರ್ಕಾರ 18 ಶಾಸಕರಿಗೆ ವಿವಿಧ ನಿಗಮ ಹಾಗೂ ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಿ...

ಕುವೆಂಪು ಶ್ರೀ ರಾಮಾಯಣ ದರ್ಶನಂನಲ್ಲಿ ಗಾಂಧಿ ಮತ್ತು ಅರವಿಂದರ ಪ್ರಭಾವ

ತರೀಕೆರೆ: ಕುವೆಂಪು ರವರ ಮಹಾಕಾವ್ಯ ಶ್ರೀ ರಾಮಾಯಣ ದರ್ಶನಂ ಗಾಂಧಿ ಮತ್ತು ಅರವಿಂದ ಘೋಷರ ಪ್ರಭಾವದಿಂದ...

ಕಾರ್ಯನಿರ್ವಹಿಸದ ಉಪಕಾರಾಗೃಹದಲ್ಲಿ ಕಳ್ಳತನ

ತರೀಕೆರೆ:  ಕಾರ್ಯನಿರ್ವಹಿಸದ ತರೀಕೆರೆ ಉಪಕಾರಾಗೃಹದ ಹಿಂಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಹಲವು ವಸ್ತುಗಳನ್ನು ಕಳವು ಮಾಡಿರುವುದಲ್ಲದೆ,...