Home Latest News ಸೆ.24 ರಿಂದ ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ
Latest NewschikamagalurHomenamma chikmagalur

ಸೆ.24 ರಿಂದ ಉಪಲೋಕಾಯುಕ್ತರಿಂದ ಅಹವಾಲು ಸ್ವೀಕಾರ

Share
Share

ಚಿಕ್ಕಮಗಳೂರು: ಉಪಲೋಕಾಯುಕ್ತರು ಸೆಪ್ಟಂಬರ್ 24 ರಿಂದ 25ರವರೆಗೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸ್ಥಳದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸುವುದರಿಂದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಕಂಡುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ಹೇಳಿದರು.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಸೆಪ್ಟೆಂಬರ್ ೨೪ ರಂದು ಬೆಳಗ್ಗೆ ೧೧ ಗಂಟೆಗೆ ಕುವೆಂಪು ಕಲಾಮಂದಿರದಲ್ಲಿ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉಪಲೋಕಾಯುಕ್ತರಾದ ಶ್ರೀ ಕೆ.ಎನ್. ಫಣೀಂದ್ರ ಅವರ ಉಪಸ್ಥಿತಿಯಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ  ಅಲ್ಲಿಯೇ ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಹೇಳಿದರು.

ಸೆಪ್ಟೆಂಬರ್ ೨೫ ರಂದು ಬೆಳಿಗ್ಗೆ ೯.೪೫ ರಿಂದ ೧೦.೪೫ ಗಂಟೆಯವರೆಗೆ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬಾರ್ ಅಸೋಸಿಯೇಶನ್ ಸಭಾಂಗಣದಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರೊಂದಿಗೆ ಸಾರ್ವಜನಿಕ ಆಡಳಿತ ಮತ್ತು ಉತ್ತಮ ಆಡಳಿತದಲ್ಲಿ ವಕೀಲರ ಪಾತ್ರದ ಕುರಿತು ಸಂವಾದ ನಡೆಸುವರು. ಬೆಳಿಗ್ಗೆ ೧೧ ರಿಂದ ೧೧೩೦ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

೧೧.೩೦ ರಿಂದ ಮಧ್ಯಾಹ್ನ ೧.೩೦ರವರೆಗೆ ಬಾಕಿ ಇರುವ ಪ್ರಕರಣಗಳ ಕುರಿತು ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಈಗಾಗಲೇ ಲೋಕಾಯುಕ್ತರಿಗೆ ನಮ್ಮ ಜಿಲ್ಲೆಯಿಂದ ಸಲ್ಲಿಕೆಯಾಗಿ ಪಟ್ಟಿ ಮಾಡಲಾಗಿರುವ ೮೪ ಪ್ರಕರಣಗಳ ಬಗ್ಗೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಸೆಪ್ಟೆಂಬರ್ ೨೬ ರಂದು ಬೆಳಿಗ್ಗೆ ೯ ರಿಂದ ೧೦ ಗಂಟೆಯವರೆಗೆ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಸಭಾಂಗಣದಲ್ಲಿ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸುವರಲ್ಲದೆ, ಸಂವಾದ ನಡೆಸುವರು. ಉಪಲೋಕಾಯುಕ್ತರ ಜೊತೆಗೆ ನಾಲ್ವರು ನ್ಯಾಯಾಧೀಶರ ತಂಡ ಮತ್ತು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಲೋಕಾಯುಕ್ತ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸ್ಥಳಿಯ ಮಟ್ಟದಲ್ಲಿ ಹಲವಾರು ವರ್ಷಗಳಿಂದ ಬಗೆಹರಿಯದೇ ಇರುವ ಸಣ್ಣ ಪುಟ್ಟ ಸಮಸ್ಯೆಗಳಿಗೆ ಈ ಸಂದರ್ಭದಲ್ಲಿ ಪರಿಹಾರ ದೊರೆಯಲಿದೆ. ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಂಡು ತಮ್ಮ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ಸುದರ್ಶನ್ ಇದ್ದರು.

Receipt of reports from Upalokayukta from September 24

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...