Home namma chikmagalur chikamagalur ಪುನರ್ ವಿಂಗಡಣೆ ಲಾಭ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಖಚಿತ.
chikamagalurHomeLatest Newsnamma chikmagalur

ಪುನರ್ ವಿಂಗಡಣೆ ಲಾಭ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಖಚಿತ.

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರ ಮರು ವಿಂಗಡಣೆ ಆಗುವುದು ಖಚಿತ. ಹೀಗಾಗಿ ಚಿಕ್ಕಮಗಳೂರು ಜಿಲ್ಲೆ ಸ್ವತಂತ್ರ ಲೋಕಸಭಾ ಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ.

ಜನಸಂಖ್ಯೆ ಅಧಾರದ ಮೇಲೆ ಲೋಕಸಭಾ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲು ಕೇಂದ್ರ ಸರ್ಕಾರ ಎಲ್ಲಾ ತಯಾರಿ ನಡೆಸಿತ್ತು ದಕ್ಷಿಣ ಭಾರತದ ರಾಜ್ಯಗಳು ಇದನ್ನು ತೀವ್ರವಾಗಿ ವಿರೋಧಿಸಿದ್ದವು ಆದರೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪುನರ್ ವಿಂಗಡಣೆ ಬಿಲ್ ಮಂಡಿಸಿತ್ತು ಆದರೆ ಲೋಕಸಭೆಯಲ್ಲಿ ಬಹುಮತ ಸಿಗದಿರುವುದರಿಂದ ಪುನರ್ ವಿಂಗಡಣೆ ಸ್ಥಗಿತಗೊಳಿಸಲಾಗಿತ್ತು.

ಬಿಜೆಪಿ ಮುಂದಿನ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟು ಮತ್ತೆ ಪುನರ್ ವಿಂಗಡಣೆಗೆ ಚಾಲನೆ ನೀಡಿದೆ. ಜನಸಂಖ್ಯೆ ಆಧಾರದ ಮೇಲೆ ಪುನರ್ ರಚನೆ ಮಾಡದೆ 1957 ಮತ್ತು 1967 ರಲ್ಲಿ ಲೋಕಸಭಾ ಕ್ಷೇತ್ರಗಳನ್ನು ಭೌಗೋಳಿಕವಾಗಿ ಮರುವಿಂಗಡಣೆ ಮಾಡಲಾಗಿತ್ತು ಮತ್ತೆ ಲೋಕಸಭಾ ಕ್ಷೇತ್ರಗಳನ್ನು ಭೌಗೋಳಿಕ ಆಧಾರದ ಮೇಲೆ ಪುನರ್ ವಿಂಗಡಣೆ ಮಾಡಲು ನಿರ್ಧಾರ ಮಾಡಲು ಕೇಂದ್ರ ಸರ್ಕಾರ ತಯಾರಿ ನಡೆಸಿದೆ.

1957 ರಿಂದ ಇಲ್ಲಿಯವರೆಗೆ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಹಾಸನ,ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳ ಮತ್ತು ಬೆಳ್ತಂಗಡಿ ಜೊತೆಗೆ ಸೇರಿಕೊಂಡಿತ್ತು. ಪ್ರಸ್ತುತ ಚಿಕ್ಕಮಗಳೂರು_ಉಡುಪಿ ಲೋಕಸಭಾ ಕ್ಷೇತ್ರವಾಗಿದೆ.
ಲೋಕಸಭೆಯಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಿಲ್ ಪಾಸ್ ಅದರೆ “ಚಿಕ್ಕಮಗಳೂರು ಜಿಲ್ಲೆ” ಗೆ ಸೀಮಿತವಾಗಿ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬರಲಿದೆ.ಜಿಲ್ಲೆಯವರು ಲೋಕಸಭಾ ಸದಸ್ಯರಾಗುವ ಅವಕಾಶ ದೊರೆಯಲಿದೆ.

ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆ ಬಹುತೇಕ ಜಾರಿಗೆ ಬರುವುದು ಖಚಿತ. ಲೋಕಸಭೆಯಲ್ಲಿ ಬಹುಮತ ಇಲ್ಲದಿದ್ದರೂ ರಾಜ್ಯ ಸಭೆಯಲ್ಲಿ ಬಿಜೆಪಿ ಮತ್ತು ಮಿಶ್ರ ಪಕ್ಷಗಳಿಗೆ ಬಹುಮತ ಇರುವುದರಿಂದ ಕ್ಷೇತ್ರ ಮರು ವಿಂಗಡಣೆ ಬಹುತೇಕ ಖಚಿತ. ಇದರಿಂದಾಗಿ 542 ಕ್ಷೇತ್ರಗಳ ಬದಲಿಗೆ 820 ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆ ಆಗುತ್ತಾರೆ.

ಕರ್ನಾಟಕದಲ್ಲಿ ಹೆಚ್ಚುವರಿಯಾಗಿ 9 ಲೋಕಸಭಾ ಕ್ಷೇತ್ರಗಳು ಹೊಸದಾಗಿ ಅಸ್ತಿತ್ವಕ್ಕೆ ಬರಲಿವೆ.

Redistribution Benefit- Chikmagalur Lok Sabha Constituency is sure.

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...