Home namma chikmagalur chikamagalur ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ
chikamagalurHomeLatest Newsnamma chikmagalur

ಸಾರ್ವಜನಿಕ ಚರ್ಚೆ ಬಳಿಕ ಕ್ಷೇತ್ರಗಳ ಮರುವಿಂಗಡಣೆ ಸೂಕ್ತ

Share
Oplus_16908288
Share

ಚಿಕ್ಕಮಗಳೂರು: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯನ್ನು ಸಾರ್ವಜನಿಕ ಚರ್ಚೆ ಮತ್ತು ಸಮಾಲೋಚನೆ ಮಾಡಿದ ನಂತರವೇ ಜಾರಿ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ರವೀಶ್ ಕ್ಯಾತನಬೀಡು ಆಗ್ರಹಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಕ್ಷಿಣ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಸಂಖ್ಯೆಯನ್ನು ತಗ್ಗಿಸುವುದಿಲ್ಲ ಎಂದು ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಗಮನಿಸಿದರೆ ಮುಂಬರುವ ದಿನಗಳಲ್ಲಿ ದಕ್ಷಿಣ ರಾಜ್ಯಗಳ ದನಿ ಅಡಗಿಸುವ ತಂತ್ರದಂತೆ ಕಾಣುತ್ತಿದೆ. ಈಗಾಗಲೇ ಕರ್ನಾಟಕ ಹೆಚ್ಚು ತೆರಿಗೆ ಕಟ್ಟಿದ್ದರೂ ನಮ್ಮ ಪಾಲು ನೀಡುವಲ್ಲಿ ಕೇಂದ್ರ ಮಲತಾಯಿ ಧೋರಣೆ ತಾಳುತ್ತಿರುವುದು ಸಾಬೀತಾಗಿದೆ ಎಂದು ಹೇಳಿದರು.

ಕೇಂದ್ರ ಸರಕಾರದ ಯಾವಾಗಲೂ ಒಕ್ಕೂಟ ವ್ಯವಸ್ಥೆಯನ್ನು ಅಸ್ತಿರಗೊಳಿಸುವ ಕೆಲಸವನ್ನು ನಿರಂತರ ಮಾಡುತ್ತಲೇ ಬಂದಿದೆ. ಹಿಂದಿ ಭಾಷೆಯನ್ನು ಹೇರುವ ಮೂಲಕ ದಕ್ಷಿಣ ದ್ರಾವಿಡರ ಅಸ್ಮಿತೆಗೆ ಧಕ್ಕೆ ತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿರುವುದು ಖಂಡನೀಯ ಎಂದರು.

ಹಿಂದಿ ಭಾಷೆಗೆ ಗ್ರೇಡ್ ನೀಡುವ ರಾಜ್ಯ ಸರಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲರು ಹೇಳಿರುವುದು ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತಿದೆ. ರಾಷ್ಟ್ರದಲ್ಲಿ ಹಲವಾರು ಭಾಷೆಗಳಿವೆ ಹಿಂದಿಯನ್ನೇ ಏಕೆ ರಾಷ್ಟ್ರ ಭಾಷೆಯನ್ನಾಗಿ ಮಾಡಬೇಕು ಎಂಬುದನ್ನು ಬಿಜೆಪಿಗರು ಹೇಳಬೇಕು ಎಂದರು.

ರಾಜ್ಯದ ಬಿಜೆಪಿ ನಾಯಕರಾದ ಶೋಭಕರಂದ್ಲಾಜೆ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಎಂಎಲ್ಸಿ ಸಿ.ಟಿ.ರವಿ ಅವರಿಗೆ ಕನ್ನಡದ ಬಗ್ಗೆ ಕಿಂಚಿತ್ತೂ ಗೌರವ ಇದ್ದಂತಿಲ್ಲ. ಅವರ ನಡವಳಿಕೆ ಕನ್ನಡ ವಿರೋಯಾಗಿದೆ. ಇವರೇ ಕನ್ನಡದ ಕುಲಕಂಠಕರು ಎಂದು ಟೀಕಿಸಿದರು.

ಪಕ್ಕದ ರಾಜ್ಯ ಮಹರಾಷ್ಟ್ರದಲ್ಲಿ ಹಿಂದಿಯನ್ನು ತೆಗೆದು ದಿಭಾಷಾ ನೀತಿಯನ್ನು ಅನುಸರಿಸಿದ್ದಾರೆ. ರಾಜ್ಯ ಬಿಜೆಪಿಗರು ಅದನ್ನೇಕೆ ವಿರೋಸುವುದಿಲ್ಲ ಎಂದು ಪ್ರಶ್ನಿಸಿದ ಅವರು ಸಿ.ಟಿ.ರವಿ ಅವರು ಹಿಂದೆ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾಗಿದ್ದಾಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಿಲ್ಲಿಸಿದ್ದು ನೋಡಿದರೆ ಅವರು ಕನ್ನಡದ ವಿರೋಗಳಂತೆ ಕಾಣುತ್ತಾರೆ ಎಂದರು

ಒಟ್ಟಾರೆ ಕೇಂದ್ರದ ಬಿಜೆಪಿ ನೇತೃತ್ವದ ಸರಕಾರ ಭಾರತದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಹ ಹುನ್ನಾರ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದರು. ಕಾಂಗ್ರೆಸ್ ಮುಖಂಡರಾದ ಚಂದ್ರಪ್ಪ, ನಟರಾಜ್, ನಿಜಗುಣಮೂರ್ತಿ, ಸಂತೋಷ್‌ಲಕ್ಯಾ, ಮಹೇಶ್, ರೂಬಿನ್‌ಮೊಸೆಸ್ ಮತ್ತಿತರರಿದ್ದರು.

Redistribution of constituencies is appropriate after public debate

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ತಿಂಗಳಿಗೆ 25 ಮೊಟ್ಟೆ ವಿತರಣೆ

ಚಿಕ್ಕಮಗಳೂರು: ಜಿಲ್ಲೆಯ ಗರ್ಭಿಣಿ ಮತ್ತು ಬಾಣಂತಿಯರಿಗೆ ಇನ್ಮುಂದೆ ವಾರಕ್ಕೆ ಆರು ಮೊಟ್ಟೆಯಂತೆ ತಿಂಗಳಿಗೆ 25 ಮೊಟ್ಟೆ ವಿತರಣೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್‌ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...

ಸರ್ಕಾರಿ ಶಾಲೆ ಮುಚ್ಚುವುದನ್ನು ವಿರೋಧಿಸಿ ಪ್ರತಿಭಟನೆ

ಚಿಕ್ಕಮಗಳೂರು: ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಅಡಿಯಲ್ಲಿ ಚಿಕ್ಕಮಗಳೂರಿನ ೧೫೦ ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚತ್ತಿರುವುದನ್ನು ವಿರೋಧಿಸಿ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಮತ್ತು ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಚಿಕ್ಕಮಗಳೂರಿನ...

Related Articles

ಕನ್ನಡದ ಸಂಯೋಜಕ ಪ್ರತಿಭೆ ತೇಜಸ್ವಿ

ಕೊಟ್ಟಿಗೆಹಾರ: ಪೋಟೋಗ್ರಾಫಿ, ಫಿಶಿಂಗ್, ಪೈಂಟಿಂಗ್, ಸಾಹಿತ್ಯ ಹೀಗೆ ನಾನಾ ಬಗೆಯ ಆಸಕ್ತಿ ಕುತೂಹಲಗಳಿದ್ದ ತೇಜಸ್ವಿ ಅವರು...

ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ಯಶಸ್ಸಿಗೆ ಸೂಚನೆ

ಚಿಕ್ಕಮಗಳೂರು: ಮುಖ್ಯಮಂತ್ರಿಗಳು ಏಪ್ರಿಲ್ ೧೩ ರಂದು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...

ನಾಪತ್ತೆಯಾದ ಯುವತಿಯ ರಕ್ಷಣಾ ಕಾರ್ಯಾಚರಣೆಗೆ ಸಚಿವರ ಸೂಚನೆ

ಚಿಕ್ಕಮಗಳೂರು: ಕಾಫಿನಾಡಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತ ವೀಕ್ಷಣೆಗೆ ತೆರಳಿದ್ದ ಕೇರಳದ ಪಾಲಕಾಡ್ ಜಿಲ್ಲೆಯ...

ಲಕ್ಷಾಂತರ ರೂಪಾಯಿ ಮೌಲ್ಯದ ಮೊಬೈಲ್ ಫೋನ್‌ಗಳ ಕಳವು

ಚಿಕ್ಕಮಗಳೂರು: ನಗರದಲ್ಲಿ ರಿಲಾಯನ್ಸ್ ಡಿಜಿಟಲ್ ಕಂಪನಿಯ ಗೃಹೋಪಯೋಗಿ ವಸ್ತುಗಳನ್ನು ವಿತರಿಸುವ ವಾಹನದಿಂದ ಲಕ್ಷಾಂತರ ರೂಪಾಯಿ ಮೌಲ್ಯದ...