Home namma chikmagalur chikamagalur ಸರಕಾರಿ ರಸ್ತೆ ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಬೇಲಿ ತೆರವು
chikamagalurHomeLatest Newsnamma chikmagalur

ಸರಕಾರಿ ರಸ್ತೆ ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಬೇಲಿ ತೆರವು

Share
Share

ಮೂಡಿಗೆರೆ: ತಾಲೂಕಿನ ಬಿದರಹಳ್ಳಿ ಗ್ರಾಮದ ಸಮೀಪ ಸಾರ್ವಜನಿಕರ ಉಪಯೋಗಕ್ಕಾಗಿ ಬಳಸುವ ಸರಕಾರಿ ರಸ್ತೆಯನ್ನು ವ್ಯಕ್ತಿಯೋರ್ವರು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿದ್ದ ಬೇಲಿಯನ್ನು ಬುಧವಾರ ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು.

ಬಿದರಹಳ್ಳಿ ಗ್ರಾಮದ ಸರ್ವೆ ನಂಬರ್ ೧೦೧ರಲ್ಲಿರುವ ಸರಕಾರಿ ರಸ್ತೆ ಕೆಂಜಿಗೆಯಿಂದ ಬಿದರಹಳ್ಳಿ, ಲೋಕವಳ್ಳಿ ಮತ್ತು ಲೋಕವಳ್ಳಿ ಎಸ್ಟೇಟ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವೇಣುಗೋಪಾಲ ಎಂಬುವರು ಒತ್ತುವರಿ ಮಾಡಿ, ಅಕ್ರಮವಾಗಿ ಬೇಲಿ ನಿರ್ಮಿಸಿದ್ದರು. ಇದರಿಂದ ಬಿದರಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿರುವ ಪಂಪ್‌ಹೌಸ್‌ಗೆ ತೆರಳಲು, ಅನೇಕ ಹಿಡಿವಳಿ ಜಮೀನಿಗೆ ತೆರಳಲು, ಅಕ್ಕಪಕ್ಕದ ಗ್ರಾಮದ ಜನರು ಹಾಗೂ ಜಾನುವಾರುಗಳು ತಿರುಗಾಡಲು ತೊಂದರೆ ಉಂಟಾಗಿತ್ತು.

ಈ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಯಾದ ಬಿ.ಡಿ.ರಾಧಕೃಷ್ಣ, ಬಿ.ಡಿ.ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಕಳೆದ ನವೆಂಬರ್‌ನಲ್ಲಿ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ತಹಸೀಲ್ದಾರರಿಗೆ ಸೂಚಿಸಲಾಗಿತ್ತು. ಅದರಂತೆ ತಹಸೀಲ್ದಾರ್ ಎಸ್.ಅಶ್ವಿನಿ ಆದೇಶದ ಮೇರೆಗೆ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಾಖಲೆಗಳ ಪರಿಶೀಲನೆಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಬೇಲಿ ನಿರ್ಮಿಸಿರುವುದು ದೃಢಪಟ್ಟಿದ್ದ ಹಿನ್ನಲೆಯಲ್ಲಿ ಬುಧವಾರ ಅಕ್ರಮ ಬೇಲಿ ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸಿದರು. ದೂರಿಗೆ ಶೀಘ್ರವಾಗಿ ಪರಿಹಾರ ಕಲ್ಪಿಸಿದ ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್ ಅವರ ಕಾರ್ಯಕ್ಕೆ ಗ್ರಾಮದ ಜನರು ಹರ್ಷ ವ್ಯಕ್ತಪಡಿಸಿದ್ದಾರೆ.

ತೆರವು ಕಾರ್ಯಚರಣೆಯಲ್ಲಿ ಆರ್‌ಐ ಚಂದ್ರಶೇಖರ್, ವಿಎ ಕವನ್, ಬಿದರಹಳ್ಳಿ ಪಿಡಿಒ ದುಗ್ಗಮ್ಮ, ಗ್ರಾಮ ಸಹಾಯಕ ಕೆಂಚಯ್ಯ, ಗ್ರಾ.ಪಂ. ವಾಟರ್‌ಮ್ಯಾನ್ ಸೇರಿದಂತೆ ಗ್ರಾ.ಪಂ. ಸಿಬ್ಬಂದಿ ಭಾಗವಹಿಸಿದ್ದರು.

Removal of illegally constructed fence encroaching on government road

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...