Home namma chikmagalur chikamagalur “ಶಿವಾನಂದ ನೀಲಣ್ಣವ‌ರ್ ಕೊಡುಗೆ” ನಾಮಫಲಕ ತೆರವು
chikamagalurHomeLatest Newsnamma chikmagalur

“ಶಿವಾನಂದ ನೀಲಣ್ಣವ‌ರ್ ಕೊಡುಗೆ” ನಾಮಫಲಕ ತೆರವು

Share
Share

ಕಡೂರು: ಅನಧಿಕೃತವಾಗಿ ಬಡ್ಡಿ ವ್ಯವಹಾರ ಮಾಡಿದ ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರನ್ನು ಕಳೆದ ಶುಕ್ರವಾರ ಬಂಧಿಸಲಾಗಿದೆ. ಅವರ ಬಂಧನದ ಬೆನ್ನಲ್ಲೇ ಕಡೂರು ಪೊಲೀಸ್ ಠಾಣೆಯ ಸುತ್ತ ಇದೀಗ ವಿವಾದಾತ್ಮಕ ನೀಲಣ್ಣವ‌ರ್ ಪ್ರಕರಣದ ಸುಳಿ ಸುತ್ತಿಕೊಳ್ಳಲಾರಂಭಿಸಿದೆ.

ಮಾರ್ಚ್ 15 ರಂದು ಕಡೂರಿನಲ್ಲಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಎಪಿಎಂಸಿ ಆವರಣದಲ್ಲಿ ಯಾವುದೇ ಪೂರ್ವ ಅನುಮತಿಯಿಲ್ಲದೆ ಅದ್ದೂರಿ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶಿವಾನಂದ ನೀಲಣ್ಣವರ್, “ಕಡೂರಿನಲ್ಲಿ ಗಂಡಸರಿಲ್ವಾ, ನಾಳೆ ಮನಸ್ಸು ಮಾಡಿದರೆ ಮುಖ್ಯಮಂತ್ರಿ ಆಗುತ್ತೇನೆ, ನನ್ನ ಗಂಡಸ್ತನವನ್ನು ತೋರಿಸುತ್ತೇನೆ” ಎನ್ನುವ ಅತ್ಯಂತ ಪ್ರಚೋದನಾತ್ಮಕ ಮತ್ತು ದ್ವೇಷಪೂರಿತ ಭಾಷಣವನ್ನು ಮಾಡಿದ್ದರು.

ಇಂತಹ ಗಂಭೀರ ಹೇಟ್ ಸ್ಪೀಚ್ ಮಾಡಿದ್ದ ಶಿವಾನಂದ ವಿರುದ್ದ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕಿದ್ದ ಕಡೂರು ಪೊಲೀಸರು, ಆತನ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಪೊಲೀಸರು ಎಫ್‌ಐಆರ್ ದಾಖಲಿಸಬೇಕಿದ್ದ ವ್ಯಕ್ತಿಯಿಂದಲೇ ದೇಣಿಗೆ ಪಡೆದಿದ್ದರು ಎನ್ನುವ ಗಂಭೀರ ಆರೋಪ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಈ ಅನುಮಾನಗಳಿಗೆ ಪುಷ್ಟಿ ನೀಡುವಂತೆ, ಸ್ವತಃ ಕಡೂರು ಪೊಲೀಸ್ ಠಾಣೆಯ ನಾಮಫಲಕದಲ್ಲಿ “ಶಿವಾನಂದ ನೀಲಣ್ಣವ‌ರ್ ಕೊಡುಗೆ” ಎಂದು ದೊಡ್ಡದಾಗಿ ಬರೆಯಲಾಗಿತ್ತು ಆದರೆ ನೀಲಣ್ಣವ‌ರ್ ಅರೆಸ್ಟ್ ಆಗುತ್ತಿದ್ದಂತೆ, ಕಡೂರು ಪೊಲೀಸ್ ಠಾಣೆಯ ನಾಮಫಲಕದಲ್ಲಿದ್ದ ಆತನ ಹೆಸರು ರಾತ್ರೋರಾತ್ರಿ ನಿಗೂಢವಾಗಿ ಮಾಯವಾಗಿದೆ.

ಮೊದಲು ಅಪರಾಧದ ಹಿನ್ನೆಲೆಯುಳ್ಳ ವ್ಯಕ್ತಿಯಿಂದ ದೇಣಿಗೆ ಪಡೆದು ಠಾಣೆಯ ನಾಮಫಲಕದಲ್ಲೇ ಆತನ ಹೆಸರನ್ನು ಹಾಕಿಕೊಂಡಿದ್ದು, ಆತ ಬಂಧನಕ್ಕೊಳಗಾಗುತ್ತಿದ್ದಂತೆ ಸಾಕ್ಷ್ಯ ನಾಶ ಮಾಡುವಂತೆ ಹೆಸರನ್ನು ಅಳಿಸಿ ಹಾಕಿರುವುದು ಕಡೂರು ಪೊಲೀಸರ ನಡೆ ಮತ್ತು ಕರ್ತವ್ಯ ನಿಷ್ಠೆಯ ಮೇಲೆ ಸಾರ್ವಜನಿಕರಲ್ಲಿ ಅನುಮಾನ ಹಾಗೂ ಅಸಮಾಧಾನ ಮೂಡುವಂತೆ ಮಾಡಿದೆ.

Removal of the nameplate “Shivananda Neelannavar’s contribution”

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...