Home Latest News ‘ಪರಿಶಿಷ್ಟ ಜಾತಿ,ಪಂಗಡದ ದೌರ್ಜನ್ಯ ಪ್ರಕರಣ ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ’
Latest NewschikamagalurHomenamma chikmagalur

‘ಪರಿಶಿಷ್ಟ ಜಾತಿ,ಪಂಗಡದ ದೌರ್ಜನ್ಯ ಪ್ರಕರಣ ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ’

Share
Share

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಸಕಾಲದಲ್ಲಿ ಪ್ರಕರಣಗಳ ಬಗ್ಗೆ ಕ್ರಮ ವಹಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಕಾಲಮಿತಿಯೊಳಗೆ ಇತ್ಯರ್ಥವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ ಪ್ರಕರಣಗಳಿಗೆ ಮಂಜೂರಾದ ಪರಿಹಾರ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎಸ್‌ಸಿ, ಎಸ್‌ಟಿ ಜನರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ದೌರ್ಜನ್ಯ ತಡೆಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್.ಆರ್.ಪುರ ತಾಲ್ಲೂಕು ಬನ್ನೂರು ಗ್ರಾಮ ಪಂಚಾಯಿತಿ ಸರ್ವೇ ನಂ.೧೪ ರ ಗೋಮಾಳದಲ್ಲಿ ನಿವೇಶನ ರಹಿತ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಹಲವಾರು ಬಾರಿ ಸೂಚಿಸಲಾಗಿದ್ದು, ಇನ್ನೂ ಕ್ರಮಕ್ಕೆ ಮುಂದಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ಕ್ರಮ ವಹಿಸುವಂತೆ ಎನ್.ಆರ್.ಪುರ ತಾಲ್ಲೂಕು ತಹಸೀಲ್ದಾರರಿಗೆ ಸೂಚಿಸಿದರು.

ಎನ್.ಆರ್.ಪುರ ತಾಲ್ಲೂಕು ಬನ್ನೂರು ಗ್ರಾಮದ ಶೆಟ್ಟಿಹಿತ್ಲು ಸರ್ವೇ ನಂ.೮೯ ಮತ್ತು ೯೫ ರಲ್ಲಿ ೧೦೦ ವರ್ಷಗಳಿಂದ ವಾಸವಿರುವ ೩೦ ಆದಿವಾಸಿ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಸ್ವೀಕರಿಸಿ ಕ್ರಮ ವಹಿಸುವಂತೆ ತಿಳಿಸಲಾಗಿತ್ತು. ಈ ಕುರಿತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳು ಪ್ರತಿಕ್ರಿಯಿಸಿ, ಅರಣ್ಯ ಹಕ್ಕು ಅರ್ಜಿಗಳನ್ನು ಸ್ವೀಕಾರ ಮಾಡುವ ಬಗ್ಗೆ ಗ್ರಾಮ ಮಟ್ಟದ ಸಮಿತಿಗಳಿಗೆ ತರಬೇತಿ ನೀಡಿ ಬಾಕಿ ಇರುವ ಹಾಗೂ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ, ಜನಾಂಗದವರು ವಾಸಿಸುತ್ತಿರುವ ಕಡೂರು ಟೌನ್ ಅಂಬೇಡ್ಕರ್ ನಗರದಲ್ಲಿ ಮಂಜೂರಾಗಿರುವ ಸ್ಮಶಾನ ಭೂಮಿಯನ್ನು ಪುರಸಭೆ ವ್ಯಾಪ್ತಿಗೆ ಬರುವುದಿದ್ದರೆ ಪುರಸಭೆಗೆ ಹಸ್ತಾಂತರಿಸುವಂತೆ ಕಡೂರು ತಹಸೀಲ್ದಾರರಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಉಪವಿಭಾಗಾಧಿಕಾರಿಗಳಾದ ದೇವರಾಜ್, ಕಾಂತರಾಜ್, ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

‘Resolve Scheduled Caste and Scheduled Tribe atrocities cases within time limit’

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...