Home namma chikmagalur chikamagalur ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ
chikamagalurHomeLatest Newsnamma chikmagalur

ಮಂಜೆಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಬಲಪಡಿಸಲು ಸಂಕಲ್ಪ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೂತ್‌ಮಟ್ಟದಿಂದ ಮತ್ತಷ್ಟು ಬಲಪಡಿಸುವ ಮೂಲಕ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ಸಜ್ಜಾಗಬೇಕು ಎಂದು ಕಾಂಗ್ರೆಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ತಿಳಿಸಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ನೂತನ ಜಿಲ್ಲಾಧ್ಯಕ್ಷ ಎಚ್.ಪಿ.ಮಂಜೇಗೌಡ ಅವರಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿದ ಅವರು, ಪಕ್ಷದ ಸಂಘಟನೆಗೆ ಬೂತ್‌ಮಟ್ಟದ ಕಾರ್ಯಕರ್ತರ ಕೊಡುಗೆ ಅತ್ಯಂತ ಮಹತ್ವದ್ದಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ ವತಿಯಿಂದ ನಡೆಯುತ್ತಿರುವ ಸಂಘಟನಾ ಪ್ರಕ್ರಿಯೆಯ ಭಾಗವಾಗಿ ಪಕ್ಷವನ್ನು ತಳಮಟ್ಟದಲ್ಲಿ ಬಲಪಡಿಸುವ ಉದ್ದೇಶ ಹೊಂದಲಾಗಿದೆ. ಯುವಕರು, ವಿದ್ಯಾರ್ಥಿಗಳು ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಸಂಘಟನೆ ರೂಪಿಸಬೇಕಿದೆ. ಜಿಲ್ಲೆಯ ಜನರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲೆಯಲ್ಲಿ ಕಸ್ತೂರಿರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಉದ್ಭವಿಸಿರುವ ಆತಂಕಗಳು, ರೈತರ ಸಮಸ್ಯೆಗಳು ಹಾಗೂ ಮಲೆನಾಡಿನ ಜನರ ಬದುಕಿನ ಮೇಲೆ ಪರಿಣಾಮ ಬೀರುವ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆಗೆ ಭೇಟಿ ನೀಡಿ ಜನರ ಅಹವಾಲುಗಳನ್ನು ಆಲಿಸಿರುವುದು ಹಾಗೂ ಈ ವಿಚಾರವಾಗಿ ವಿಶೇಷ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸಿರುವುದು ಮಹತ್ವದ ಬೆಳವಣಿಗೆ ಎಂದು ಹೇಳಿದರು.

ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಮುಖಂಡರು ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಕಾAಗ್ರೆಸ್ ಪಕ್ಷವು ಜಿಲ್ಲೆಯಲ್ಲಿ ಮತ್ತಷ್ಟು ಬಲಗೊಳ್ಳಬೇಕು. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಂಘಟನಾತ್ಮಕ ಕಾರ್ಯ ಚುರುಕುಗೊಳ್ಳಬೇಕು. ಇದಕ್ಕಾಗಿ ಬೂತ್‌ಮಟ್ಟದ ಕಾರ್ಯಕರ್ತರನ್ನು ಸಜ್ಜುಗೊಳಿಸಿ, ಎರಡನೇ ಹಂತದ ನಾಯಕತ್ವವನ್ನು ಬೆಳೆಸುವ ಅಗತ್ಯವಿದೆ ಎಂದು ಹೇಳಿದರು.

ಕಾಂಗ್ರೆಸ್ ಮುಖಂಡ ಎಂ.ಎಲ್.ಮೂರ್ತಿ ಮಾತನಾಡಿ, ಅಂಶುಮAತ್ ಅವರು ದೀರ್ಘಕಾಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟನಾತ್ಮಕವಾಗಿ ಹಲವು ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಪ್ರತಿಭಟನೆಗಳನ್ನು ನಡೆಸಿದೆ. ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿನಲ್ಲೂ ಅವರ ನೇತೃತ್ವದ ಸಂಘಟನೆ ಪ್ರಮುಖ ಪಾತ್ರ ವಹಿಸಿದೆ ಎಂದರು.

ಪಕ್ಷದಲ್ಲಿ ಭಿನ್ನಾಭಿಪ್ರಾಯಗಳು ಸಹಜವಾಗಿದ್ದು, ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಂಡು ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವ ಮನೋಭಾವ ನಾಯಕರಲ್ಲಿರಬೇಕು. ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಸಿಗದಿದ್ದರೂ ಕಾರ್ಯಕರ್ತರು ನಿರಾಶರಾಗಬಾರದು. ಪಕ್ಷದ ತತ್ವಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟುಕೊಂಡು ಜನಸೇವೆಯಲ್ಲಿ ಮುಂದುವರಿಯಬೇಕು ಎಂದು ಕರೆ ನೀಡಿದರು.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕಾಗಿ ಮಾತ್ರ ಇರುವುದಲ್ಲ. ಜನರಿಗೆ ಉತ್ತಮ ಆಡಳಿತ ಮತ್ತು ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ಕಾರ್ಯನಿರ್ವಹಿಸಬೇಕು. ಪಕ್ಷದ ಹುದ್ದೆ ಸಿಕ್ಕರೂ, ಸಿಗದಿದ್ದರೂ ಜನರಿಗಾಗಿ ಕೆಲಸ ಮಾಡುವ ಮನೋಭಾವ ಕಾರ್ಯಕರ್ತರಲ್ಲಿ ಇರಬೇಕು ಎಂದರು.

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಟೀಕಿಸಿದ ಎಂ.ಎಲ್. ಮೂರ್ತಿ, ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡಬೇಕು. ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಹಿನ್ನೆಲೆಯಲ್ಲಿ ದೇಶಾದ್ಯಂತ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು.

ಕಸ್ತೂರಿರಂಗನ್ ವರದಿಗೆ ಸಂಬAಧಿಸಿದAತೆ ಮಲೆನಾಡು ಭಾಗದ ಜನರಲ್ಲಿ ಇರುವ ಆತಂಕಗಳನ್ನು ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಕಸ್ತೂರಿರಂಗನ್ ವರದಿಯ ಪರಿಣಾಮ, ಪರಿಸರ ಸಂರಕ್ಷಣೆ ಮತ್ತು ಜನರ ಜೀವನೋಪಾಯದ ನಡುವಿನ ಸಮತೋಲನ ಕುರಿತು ಸಮಗ್ರ ಚರ್ಚೆ ಅಗತ್ಯವಿದೆ. ರೈತರು, ಕಾಫಿ ಬೆಳೆಗಾರರು ಹಾಗೂ ಮಲೆನಾಡಿನ ಜನರ ಹಿತಾಸಕ್ತಿಗಳನ್ನು ಪರಿಗಣಿಸಿ ಮುಂದಿನ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಈ ವಿಚಾರದ ಕುರಿತು ಚರ್ಚೆ ನಡೆಯಬೇಕು. ಜನರ ಹಿತಾಸಕ್ತಿಗೆ ಧಕ್ಕೆಯಾಗದ ರೀತಿಯಲ್ಲಿ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ವಿಜಯಕುಮಾರ್,ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪ, ಕೆಪೆಕ್ ಅಧ್ಯಕ್ಷ ಬಿ.ಎಚ್.ಹರೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮೊಹಮ್ಮದ್, ಸಿಡಿಎ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಯಾಜ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Resolve to strengthen Congress under Manje Gowda’s leadership

Share

Leave a comment

Leave a Reply

Your email address will not be published. Required fields are marked *

Don't Miss

ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದುಪಡಿಸಿ

ಚಿಕ್ಕಮಗಳೂರು: ಮಲೆನಾಡಿನ ಜನರ ಬದುಕಿಗೆ ತೊಂದರೆ ಉಂಟುಮಾಡುತ್ತಿರುವ ಕರಾಳ ಅರಣ್ಯ ಕಾಯ್ದೆಗಳನ್ನು ರದ್ದುಪಡಿಸುವುದರ ಜೊತೆಗೆ, ಹಲವು ವರ್ಷಗಳಿಂದ ಭೂಮಿ ಹಾಗೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ರೈತರು, ಕಾರ್ಮಿಕರು, ದಲಿತರು ಹಾಗೂ...

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್‌ಗೆ 6.87 ಕೋಟಿ ರೂ. ನಿವ್ವಳ ಲಾಭ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (ಡಿಸಿಸಿ ಬ್ಯಾಂಕ್) 2025-26ನೇ ಸಾಲಿನ ಮಾರ್ಚ್ ಅಂತ್ಯಕ್ಕೆ 6.87 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, 98.05ರಷ್ಟು ಸಾಲ ವಸೂಲಾತಿ ಸಾಧಿಸಿದೆ ಎಂದು...

Related Articles

ಗಂಜಿ ಗಿರಾಕಿಗಳ ಅಟ್ಟಾಹಾಸಕ್ಕೆ ವೀರೇಂದ್ರ ಬಲಿಪಶು ??

ಸಖಾರಾಯಪಟ್ಟಣ: ಇಲ್ಲಿಗೆ ಸಮೀಪದ ಮುಸ್ಲಪುರ್ ಹಟ್ಟಿಯಲ್ಲಿರುವ ಬಾರ್ ಅಂಡ್ ರೆಸ್ಟೋರೆಂಟ್ ಗೆ 15 ರ ನಡು...

ಎಸ್‌ಐಆರ್‌ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನ

ಚಿಕ್ಕಮಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ...

ಸೌಜನ್ಯ ಪ್ರಕರಣದ ಕುರಿತು ಪಾರದರ್ಶಕ ತನಿಖೆಯಾಗಬೇಕು.

ಚಿಕ್ಕಮಗಳೂರು: ಕೆಪಿಎಸ್‌ಸಿ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಸೂಚನೆಯಂತೆ ಎಸ್‌ಐಟಿ ರಚಿಸಿ ತನಿಖೆಯನ್ನು ಕಾಲಮಿತಿಲ್ಲಿ ಪೂರ್ಣಗೊಳಿಸಬೇಕು....

ರಾಷ್ಟ್ರೀಯ ಹೆದ್ದಾರಿ 173ರ ರಸ್ತೆ ಅಗಲೀಕರಣಕ್ಕೆ ಬೃಹತ್ ಮರಗಳಿಗೆ ಕೊಡಲಿ ಪೆಟ್ಟು

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 173ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹೆಸರಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಶತಮಾನದ...