ಅಜ್ಜಂಪುರ: ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿಯ ರೇವಣ್ಣ ಮತ್ತು ಉಪಾಧ್ಯಕ್ಷರಾಗಿ ಕವಿತಾ ಕೇಶವಮೂರ್ತಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಗೊಳಿಸಲಾಗಿತ್ತು.
ಐದು ವರ್ಷಗಳ ಹಿಂದೆ ಆಸ್ತಿತ್ವಕ್ಕೆ ಬಂದ ಪಟ್ಟಣ ಪಂಚಾಯತಿಗೆ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು, ನಂತರ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಉಪಾಧ್ಯಕ್ಷರ ಅಯ್ಕೆಗೆ ಗ್ರಹಣ ಬಡಿದಿತ್ತು. ಇದರ ಮಧ್ಯೆ ಮೀಸಲಾತಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ತಕರಾರು ಶುರುವಾಗಿ ಕೋರ್ಟ್ ಕದ ತಟ್ಟಲಾಗಿತ್ತು.
ಬಿ.ಸಿ.ಎಂ.ಎ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲು ಎನ್ನಲಾಗಿತ್ತು ಆದರೆ ಶಾಸಕ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಸಿಎಂ ಸ್ಥಾನ ಅಧ್ಯಕ್ಷ ಬೇಡ ಎಂದು ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು ಎಂದು ಬಿಜೆಪಿಯ ರಂಗಸ್ವಾಮಿ ಮತ್ತಿತರರು ಕೋರ್ಟ್ ಬಾಗಿಲು ತಟ್ಟಿದ್ದರು.ಅಂತು ಇಂತು ಕೊನೆಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ.
ಕಾಂಗ್ರೆಸ್ ನವರು ಚುನಾವಣೆಗೆ ಅರ್ಜಿ ಕೂಡ ಸಲ್ಲಿಸಿಲ್ಲ .ಚುನಾವಣೆ ಮುಗಿದ ನಂತರ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ,ಮಾಜಿ ಶಾಸಕರಾದ ಡಿ.ಎಸ್.ಸುರೇಶ್ ಮತ್ತು ಬಿಜೆಪಿಯ ಮುಖಂಡರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.
Revanna as president of Ajjampura town panchayat Kavita as vice-president
Leave a comment