Home namma chikmagalur ajjampura ಅಜ್ಜಂಪುರ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ರೇವಣ್ಣ-ಉಪಾಧ್ಯಕ್ಷರಾಗಿ ಕವಿತಾ
ajjampuraHomeLatest Newsnamma chikmagalur

ಅಜ್ಜಂಪುರ ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ರೇವಣ್ಣ-ಉಪಾಧ್ಯಕ್ಷರಾಗಿ ಕವಿತಾ

Share
Share

ಅಜ್ಜಂಪುರ: ಪಟ್ಟಣ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿಯ ರೇವಣ್ಣ ಮತ್ತು ಉಪಾಧ್ಯಕ್ಷರಾಗಿ ಕವಿತಾ ಕೇಶವಮೂರ್ತಿ ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ಪರಿಶಿಷ್ಟ ಪಂಗಡ ಅಧ್ಯಕ್ಷ ಸ್ಥಾನ ಹಾಗೂ  ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಗೊಳಿಸಲಾಗಿತ್ತು.

ಐದು ವರ್ಷಗಳ ಹಿಂದೆ ಆಸ್ತಿತ್ವಕ್ಕೆ ಬಂದ ಪಟ್ಟಣ ಪಂಚಾಯತಿಗೆ ಚುನಾಯಿತ ಪ್ರತಿನಿಧಿಗಳು ಇರಲಿಲ್ಲ. ಕಳೆದ ಎರಡು ತಿಂಗಳ ಹಿಂದೆ ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆದಿತ್ತು,  ನಂತರ ಪಟ್ಟಣ ಪಂಚಾಯತಿಗೆ ಅಧ್ಯಕ್ಷ ಉಪಾಧ್ಯಕ್ಷರ ಅಯ್ಕೆಗೆ ಗ್ರಹಣ ಬಡಿದಿತ್ತು. ಇದರ ಮಧ್ಯೆ ಮೀಸಲಾತಿಗೆ ಸಂಬಂಧಿಸಿದಂತೆ ಮತ್ತೊಮ್ಮೆ ತಕರಾರು ಶುರುವಾಗಿ ಕೋರ್ಟ್ ಕದ ತಟ್ಟಲಾಗಿತ್ತು.

ಬಿ.ಸಿ.ಎಂ.ಎ ಅಧ್ಯಕ್ಷ ಸ್ಥಾನ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲು ಎನ್ನಲಾಗಿತ್ತು ಆದರೆ ಶಾಸಕ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಸಿಎಂ ಸ್ಥಾನ ಅಧ್ಯಕ್ಷ ಬೇಡ ಎಂದು ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು ಎಂದು ಬಿಜೆಪಿಯ ರಂಗಸ್ವಾಮಿ ಮತ್ತಿತರರು ಕೋರ್ಟ್ ಬಾಗಿಲು ತಟ್ಟಿದ್ದರು.ಅಂತು ಇಂತು ಕೊನೆಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ.

ಕಾಂಗ್ರೆಸ್ ನವರು ಚುನಾವಣೆಗೆ ಅರ್ಜಿ ಕೂಡ ಸಲ್ಲಿಸಿಲ್ಲ .ಚುನಾವಣೆ ಮುಗಿದ ನಂತರ ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ್ ಪೂಜಾರಿ ,ಮಾಜಿ ಶಾಸಕರಾದ ಡಿ.ಎಸ್.ಸುರೇಶ್ ಮತ್ತು ಬಿಜೆಪಿಯ ಮುಖಂಡರು ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿದರು.

Revanna as president of Ajjampura town panchayat Kavita as vice-president

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...