Home namma chikmagalur chikamagalur ಕಂದಾಯ-ಅರಣ್ಯ ಇಲಾಖೆ ಭೂಮಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ
chikamagalurHomeLatest Newsnamma chikmagalur

ಕಂದಾಯ-ಅರಣ್ಯ ಇಲಾಖೆ ಭೂಮಿ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಧರಣಿ

Share
Share

ಚಿಕ್ಕಮಗಳೂರು: ಕಂದಾಯ ಮತ್ತು ಅರಣ್ಯ ಇಲಾಖೆ ಭೂಮಿ ಸಮಸ್ಯೆ ಶೀಘ್ರ ಪರಿಹರಿಸುವಂತೆ ಒತ್ತಾಯಿಸಿ ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಬುಧವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ಬೆಳೆಗಾರರ ಒಕ್ಕೂಟ, ವಿವಿಧ ಬೆಳೆಗಾರರ ಸಂಘಟನೆಗಳು, ದಲಿತ, ಕನ್ನಡ, ರೈತ ಸಂಘಟನೆಗಳ ನೇತೃತ್ವದಲ್ಲಿ ನಗರದ ತಾಲ್ಲೂಕು ಕಚೇರಿ ಎದುರು ಜಮಾಯಿಸಿದ್ದ ಸಾವಿರಾರು ರೈತರು, ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರಿಗಳ ವಿರುದ್ಧ ಸಾಮೂಹಿಕ ಘೋಷಣೆ ಮೊಳಗಿಸಿದರು.

ಷನಾಗರಿಕ ರೈತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಎಸ್. ವಿಜಯಕುಮಾರ್ ಮಾತನಾಡಿ, ‘ಜಂಟಿ ಸರ್ವೆಯಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಬಾಕಿ ಇರುವ ಆಶ್ರಯ ನಿವೇಶನದ ಕಡತಗಳ ಪ್ರಕ್ರಿಯೆ ಅಂತಿಮಗೊಳಿಸಿ ಬಡವರಿಗೆ ನಿವೇಶನ ನೀಡಬೇಕು’ ಎಂದು ಆಗ್ರಹಿಸಿದರು.

‘ಈಗಾಗಲೇ ಪರಿಭಾವಿತ ಅರಣ್ಯ ವಿಷಯದಲ್ಲಿ ಸುಪ್ರೀಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಜನವಸತಿ, ಶಾಲೆ, ಆಟದ ಮೈದಾನ, ಆಸ್ಪತ್ರೆ ಸೇರಿ ಜನ ಬಳಸುತ್ತಿರುವ ಸ್ಥಳಗಳಿದ್ದರೆ ಅವುಗಳನ್ನು ಪರಿಭಾವಿತ ಅರಣ್ಯ ಪಟ್ಟಿಯಿಂದ ಕೈಬಿಡಬೇಕು. ಈ ಸಂಬಂಧ ಎಸ್‌ಐಟಿ ರಚನೆಯಾಗಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ’ ಎಂದರು.

ಜನ, ಜನವಸತಿ ಮತ್ತು ರೈತರ ಭೂಮಿಯನ್ನು ತರಾತುರಿಯಲ್ಲಿ ಡೀಮ್ಸ್ ಅರಣ್ಯ ಪಟ್ಟಿ ಮಾಡಿ ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸುವ ಅಪಾಯಗಳು ಹೆಚ್ಚಿವೆ. ಆದ್ದರಿಂದ ಕೂಡಲೇ ಅಧಿಕಾರಿಗಳು ಎಚ್ಚೆತ್ತು ಸಮರ್ಪಕವಾದ ಸರ್ವೆ ಕಾರ್ಯ ನಡೆಸಬೇಕು. ಜನವಸತಿ, ಶಾಲೆ, ಆಸ್ಪತ್ರೆ, ಅಂಗನವಾಡಿ, ಸ್ಮಶಾನ ಮತ್ತಿತರೆ ಸಾರ್ವಜನಿಕ ಉದ್ದೇಶಕ್ಕೆ ಭೂಮಿ ಕಾಯ್ದಿರಿಸಬೇಕು. ಉಳಿದ ಜಾಗವನ್ನು ಬೇಕಿದ್ದರೆ ಪರಿಭಾವಿತ ಅರಣ್ಯಕ್ಕೆ ಸೇರಿಸಿಕೊಳ್ಳಲಿ ಎಂದು ಹೇಳಿದರು.

ಸೆಕ್ಷನ್ 4 ಘೋಷಣೆ ಮಾಡಿರುವ ಜಾಗಗಳ ಗೊಂದಲ ಇತ್ಯರ್ಥಕ್ಕೆ ಅರಣ್ಯ ವ್ಯವಸ್ಥಾಪನಾ ಅಧಿಕಾರಿ (ಎಫ್‌ಎಸ್‌ಒ) ನೇಮಿಸಲಾಗಿದೆ. ಅವರು ನಿರ್ಧಾರ ಕೈಗೊಂಡು ಅಧಿಸೂಚನೆ ಹೊರಡಿಸಲು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಡತ ಸಲ್ಲಿಸಿದ್ದಾರೆ. ಆದರೆ, 5 ವರ್ಷಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಸಮಸ್ಯೆ ಯಥಾಸ್ಥಿತಿಯಲ್ಲಿ ಇರುವಂತೆ ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ ಸಂಚಾಲಕ ಕೆ.ಕೆ. ರಘು, ಮಹೇಶ್ ಕೆರೆಮಕ್ಕಿ, ಲೋಕೇಶ್, ಕುಮಾರಸ್ವಾಮಿ, ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಬಹುಜನ ಸಮಾಜ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಅಲ್ಲೂರು ಸುರೇಶ್, ರತೀಶ್, ಕನ್ನಡ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಸಿ. ರಾಜೇಗೌಡ ಭಾಗವಹಿಸಿದ್ದರು. ತಹಶೀಲ್ದಾ‌ರ್ ರೇಷ್ಮಾ ಶೆಟ್ಟಿ ಅವರಿಗೆ ಮುಖಂಡರು ಮನವಿ ಸಲ್ಲಿಸಿದರು.

Revenue-Forest Department holds protest demanding resolution of land issue

Share

Leave a comment

Leave a Reply

Your email address will not be published. Required fields are marked *

Don't Miss

ಮೂರು ವರ್ಷಗಳ ಅವಧಿಯಲ್ಲಿ ಮೂಲ ಸೌಕರ್ಯಕ್ಕೆ ಆದ್ಯತೆ

ಚಿಕ್ಕಮಗಳೂರು: ಮೂರು ವರ್ಷಗಳ ಅವಧಿಯಲ್ಲಿ ಕ್ಷೇತ್ರದ ರಸ್ತೆ ಅಭಿವೃದ್ಧಿ, ಸೇತುವೆ, ಬಸ್ ನಿಲ್ದಾಣ ನಿರ್ಮಾಣ ಸೇರಿ ಮೂಲ ಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯಲ್ಲೂ ಮುಂಚೂಣಿ ಸಾಧಿಸಲಾಗಿದೆ ಎಂದು...

ಚಿಕಿತ್ಸೆ ಸಿಗದೆ 24 ಗಂಟೆಗಳ ಕಾಲ ಆಂಬುಲೆನ್ಸ್‌ನಲ್ಲೇ ನರಕಯಾತನೆ

ಚಿಕ್ಕಮಗಳೂರು: ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಹಾಗೂ ಅತ್ಯಂತ ಕರುಣಾಜನಕ ಘಟನೆಯೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನಿಗೆ ವಿವಿಧ ಆಸ್ಪತ್ರೆಗಳಲ್ಲಿ ಬೆಡ್ ಮತ್ತು ಸರಿಯಾದ ಸಮಯಕ್ಕೆ...

Related Articles

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ರೈತರು ಎದುರಿಸುತ್ತಿರುವ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ...

ರಸ್ತೆ ಅಪಘಾತದಲ್ಲಿ ಗಾಯವಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಕೊಪ್ಪ: ರಸ್ತೆ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಹಮ್ಮದ್ ರಫೀಕ್ ಎಂಬ 32 ವರ್ಷದ ಯುವಕ ದುರಂತ...

ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನ

ಎನ್.ಆ‌ರ್.ಪುರ: ತೋಟದ ಗೋಡೋನ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಅಡಿಕೆ ಕಳ್ಳತನವಾಗಿರುವ ಘಟನೆ ಬಾಳೆಹೊನ್ನೂರು ಪೊಲೀಸ್ ಠಾಣಾ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ

ಚಿಕ್ಕಮಗಳೂರು: ಬೇಲಿ ದಾಟುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿಯಾಗಿರುವ ಘಟನೆ ಕಡೂರು...